ಬೆಂಗಳೂರು: ವಿಧಾನಸಭೆ ಯಿಂದ ವಿಧಾನ ಪರಿಷತ್‍ನ 11 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿ ಗಳನ್ನು ಪ್ರಕಟಿಸಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್, ಅರವಿಂದ ಕುಮಾರ್ ಎಸ್.ಅರಳಿ ಮತ್ತು ಕೆ.ಹರೀಶ್ ಕುಮಾರ್ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ. ಇನ್ನು ಬಿಜೆಪಿ ತನ್ನ ಪಾಲಿಗೆ ಬರುವ 5 ಸ್ಥಾನಕ್ಕೆ ಕೆ.ಪಿ.ನಂಜುಂಡಿ, ತೇಜಸ್ವಿನಿಗೌಡ, ಎಸ್.ರುದ್ರೇ ಗೌಡ, ಎನ್.ರವಿಕುಮಾರ್ ಹಾಗೂ ರಘುನಾಥ್ ಮಲ್ಕಾಪುರೆ ಅವರನ್ನು ಆಯ್ಕೆ ಮಾಡಿದೆ. ಜೆಡಿಎಸ್ ತನ್ನ ಪಾಲಿಗೆ ದಕ್ಕುವ ಎರಡು ಸ್ಥಾನಗಳಿಗೆ ಬಿ.ಎಂ.ಫಾರೂಖ್ ಮತ್ತು ನಿವೃತ್ತ ಅಧಿಕಾರಿಗಳಾದ ಗೋನಾಳ್ ಭೀಮಪ್ಪ ಅಥವಾ ಸುಬ್ರಹ್ಮಣ್ಯ ಅವರನ್ನು ಸ್ಪರ್ಧೆಗಿಳಿಸಲು ನಿರ್ಧರಿಸಿದೆ.
ಜೂನ್‍ನಲ್ಲಿ ತೆರವಾಗಲಿರುವ ರಾಜ್ಯ ವಿಧಾನ ಪರಿ ಷತ್‍ನ 11 ಸ್ಥಾನಗಳಿಗೆ ಚುನಾವಣೆ ನಡೆಯು ತ್ತಿದೆ. ವಿಧಾನಸಭೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಗೆದ್ದಿದೆ. ವಿಧಾನಸಭೆಯಲ್ಲಿರುವ ಸಂಖ್ಯಾಬಲಕ್ಕೆ ಅನುಗುಣವಾಗಿ ಬಿಜೆಪಿ 5, ಕಾಂಗ್ರೆಸ್ 4 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು.
ಮೈಸೂರು