ಚಾ.ನಗರಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಂಸದ ಆರ್.ಧ್ರುವನಾರಾಯಣ್
ಚಾಮರಾಜನಗರ

ಚಾ.ನಗರಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಂಸದ ಆರ್.ಧ್ರುವನಾರಾಯಣ್

June 7, 2020

ಚಾಮರಾಜನಗರ, ಜೂ. 6- ಕಾಂಗ್ರೆಸ್ ಸರ್ಕಾರದ ಅವಧಿ ಯಲ್ಲಿ ಜಿಲ್ಲೆಗೆ ಅಪಾರ ಕೊಡುಗೆ ನೀಡಲಾಗಿದೆ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು.

ನÀಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದÀರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭವನ್ನು ಕೊರೊನಾ ಹಿನ್ನೆಲೆ ಮುಂದೂಡಲಾಗಿದೆ ಎಂದ ಅವರು, ಬಿಜೆಪಿ ಸರ್ಕಾರದ ಕಾರ್ಯಕ್ರಮಗಳು ಎಷ್ಟರ ಮಟ್ಟಿಗೆ ಜನರಿಗೆ ತಲುಪಿದೆ ಎಂಬ ಮಾಹಿತಿಯನ್ನು ಸರ್ಕಾರಕ್ಕೆ ತಿಳಿಸುವ ಕೆಲಸ ಮಾಡಲಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಬಿಜೆಪಿ ಸರ್ಕಾರ ಯೋಜನೆಗಳ ಬಗ್ಗೆ ತಿಳಿದು ಸರ್ಕಾರದ ಸುಳ್ಳು ಭರವಸೆ ಗಳನ್ನು ಶ್ರೀಸಾಮಾನ್ಯರಿಂದ ಮಾತನಾಡಿಸುವ ಮೂಲಕ ಬಿಜೆಪಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದರು.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಮೇಲೆ ಪಕ್ಷದ ಸಾಮಾಜಿಕ ಜಾಲತಾಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಜನಪರ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸುವ ಕೆಲಸ ಮಾಡಬೇಕಿದೆ. ಪಕ್ಷದ ಯುವಕರು ಕೂಡ ಬಹಳ ಚೆನ್ನಾಗಿ ಮಾಡುತ್ತಿದ್ದಾರೆ. ಅವರಿಗೆ ನಾವೆಲ್ಲರೂ ಉತ್ತೇಜನ ಕೊಡಬೇಕಿದೆ ಎಂದು ತಿಳಿಸಿದರು.

ಜಿಲ್ಲೆಯ ಪ್ರತಿ ಗ್ರಾಪಂಗೊಬ್ಬರನ್ನು ವೀಕ್ಷಕರು, ಸಾಮಾಜಿಕ ಜಾಲತಾಣ ಪ್ರಮುಖರನ್ನು ನೇಮಕ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಇದೇ ವೇಳೆ ಸಲಹೆ ನೀಡಿದ ಅವರು ಈಗಾಗಲೇ ಕೆಲವು ಗ್ರಾಪಂಗಳಲ್ಲಿ ಸಾಮಾಜಿಕ ಜಾಲತಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಪಕ್ಷದ ಸಂಘಟನೆಯಲ್ಲಿ ತೊಡಗಲು ಈ ತರಬೇತಿ ಯಶಸ್ವಿಯಾಗಿ ಸಾಗಲಿ ಎಂದು ಆಶಿಸಿದರು.

ಡಿಸಿಸಿಯಿಂದ ಅಭಿನಂದನೆ: ಜೂ.16ರಂದು ನಡೆಯುವ ರಾಜ್ಯ ಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಅವರಿಗೆ ಹಾಗೂ ಅವರನ್ನು ಆಯ್ಕೆ ಮಾಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‍ಗಾಂಧಿ, ಕೆ.ಸಿ.ವೇಣುಗೋಪಾಲ್‍ಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಶಾಸಕ ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯ ಕ್ರಮದಲ್ಲಿ ಪಕ್ಷದ ವೀಕ್ಷಕಿ ಮಲ್ಲಾಜಮ್ಮ, ವಸಂತಿ, ಐಶ್ವರ್ಯ, ಪಲ್ಲವಿ, ಅಕ್ಬರಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪದ್ಮಾ, ಜಿಪಂ ಸದಸ್ಯ ಕೆ.ಪಿ. ಸದಾಶಿವಮೂರ್ತಿ, ಮಾಜಿ ಚೂಡಾ ಅಧ್ಯಕ್ಷ ಸೈಯದ್ ಆರೀಫ್, ಎಪಿಎಂಸಿ ಅಧ್ಯಕ್ಷ ನಾಗೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹ ಮ್ಮದ್ ಅಸ್ಗರ್, ಗುರುಸ್ವಾಮಿ ಇತರರಿದ್ದರು.

Translate »