ತಮಿಳುನಾಡಿಗೆ ನೀರು ಹರಿಸದಂತೆ ಕಾಂಗ್ರೆಸ್ ಒತ್ತಾಯ
ಮೈಸೂರು

ತಮಿಳುನಾಡಿಗೆ ನೀರು ಹರಿಸದಂತೆ ಕಾಂಗ್ರೆಸ್ ಒತ್ತಾಯ

October 1, 2021

ಮೈಸೂರು,ಸೆ.30(ಎಂಟಿವೈ)- ಕಾವೇರಿ ಕಣಿವೆ ಭಾಗದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಕ್ಷೀಣಿಸಿದ್ದರೂ, ತಮಿಳುನಾಡಿಗೆ 70 ಟಿಎಂಸಿ ನೀರು ಬಿಡುವÀಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶಿಸಿದ್ದರೂ ಯಾವುದೇ ಕಾರಣಕ್ಕೂ ನೀರು ಬಿಡದಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಒತ್ತಾಯಿಸಿದ್ದಾರೆ.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕಾವೇರಿ ಭಾಗದ 4 ಜಲಾಶಯಗಳಲ್ಲಿ ಕೇವಲ 66 ಟಿಎಂಸಿ ನೀರು ಮಾತ್ರ ಸಂಗ್ರಹ ವಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸ ಬಾರದು ಎಂದರು. ಸೆ.27 ರಂದು ಮಂಡಳಿ ಸಭೆ ನಡೆಸಿದ್ದು, ಬಾಕಿ ಇರುವ 50 ಹಾಗೂ ಅಕ್ಟೋಬರ್ ತಿಂಗಳ ಕೋಟಾ 20 ಸೇರಿ ಒಟ್ಟು 70 ಟಿಎಂಸಿ ನೀರು ಹರಿಸುವ ನಿರ್ಣಯಕ್ಕೆ ಕರ್ನಾಟಕ ಒಪ್ಪಿಗೆ ಸೂಚಿಸಿದೆ. ಆದರೆ, ನಾಲ್ಕು ಜಲಾಶಯಗಳಲ್ಲಿ ಇಷ್ಟು ನೀರಿಲ್ಲ. ಅಣೆಕಟ್ಟೆಯಲ್ಲಿರುವ ಎಲ್ಲಾ ನೀರನ್ನು ತಮಿಳು ನಾಡಿಗೆ ಬಿಟ್ಟರೆ ರಾಜ್ಯದ ಜನರ ಗತಿ ಏನು ಎಂದು ಪ್ರಶ್ನಿಸಿದರು.

ಕೆಆರ್‍ಎಸ್ ಮತ್ತು ಕಬಿನಿ ಜಲಾಶಯದಿಂದ ಪ್ರತಿದಿನ 1 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ. ಇದೇ ರೀತಿ ನೀರು ಹರಿಸಿದರೆ ಡಿಸೆಂಬರ್ ವೇಳೆಗೆ ನೀರಿಗೆ ಹಾಹಾಕಾರ ಆರಂಭವಾಗಲಿದೆ. ಬೆಂಗಳೂರು, ಮೈಸೂರು, ರಾಮನಗರ, ಚಾಮರಾಜ ನಗರ, ಕೊಡಗು, ಹಾಸನ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಒಂದು ವರ್ಷಕ್ಕೆ 40 ಟಿಎಂಸಿ ನೀರು ಅಗತ್ಯವಿದೆ. ನೀರಾವರಿಗಾಗಿ 110 ಟಿಎಂಸಿ ನೀರು ಬೇಕಾಗುತ್ತದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಅ.7 ರಂದು ನಡೆಯುವ ಮಂಡಳಿಯ ಸಭೆಯಲ್ಲೂ ಆಕ್ಷೇಪ ವ್ಯಕ್ತಪಡಿಸಬೇಕು ಎಂದು ಸಲಹೆ ನೀಡಿದರು.

ಕೆಪಿಸಿಸಿ ವಕ್ತಾರೆ ಮಂಜುಳಾ ಮಾನಸ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಶಿವಣ್ಣ ಮಾತನಾಡಿ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ದಿ ಗೋಷ್ಠಿಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಮಾಜಿ ಮೇಯರ್ ಟಿ.ಬಿ. ಚಿಕ್ಕಣ್ಣ, ಮಾಜಿ ಉಪ ಮೇಯರ್ ಪುಷ್ಪವಲ್ಲಿ, ಮುಖಂಡರಾದ ನಾಗಭೂಷಣ್ ತಿವಾರಿ, ಈಶ್ವರ್ ಚಕ್ಕಡಿ, ಎನ್.ಎಸ್. ಗೋಪಿನಾಥ್, ಮಹೇಶ್ ಇದ್ದರು.

Translate »