ಜಿಲ್ಲೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ
ಕೊಡಗು

ಜಿಲ್ಲೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ

December 12, 2018

ಮಡಿಕೇರಿ:  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿ ದ್ದಂತೆ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದ ಹಿನ್ನೆಲೆ ಮಡಿ ಕೇರಿ ನಗರ ಕಾಂಗ್ರೆಸ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಗ ರದ ಇಂದಿರಾಗಾಂಧಿ ವೃತ್ತ ಚೌಕಿಯಲ್ಲಿ ಕಾಂಗ್ರೆಸ್ ಪರ ಘೋಷಣೆ ಕೂಗಿದ ಮುಖಂಡರು ಹಾಗೂ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಜಯಕಾರ ಹಾಕಿದರು.
ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್ ಮಾತನಾಡಿ, ರಾಜಸ್ಥಾನ, ಛತ್ತೀಸ್ ಗಢ ಮತ್ತು ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಮುಂದೆ ದೇಶಾ ದ್ಯಂತ ಈ ಗೆಲುವಿನ ಟ್ರೆಂಡ್ ಮುಂದುವರೆ ಯಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಜನಸಾಮಾನ್ಯರಿಗೆ ಸಂಕಷ್ಟವನ್ನು ತಂದೊ ಡ್ಡಿದ್ದ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಯಿಂದಾಗಿ ಮತದಾರರು ಕಾಂಗ್ರೆಸ್ ಕೈ ಹಿಡಿದಿದ್ದಾರೆ ಎಂದು ಅಭಿ ಪ್ರಾಯಪಟ್ಟರು. ಕಾಂಗ್ರೆಸ್ ನಗರಾಧ್ಯಕ್ಷ ಕೆ.ಯು.ಅಬ್ದುಲ್ ರಜಾóಕ್ ಮಾತನಾಡಿ, ಕಾಂಗ್ರೆಸ್ ಮುಕ್ತ ಭಾರತವನ್ನಾಗಿ ಮಾಡುವ ಹಗಲುಗನಸು ಕಾಣು ತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ ಎಂದರು. ರಾಹುಲ್ ಗಾಂಧಿ ಅವರ ಕೈ ಮತ್ತಷ್ಟು ಬಲಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರಸಭಾ ಸದಸ್ಯರುಗಳಾದ ಚುಮ್ಮಿ ದೇವಯ್ಯ, ವೆಂಕಟೇಶ್, ಪಕ್ಷದ ಪ್ರಮು ಖರಾದ ಚಂದ್ರಶೇಖರ್, ಟಿ.ಎಂ.ಅಯ್ಯಪ್ಪ, ಚಿಮ್ಮುಣಿರ ಶ್ಯಾಂ, ಸದಾ ಮುದ್ದಪ್ಪ, ಉಸ್ಮಾನ್, ಮುನೀರ್, ಯತೀಶ್, ಪಾರ್ವತಿ, ಪ್ರೇಮ, ನಾಣಯ್ಯ ಮತ್ತಿತರರು ಈ ಸಂದರ್ಭ ಹಾಜರಿದ್ದರು.

ಗೋಣಿಕೊಪ್ಪ ವರದಿ: ಮಂಗಳವಾರ ಪ್ರಕಟಗೊಂಡ ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ 3 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಮತ್ತು ಗೋಣಿ ಕೊಪ್ಪಲು ನಗರ ಕಾಂಗ್ರೆಸ್ ಸಮಿತಿ ವತಿ ಯಿಂದ ಗೋಣಿಕೊಪ್ಪಲು ಬಸ್ ನಿಲ್ದಾಣ ದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಮಿ ತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ನಡೆದ ವಿಜಯೋ ತ್ಸವದಲ್ಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡದಲ್ಲಿ ಕಾಂಗ್ರೆಸ್ ಅತೀ ಹೆಚ್ಚು ಸ್ಥಾನಗಳಿಸಿ ವಿಜಯ ಪತಾಕೆ ಹಾರಿ ಸಿದ ಕಾರಣದಿಂದ ಇಲ್ಲಿನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಜಯಘೋಷಗಳನ್ನು ಕೂಗುತ್ತಾ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ತೀತಿರ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಪಕ್ಷ ಎಂದೂ ಸಾಯುವುದಿಲ್ಲ. ಇದರ ಅಸ್ತಿತ್ವ ಸದಾ ಜೀವಂತವಾಗಿರುತ್ತದೆ ಎಂಬುದಕ್ಕೆ ಇಂದಿನ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಕಾಂಗ್ರೆಸ್ ಪಕ್ಷದ ಅಗತ್ಯತೆ ಈ ದೇಶಕ್ಕಿದೆ. ಈ ಕಾರಣದಿಂದಲೇ ಪಕ್ಷ ಸದಾ ಜನ ಪರವಾಗಿರುತ್ತದೆ. ಜನರೂ ಕೂಡ ಇದನ್ನೆ ಬಯಸುತ್ತಿದ್ದು, ಕಾಂಗ್ರೆಸ್‍ನಿಂದ ಮಾತ್ರ ಸದೃಢ ಸರಕಾರ ಸಾಧ್ಯ ಎಂಬುದು ಜನರ ಆಶಯವಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಆಪಟ್ಟೀರ ಟಾಟು ಮೊಣ್ಣಪ್ಪ ಮಾತನಾಡಿ, 5 ರಾಜ್ಯ ಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಶೂನ್ಯ ಸಾಧನೆ ಮಾಡಿರುವುದು ಅದರ ಪತನಕ್ಕೆ ಮುನ್ನುಡಿ ಬರೆದಂತಾಗಿದೆ. ಬಿಜೆಪಿಯ ಕಪಟ ರಾಜಕೀಯ ದೇಶದಾದ್ಯಂತ ಜನ ತೆಗೆ ಮನವರಿಕೆಯಾಗಿದ್ದು, ಇದೀಗ ಬಿಜೆಪಿ ಮುಕ್ತವಾದ ನವ ಭಾರತ ನಿರ್ಮಾಣದ ಹೊಸ ಪರ್ವ ಆರಂಭಗೊಂಡಂತಾಗಿದೆ ಎಂದು ಹೇಳಿದರು.

ವಿಜಯೋತ್ಸವದಲ್ಲಿ ಪಕ್ಷದ ಮುಖಂಡ ರಾದ ಬಿ.ಎನ್. ಪ್ರಕಾಶ್, ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಕೊಲ್ಲಿರ ಬೋಪಣ್ಣ, ಶಾಜಿ ಅಚ್ಯುತ್ತನ್, ಖಾಲಿದ್, ಪಿ.ಜಿ.ರಾಜ ಶೇಖರ್, ಅಬ್ದುಲ್ ಸಮದ್ ಸೇರಿದಂತೆ ಕಾಂಗ್ರೆಸ್ ಪ್ರಮುಖರು ಮತ್ತು ಕಾರ್ಯ ಕರ್ತರು ಪಾಲ್ಗೊಂಡಿದ್ದರು.

Translate »