ಮೈಸೂರಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ
ಮೈಸೂರು

ಮೈಸೂರಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ

December 31, 2018

ಮೈಸೂರು, ಡಿ.30(ಆರ್‍ಕೆಬಿ)- ಮೈಸೂ ರಿನ ದಾಸಪ್ಪ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸೇವಾದಳದ ಆಶ್ರಯದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ ಮಾತನಾಡಿ, 60 ವರ್ಷ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷಗಳು ಪದೇ ಪದೆ ಬೊಬ್ಬೆ ಹೊಡೆ ಯುತ್ತಿರುತ್ತವೆ. 65 ವರ್ಷಗಳ ಹಿಂದೆ 32 ಕೋಟಿ ಇದ್ದ ದೇಶದ ಜನಸಂಖ್ಯೆ ಇಂದು 128 ಕೋಟಿಗೆ ತಲುಪಿದೆ. ಕಾಂಗ್ರೆಸ್ ತನ್ನ ಆಡಳಿತ ಅವಧಿಯಲ್ಲಿ ಕೈಗೊಂಡ ಅನೇಕ ಜನಪರ ಕಾರ್ಯಕ್ರಮಗಳಿಂದಾಗಿ ಇಂದು ದೇಶದ ಅಷ್ಟು ಜನರಿಗೂ ಆಹಾರ ಭದ್ರತೆ ಲಭಿಸಿದೆ ಎಂದು ಹೇಳಿದರು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾ ವಣೆಯಲ್ಲಿ 3 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ವನ್ನು ಜನತೆ ಮತ್ತೆ ಅಧಿಕಾರಕ್ಕೆ ತಂದಿ ದ್ದಾರೆ. ಇದು ಮುಂದಿನ 2019ರ ಲೋಕ ಸಭಾ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿ ಸರ್ಕಾರವನ್ನು ಧಿಕ್ಕರಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ಎಂಬು ದಕ್ಕೆ ನಿದರ್ಶನವಾಗಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ಮೈಸೂರು ಕ್ಷೇತ್ರದಲ್ಲಿ ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಿದರೂ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿ ನಿಂದ ಕೆಲಸ ಮಾಡಬೇಕಾಗಿದೆ ಎಂದರು.

ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಮಾತನಾಡಿ, ರಾಜ್ಯದಲ್ಲಿ ಏಕತೆಗೆ ಧಕ್ಕೆ ತರುವ ಭಯೋತ್ಪಾದನೆ, ಭ್ರಷ್ಟಾಚಾರ ತಡೆಗಟ್ಟಲು ಕಾಂಗ್ರೆಸ್ ಪಕ್ಷ ಬಹಳ ಹೋರಾಟ ನಡೆ ಸಿದೆ. ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವ ದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಶಕ್ತಿಮೀರಿ ಶ್ರಮಿಸ ಬೇಕಾಗಿದೆ ಎಂದು ಹೇಳಿದರು.

ಮೈಸೂರು ಕಾಂಗ್ರೆಸ್‍ಗಿರಲಿ: ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಈಶ್ವರ ಚಕ್ಕಡಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಹೊಂದಾಣಿಕೆಯಡಿ 12 ಕ್ಷೇತ್ರಗಳನ್ನು ಜೆಡಿಎಸ್ ವರಿಷ್ಠರು ಕೇಳಿ ದ್ದಾರೆ. ಆದರೆ ಮೈಸೂರು ಕ್ಷೇತ್ರ ಕಾಂಗ್ರೆಸ್‍ಗೇ ಇರಬೇಕು. ಕಾಂಗ್ರೆಸ್‍ನ ಅಧಿಕೃತ ಅಭ್ಯರ್ಥಿಗೇ ಟಿಕೆಟ್ ನೀಡಬೇಕು ಎಂದು ಪ್ರಸ್ತಾಪಿಸಿ ದಾಗ, ಕಾರ್ಯಕರ್ತರು ಮುಖಂಡರು ಇದಕ್ಕೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ವೆಂಕಟ ಸುಬ್ಬಯ್ಯ, ಎಸ್.ಶಿವನಾಗಪ್ಪ, ಕೆಪಿಸಿಸಿ ಸದಸ್ಯರಾದ ಅಕ್ಬರ್ ಅಲಿ, ಸೇವಾದಳ ರಾಜ್ಯ ಪದಾಧಿಕಾರಿ ಶಂಕರಮೂರ್ತಿ, ಕಾಂಗ್ರೆಸ್ ಕಾರ್ಮಿಕ ಮಹಿಳಾ ವಿಭಾಗದ ಅಧ್ಯಕ್ಷೆ ಅಮ್ರೀನ್ ತಾಜ್, ಮುಖಂಡರಾದ ಸುಶೀಲಾ ಕೇಶವ ಮೂರ್ತಿ, ಮಲ್ಲಿಗೆ ವೀರೇಶ್, ಡೈರಿ ವೆಂಕ ಟೇಶ್ ಇನ್ನಿತರರು ಪಾಲ್ಗೊಂಡಿದ್ದರು.

Translate »