ಚಾಮರಾಜನಗರದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ
ಮೈಸೂರು

ಚಾಮರಾಜನಗರದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ

March 16, 2019

ಚಾಮರಾಜನಗರ:  ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಬೃಹತ್ ‘ಪರಿವರ್ತನಾ ಯಾತ್ರೆ’ಯಲ್ಲಿ ಭಾಗವಹಿಸಿದ್ದ ಪಕ್ಷದ ನಾಯಕರು, ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಟೀಕಿಸುವ ಮೂಲಕ ಲೋಕಸಭಾ ಚುನಾವಣೆಯ ರÀಣಕಹಳೆ ಮೊಳಗಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಇಂದು ಕಾಂಗ್ರೆಸ್ ಪರಿ ವರ್ತನಾ ಯಾತ್ರೆ ಹಮ್ಮಿಕೊಂಡಿತ್ತು. ಈ ಯಾತ್ರೆಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು, ಕಾರ್ಯ ಕರ್ತರು, ಹಿತೈಷಿಗಳು ಪಾಲ್ಗೊಳ್ಳುವ ಮೂಲಕ ಯಾತ್ರೆಯ ಅಭೂತಪೂರ್ವ ಯಶಸ್ಸಿಗೆ ಕಾರಣರಾದರು. ಯಾತ್ರೆ ಹಿನ್ನೆಲೆ ಯಲ್ಲಿ ನಗರದ ಎಲ್ಲೆಂದರಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರೇ ಕಂಡು ಬಂದರು. ಯಾತ್ರೆಯಲ್ಲಿ ಭಾಗ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಚಿವ ಸತೀಶ್ ಜಾರಕಿಹೋಳಿ, ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಹಿಗ್ಗಾ ಮುಗ್ಗಾ ಟೀಕಿಸಿದರು. ಈ ಮೂಲಕ ಲೋಕ ಸಭಾ ಚುನಾವಣಾ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ ನಾಡಿ, ರಾಜ್ಯದಲ್ಲಿ ಕಳೆದ ಅವಧಿಯಲ್ಲಿ ಆಡಳಿತ ನಡೆಸಿದ ನನ್ನ ನೇತೃತ್ವದ ಸರ್ಕಾರ (ಕಾಂಗ್ರೆಸ್) ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ 165 ಭರವಸೆಗಳನ್ನು ಈಡೇರಿಸಿದೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದ ಸರ್ಕಾರ ಯಾವುದಾದರೂ ಇದ್ದರೆ, ಅದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ನರೇಂದ್ರ ಮೋದಿ ಅವರು 5 ವರ್ಷಗಳ ಕಾಲ ಪ್ರಧಾನ ಮಂತ್ರಿ ಆಗಿ ಆಡಳಿತ ನಡೆಸಿದ್ದಾರೆ. ಅವರು ಮಾಡಿರುವ ಸಾಧನೆಗಳನ್ನು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು.

ನನ್ನ 40 ವರ್ಷಗಳ ರಾಜಕೀಯ ಜೀವನ ದಲ್ಲಿ ನರೇಂದ್ರ ಮೋದಿ ರೀತಿ ಸುಳ್ಳನ್ನು ಹೇಳುವವರನ್ನು ನಾನು ನೋಡಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇಷ್ಟು ಸುಳ್ಳನ್ನು ಹೇಳುವ ಪ್ರಧಾನಮಂತ್ರಿ ದೇಶದಲ್ಲಿ ಇರಲಿಲ್ಲ ಎಂದರೆ ಅದು ಅತಿಶಯೋಕ್ತಿ ಆಗಲಾರದು ಎಂದ ಸಿದ್ದರಾಮಯ್ಯ, ಲೋಕ ಸಭಾ ಚುನಾವಣೆಯ ಪ್ರಚಾರಕ್ಕಾಗಿ ರಾಜ್ಯಕ್ಕೆ ಎರಡು ಬಾರಿ ಮೋದಿ ಭೇಟಿ ನೀಡಿ ದ್ದಾರೆ. ಈ ವೇಳೆ ಅವರು (ಮೋದಿ) ತಮ್ಮ ಸಾಧನೆಗಳನ್ನು ಹೇಳಿಲ್ಲ. ರಾಮಮಂದಿರ, ಹಿಂದುತ್ವ, ಸರ್ಜಿಕಲ್ ಸ್ಟ್ರೈಕ್ ವಿಷಯದ ಬಗ್ಗೆ ಮಾತನಾಡಿದ್ದಾರೆ. ರಾಮಮಂದಿರ ಕಟ್ಟಲು ನಮ್ಮ ವಿರೋಧ ಇಲ್ಲ. ಏಕೆಂದರೆ ನನ್ನ ಸಿದ್ದರಾಮಯ್ಯ ಹೆಸರಿನಲ್ಲೇ ‘ರಾಮ’ ಇದೆ ‘ಸಿದ್ದ’ನೂ ಇದೆ. ಸಿದ್ದ ಎಂದರೆ ರೆಡಿ ಅಂತ. ಅಂದರೆ ರಾಮಮಂದಿರ ಕಟ್ಟಲೂ ನಾನೂ ಸಿದ್ಧ ಎಂದರ್ಥ ಎಂದರು.

