ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ  ಹೊಂದಾಣಿಕೆ ನಿರ್ಧಾರ
ದೇಶ-ವಿದೇಶ

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ ಹೊಂದಾಣಿಕೆ ನಿರ್ಧಾರ

July 23, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಸೋಲನುಭವಿಸಿದ ಕಾಂಗ್ರೆಸ್, ಪ್ರಧಾನಿ ಮೋದಿ ಅವರನ್ನು ಮಣಿಸಲು 2019ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದೆ.

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿಯವರು ಅಧಿಕಾರ ಸ್ವೀಕರಿಸಿದ ನಂತರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಚಿಸಲಾದ 23 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಭೆ ಇಂದು ನವದೆಹಲಿ ಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು, ತಳ ಮಟ್ಟದಿಂದ ಪಕ್ಷವನ್ನು ಸಂಘಟಿಸ ಬೇಕಾದ ದೊಡ್ಡ ಸವಾಲು ನಮ್ಮ ಮುಂದಿದೆ. ಪ್ರತೀ ಕ್ಷೇತ್ರ ದಲ್ಲೂ ನಮ್ಮ ವಿರುದ್ಧ ಮತ ಚಲಾಯಿಸುವ ಮತದಾರರ ವಿಶ್ವಾಸವನ್ನು ಗಳಿಸಬೇಕಾಗಿರುವುದು ಅತ್ಯಗತ್ಯವಾಗಿದ್ದು, ಈ ಕೆಲಸವನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಮಾಡಬೇಕಾಗಿದೆ ಎಂದರು. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಿವಾ ದಾತ್ಮಕ ಹೇಳಿಕೆಗಳನ್ನು ನೀಡದಂತೆ ಪಕ್ಷದ ನಾಯಕರು ಗಳಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ ನೀಡಿದರು.

ಬಿಜೆಪಿಯಿಂದ ತುಳಿತಕ್ಕೊಳಗಾದ ದಲಿತರು ಹಾಗೂ ಬಡವರ ಪರ ಕಾಂಗ್ರೆಸ್ ಹೋರಾಡಬೇಕಾಗಿದೆ. ದೇಶದ ವರ್ತಮಾನ ಹಾಗೂ ಭವಿಷ್ಯದ ಜವಾಬ್ದಾರಿ ಕಾಂಗ್ರೆಸ್ ನಲ್ಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅನುಭವ ಮತ್ತು ಸಾಮಥ್ರ್ಯವುಳ್ಳವರ ಸಂಸ್ಥೆಯಾಗಿದ್ದು, ಭೂತ ಕಾಲ ಮತ್ತು ಭವಿಷ್ಯ ಕಾಲದ ನಡುವಿನ ಸೇತುವೆ ಯಾಗಿದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಮಾತನಾಡಿದ ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಬಡ ಜನತೆ ಭಯ ಹಾಗೂ ಹತಾಶೆಯಿಂದ ಜೀವನ ನಡೆಸುವ ವಾತಾವರಣ ದೇಶದಲ್ಲಿ ನಿರ್ಮಾಣವಾಗಿದೆ. ಈ ಕುರಿ ತಂತೆ ನಾವು ಎಚ್ಚರಿಕೆ ವಹಿಸಬೇಕು. ನರೇಂದ್ರ ಮೋದಿ ಯವರ ವಾಕ್ಚಾತುರ್ಯವು ಕೇಂದ್ರ ಸರ್ಕಾರದ ಪತನ ಆರಂಭವಾಗಿರುವುದನ್ನು ಸೂಚಿಸಿದೆ. ಅಲ್ಲದೇ ಅದು ತನ್ನ ಹತಾಶ ಮನಃಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ನಾವು ಒಗ್ಗಟ್ಟಾಗಿ ಕೆಲಸ ಮಾಡಲು ಬದ್ಧವಾಗಿದ್ದೇವೆ. ಪ್ರಜಾ ಪ್ರಭುತ್ವವನ್ನು ರಕ್ಷಿಸುವ ಕೆಲಸಕ್ಕೆ ರಾಹುಲ್ ಗಾಂಧಿಯವ ರೊಂದಿಗೆ ಕೈಜೋಡಿಸುತ್ತೇವೆ ಎಂದರು.

Translate »