ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸಮಾಲೋಚನೆ
ಕೊಡಗು

ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸಮಾಲೋಚನೆ

April 3, 2019

ವಿರಾಜಪೇಟೆ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಎಚ್.ವಿಜಯ ಶಂಕರ್ ಅವರು ವಿರಾಜಪೇಟೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಚುನಾವಣೆಯ ಮುಂದಿನ ಬೆಳವಣಿಗೆ ಬಗ್ಗೆ ಸಮಾಲೋಚನೆ ನಡೆಸಿದರು.

ಬಳಿಕ ಪಟ್ಟಣದ ತೆಲುಗರ ಬೀದಿಯಲ್ಲಿರುವ ಕೆಲವು ಆಪ್ತರ ಮನೆಗೆ ಭೇಟಿ ನೀಡಿ ಸಹಕಾರ ನೀಡುವಂತೆ ಕೇಳಿಕೊಂಡರು. ತಮ್ಮ ಅಭ್ಯರ್ಥಿ ವಿಜಯ ಶಂಕರ್ ಆಗಮಿಸಿದ್ದ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್, ಕಾನೂನು ವಿಭಾಗದ ಡಿ.ಸಿ.ಧ್ರುವ ಕುಮಾರ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಾಂ, ನಗರ ಅಧ್ಯಕ್ಷ ಜಿ.ಜಿ. ಮೋಹನ್, ಕಾರ್ಯದರ್ಶಿ ಶಶಿಧರನ್, ಪ.ಜಾ.ಪಂಗಡದ ಅಧ್ಯಕ್ಷ ವಿ.ಕೆ.ಸತೀಶ್ ಕುಮಾರ್, ಪಂಚಾಯಿತಿ ಸದಸ್ಯರಾದ ಸಿ.ಕೆ.ಪೃಥ್ವಿನಾಥ್, ಪಟ್ಟಡ ರಂಜಿ ಪೂಣಚ್ಚ, ಡಿ.ಪಿ.ರಜೇಶ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರುಗಳು ಭಾಗವಹಿಸಿದ್ದರು.

Translate »