1992ರಲ್ಲಿ ಧ್ವಂಸಗೊಂಡÀ ರಾಮ ಮಂದಿರ ಇಲ್ಲಿಯವರೆಗೂ ಕಟ್ಟಲು ಆಗಿಲ್ಲ. ಚುನಾವಣೆಗಳು ಬಂದಾಗ ಮಾತ್ರ ರಾಮ ಮಂದಿರ ವಿಚಾರ ಪ್ರಸ್ತಾಪ ಆಗುತ್ತದೆ. ಒಮ್ಮೆ ಇಟ್ಟಿಗೆಗಳನ್ನು ತೆಗೆದುಕೊಂಡು, ಹಣವನ್ನು ಕಿಸೆಗೆ (ಜೀಬಿಗೆ) ಹಾಕಿಕೊಂಡು ಕೆಲವು ಗಿರಾಕಿಗಳು ಹೊರಟಿದ್ದರು. ಇದು ವರೆವಿಗೂ ರಾಮಮಂದಿರ ಕಟ್ಟಲು ಸಾಧ್ಯ ವಾಗಿಲ್ಲ. ಈ ಮೂಲಕ ಜನರಿಗೆ ದ್ರೋಹ ಬಗೆಯಲಾಗುತ್ತಿದೆ. ಇಂತಹ ನಂಬಿಕೆ ದ್ರೋಹ ಇನ್ನೊಂದಿಲ್ಲ ಎಂದು ಬಿಜೆಪಿ ಮತ್ತು ಆ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆ ಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಮಾತಿಗೆ ತಪ್ಪಿದ್ದಾರೆ. ದೇಶದಲ್ಲಿ ಮೋಸ, ಡೋಂಗಿತನ ಇದೆ. ಆದ್ದರಿಂದ ದೇಶದ ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಯೋಚಿಸಿ ಮತ ಚಲಾಯಿಸುವಂತೆ ಮನವಿ ಮಾಡಿದರು.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ವಿಷ್ಣುನಾದನ್, ಸಚಿವರಾದ ಸತೀಶ್ ಜಾರಕಿಹೊಳಿ, ಸಿ.ಪುಟ್ಟರಂಗಶೆಟ್ಟಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವರಾದ ಸಿ.ಎಂ.ಇಬ್ರಾಹಿಂ, ಡಾ.ಗೀತಾಮಹದೇವಪ್ರಸಾದ್, ಸುಮವಸಂತ್, ಡಾ.ಹೆಚ್.ಸಿ.ಮಹದೇವಪ್ಪ, ಸಂಸದ ಆರ್.ಧ್ರುವನಾರಾಯಣ್, ಶಾಸಕರಾದ ಆರ್.ನರೇಂದ್ರ, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಧರ್ಮಸೇನಾ, ಮಾಜಿ ಸಂಸದ ಎ.ಸಿದ್ದರಾಜು. ಮಾಜಿ ಶಾಸಕರಾದ ವಾಸು, ಎಸ್.ಬಾಲರಾಜು, ಎ.ಆರ್.ಕೃಷ್ಣಮೂರ್ತಿ, ಕಳಲೆ ಕೇಶವಮೂರ್ತಿ, ಎಸ್.ಜಯಣ್ಣ, ಮಲ್ಲಜಮ್ಮ, ಎಂ.ಡಿ.ಲಕ್ಷ್ಮೀ ನಾರಾಯಣ್, ಕೃಷ್ಣಪ್ಪ, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಷ್ಟ ಅಮರನಾಥ್, ಜಿಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಯೋಗೇಶ್, ಸದಸ್ಯರಾದ ಕೆ.ಪಿ.ಸದಾಶಿವ ಮೂರ್ತಿ, ಕೆ.ಎಸ್.ಮಹೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ವಿಜಯ್‍ಕುಮಾರ್, ತಾಪಂ ಅಧ್ಯಕ್ಷೆ ದೊಡ್ಡಮ್ಮ, ಮುಖಂಡರಾದ ಗಣೇಶ್‍ಪ್ರಸಾದ್, ಬಿ.ಕೆ.ರವಿಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಾಸಂತಿ ಶಿವಣ್ಣ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Translate »