ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ
ಮಂಡ್ಯ

ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ

May 3, 2018

ಶ್ರೀರಂಗಪಟ್ಟಣ: ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ನೀಡಿರುವ ಜನಪರ ಯೋಜನೆಗಳು ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಮತದಾರರು ಒಲವು ತೋರುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಲ್.ಲಿಂಗರಾಜು ಹೇಳಿದರು.

ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಂಡಿ ಸಿದ್ದೇಗೌಡ ಅವರ ಜತೆ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ ಯೋಜನೆಗಳನ್ನು ಜಾರಿಗೆ ತಂದು ಪ್ರತಿಯೊಂದು ಸಮಾಜದ ಒಳಿತಿಗಾಗಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹಿಂದುಳಿದ, ಅಲ್ಪಸಂಖ್ಯಾತ, ದಲಿತ ಸಮಾಜಗಳ ಏಳ್ಗೆಗೆ ಶ್ರಮಿಸಿದ್ದಾರೆ. ನೊಂದವರ ಪರವಾಗಿ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತಂದು ಮತದಾರರಿಗೆ ತಲುಪಿಸುವಂತೆ ಮಾಡಿ ದ್ದಾರೆ. ಕಟ್ಟ ಕಡೆಯ ವ್ಯಕ್ತಿಗೂ ಯೋಜನೆ ಗಳು ತಲುಪಿರುವುದರಿಂದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಂಡಿ ಸಿದ್ದೇ ಗೌಡರಿಗೆ ಆಯಾ ಗ್ರಾಮಗಳಲ್ಲಿ ಹೆಚ್ಚಿನ ಮತ ದೊರೆತು ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದರು. ಕೆ.ಶೆಟ್ಟಹಳ್ಳಿ ಹೋಬಳಿಯ ಗೌರಿಪುರ, ಎಂ.ಶೆಟ್ಟಹಳ್ಳಿ, ಚಂದಗಿರಿಕೊಪ್ಪಲು ಸೇರಿದಂತೆ ಹಲವು ಗ್ರಾಮಗಳಲ್ಲಿ ಮತ ಯಾಚನೆ ಮಾಡಿದರು. ಕಾಂಗ್ರೆಸ್ ವೀಕ್ಷಕ ಭಾಸ್ಕರ್, ಮನ್ಮುಲ್ ನಿರ್ದೇಶಕ ಬೋರೇಗೌಡ, ಸುಮತಿ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತಯಾಚಿಸಿದರು.

Translate »