ಮೈಸೂರು, ಆ.23(ಎಂಟಿವೈ)- ನಂಜನಗೂಡು ತಾಲೂಕು ಆರೋಗ್ಯಾ ಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕ ರಣವನ್ನು ಬಿಜೆಪಿ ಸರ್ಕಾರ ಕಡೆಗಣಿ ಸುತ್ತಿದ್ದು, ಪ್ರಕರಣದ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡುವುದ ರೊಂದಿಗೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆಗ್ರಹಿಸಿದ್ದಾರೆ.
ಮೈಸೂರು ಕಾಂಗ್ರೆಸ್ ಕಚೇರಿ ಸಭಾಂ ಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂಜನಗೂಡಿನ ಜುಬಿಲಂಟ್ ಕಾರ್ಖಾನೆಯ ನೌಕರರಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಮನೆ ಮಾತಾ ಗಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವು ದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈ ಹಿಂದೆ ಡಿ.ಕೆ.ರವಿ, ಡಿವೈಎಸ್‍ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿ ಮುಖಂಡರು ಬೀದಿಗಿಳಿದು ಹೋರಾಟ ಮಾಡಿದ್ದರು. ಅಂದಿನ ಕಾಂಗ್ರೆಸ್ ಸರ್ಕಾ ರದ ವಿರುದ್ಧ ಆರೋಪಗಳ ಸುರಿಮಳೆಗೈ ಯ್ದಿದ್ದರು. ಗಣಪತಿ ಪ್ರಕರಣಕ್ಕೆ ಸಂಬಂಧಿ ಸಿದಂತೆ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರಿಂದ ರಾಜೀನಾಮೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇಂದು ತಾಲೂಕು ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕ ರಣದಲ್ಲಿ ಬಿಜೆಪಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡದೇ ನಿರ್ಲಕ್ಷಿಸುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ಟಿಹೆಚ್‍ಓ ಡಾ. ನಾಗೇಂದ್ರ ಅವರ ಸಾವು ಬಿಜೆಪಿ ನಾಯಕರಿಗೆ ಮಹತ್ವ ಅನ್ನಿಸಿಲ್ಲ. ಮಾನವೀಯತೆಯೂ, ಸಾಮಾಜಿಕ ಕಳಕಳಿಯಿಲ್ಲದ ಬಿಜೆಪಿ ಅಮಾಯಕರ ಸಾವನ್ನೇ ಬಂಡವಾಳವನ್ನಾಗಿಸಿಕೊಂಡಿದೆ ಎಂದು ಲಕ್ಷ್ಮಣ್ ದೂರಿದರು.
ಈ ಪ್ರಕರಣದ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣವನ್ನು ಸಿಬಿಐ ಅಥವಾ ಹೈಕೋರ್ಟ್‍ನ ಹಾಲಿ ನ್ಯಾಯಾಧೀಶ ರಿಂದ ತನಿಖೆ ನಡೆಸಲು ಕ್ರಮ ಕೈಗೊಳ್ಳ ಬೇಕು. ತನಿಖೆ ಪೂರ್ಣಗೊಂಡ ಬಳಿಕ ತಪ್ಪಿತಸ್ಥರಲ್ಲದಿದ್ದರೆ ಮತ್ತೆ ಅವರನ್ನು ಸಚಿವ ಸಂಪುಣಕ್ಕೆ ಸೇರಿಸಿಕೊಳ್ಳಲಿ ಎಂದರು.
ಸಾಂತ್ವನ ಹೇಳಿ ಮಾನವೀಯತೆ ಪ್ರದ ರ್ಶಿಸಬಹುದಿತ್ತು: ಟಿಹೆಚ್‍ಓ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಮರುದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಆರ್‍ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದರು. ಮೈಸೂ ರಲ್ಲಿ ಟಿಹೆಚ್‍ಓಗೆ ಕಿರುಕುಳ ನೀಡಿದ ಅಧಿ ಕಾರಿಯನ್ನು ಅಮಾನತು ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರ ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿ ಸುವ ಪ್ರಯತ್ನ ಮಾಡಲಿಲ್ಲ. ಅಲ್ಲದೆ ಮೃತ ಡಾ.ನಾಗೇಂದ್ರ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಮಾನವೀ ಯತೆಯನ್ನೂ ಪ್ರದರ್ಶಿಸಲಿಲ್ಲ. ಅಂತ್ಯಕ್ರಿಯೆ ಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಒಳ ಗೊಂಡಂತೆ ಯಾರೂ ಪಾಲ್ಗೊಳ್ಳದೇ ಅಮಾನವೀಯತೆ ಪ್ರದರ್ಶಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಫೋನ್ ಕದ್ದಾಲಿಕೆ ಪ್ರಕರಣ: ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರಿ ರುವುದನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಗಂಭೀರವಾಗಿ ಪರಿಗಣಿಸಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಫೋನ್ ಕದ್ದಾಲಿಕೆ ಆರೋಪ ಮಾಡಿದ ಬಿಜೆಪಿ ಯವರು ಸಿಬಿಐ ತನಿಖೆಗೆ ಒಪ್ಪಿಸುವವ ರೆಗೂ ಹೋರಾಟ ಮಾಡಿದರು. ಇದೀಗ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಎಂ.ಲಕ್ಷ್ಮಣ್ ಆಗ್ರಹಿಸಿದರು.
ಸುಳ್ಳೇ ಬಿಜೆಪಿ ಮನೆ ದೇವರು: ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಮಾತನಾಡಿ, ಬಿಜೆಪಿ ನಾಯಕರು ಸುಳ್ಳು ಹೇಳುತ್ತಲೇ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಲೂಟಿ ಮಾಡುವು ದರಲ್ಲೇ ಮಗ್ನರಾಗಿರುವ ಬಿಜೆಪಿ ನಾಯಕರು ಸುಳ್ಳನ್ನೇ ಸತ್ಯವೆಂದು ನಂಬಿಸುವ ಮೂಲಕ ಅಕ್ರಮದಲ್ಲಿ ತೊಡಗಿದ್ದಾರೆ. ಇದರಿಂದ ರಾಜ್ಯ ದಲ್ಲಿ ಅಭಿವೃದ್ಧಿ ಕುಂಠಿತವಾಗುವುದರೊಂ ದಿಗೆ ಕೊರೊನಾ ಸೋಂಕಿಗೆ ಬಲಿಯಾಗು ವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿ ತರು ಹಾಗೂ ಸಾವಿಗೀಡಾಗುವವರ ನಿಖರ ಸಂಖ್ಯೆ ಮರೆ ಮಾಚುತ್ತಿದ್ದಾರೆ ಎಂದು ಆರೋಪಿಸಿದರು.
ಆರೋಗ್ಯ ಇಲಾಖೆಯಲ್ಲಿ ಖಾಲಿಯಿ ರುವ ಹುದ್ದೆಗಳನ್ನು ಸರ್ಕಾರ ಕೂಡಲೇ ಭರ್ತಿ ಮಾಡಬೇಕು. ಮೈಸೂರು ಜಿಲ್ಲೆಯಲ್ಲಿ 2160 ಹುದ್ದೆಗಳಲ್ಲಿ 1150 ಹುದ್ದೆ ಖಾಲಿ ಇವೆ. ಆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಬೇಕು. ಕೊರೊನಾ ವಾರಿಯರ್ಸ್ ಗಳನ್ನು ಗೌರವಯುತವಾಗಿ ನಡೆಸಿ ಕೊಳ್ಳಬೇಕು. ಪಿಪಿಇ ಕಿಟ್, ಗ್ಲೌಸ್, ಮಾಸ್ಕ್ ಸೇರಿದಂತೆ ಸುರಕ್ಷತಾ ಸಾಮಗ್ರಿ ಒದಗಿಸ ಬೇಕು. ರಜೆ ಹಾಗೂ ವಿಶ್ರಾಂತಿ ತೆಗೆದು ಕೊಳ್ಳದೇ ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿ ಕೊಂಡಿರುವ ವಾರಿಯರ್ಸ್‍ಗಳಿಗೆ ಕ್ವಾರಂ ಟೇನ್‍ಗೆ ವ್ಯವಸ್ಥೆ ಮಾಡಿ, ಊಟ, ತಿಂಡಿ, ಬಿಸಿನೀರಿನ ಸೌಲಭ್ಯ ಕಲ್ಪಿಸಬೇಕು. ವೈದ್ಯರು ಹಾಗೂ ಇತರೆ ಸಿಬ್ಬಂದಿಗಳ ನಡುವೆ ಸಾಮ ರಸ್ಯ ಮೂಡಿಸಲು ಎಲ್ಲಾ ಜಿಲ್ಲೆಗಳಲ್ಲೂ ಅಧಿಕಾರಿಗಳ ಸಮನ್ವಯ ಸಮಿತಿ ರಚಿಸ ಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿ ಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಮುಖಂಡರಾದ ಎಂ.ಶಿವಣ್ಣ, ಕ್ಯಾತನಹಳ್ಳಿ ಪ್ರಕಾಶ್, ಡೈರಿ ವೆಂಕಟೇಶ್, ಮಾದ್ಯಮ ವಕ್ತಾರ ಮಹೇಶ್, ಬಸವ ರಾಜು, ರಾಜೇಶ್ ಉಪಸ್ಥಿತರಿದ್ದರು.