ಯಳಂದೂರು ಪಪಂ ಕಾಂಗ್ರೆಸ್ ತೆಕ್ಕೆಗೆ
ಚಾಮರಾಜನಗರ

ಯಳಂದೂರು ಪಪಂ ಕಾಂಗ್ರೆಸ್ ತೆಕ್ಕೆಗೆ

November 4, 2020

ಯಳಂದೂರು, ನ.3(ನಾಗರಾಜು)- ಯಳಂದೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಧಿಕಾರ ಗದ್ದುಗೆ ಹಿಡಿಯು ವಲ್ಲಿ ಯಶಸ್ವಿಯಾಗಿದ್ದು, ನೂತನ ಅಧ್ಯಕ್ಷರಾಗಿ ಶಾಂತಮ್ಮ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಅವರು ಅವಿರೋಧವಾಗಿ ಆಯ್ಕೆಯಾದರು.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ 11ನೇ ವಾರ್ಡಿನ ಸದಸ್ಯೆ ಶಾಂತಮ್ಮ ಹಾಗೂ ಬಿಸಿಎ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ 10ನೇ ವಾರ್ಡಿನ ಸದಸ್ಯೆ ಲಕ್ಷ್ಮೀ ಅವರನ್ನು ಹೊರತು ಪಡಿಸಿ ಬೇರೆಯಾರೂ ನಾಮಪತ್ರ ಸಲ್ಲಿಸಿರ ಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಯಾಗಿದ್ದ ತಹಶೀಲ್ದಾರ್ ಸುದರ್ಶನ್ ಇಬ್ಬ ರನ್ನು ಅವಿರೋಧ ಆಯ್ಕೆಯಾಗಿ ಘೋಷಣೆ ಮಾಡಿದರು. ಚುನಾವಣೆ ಮುಗಿದ ನಂತರ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದ ಬಳಿ ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಸ್. ಬಾಲರಾಜು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಪಪಂನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವಿತ್ತು. ಮಾಜಿ ಸಂಸದ ಆರ್.ಧ್ರುವನಾರಾಯಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ವರಿಷ್ಠರು ಇವರಿಬ್ಬರ ಹೆಸರನ್ನು ಸೂಚಿಸಿ ದ್ದರು. ಹಾಗಾಗಿ ಅವಿರೋಧ ಆಯ್ಕೆ ಮಾಡ ಲಾಗಿದೆ. ಮತದಾರರು ನಿಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ತರದೆ ಉತ್ತಮವಾಗಿ ಕೆಲಸ ವನ್ನು ನಿರ್ವಹಿಸಿ. ಇತರೆ ಸದಸ್ಯರು ಹಾಗೂ ಹಿರಿಯ ಸದಸ್ಯರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಪಪಂ ಸದಸ್ಯರಾದ ಮಹೇಶ್, ವೈ.ಜಿ. ರಂಗನಾಥ, ಮಹದೇವನಾಯಕ, ಸವಿತಾ, ಕೆ.ಮಲ್ಲಯ್ಯ, ಮಂಜು, ಪ್ರಭಾವತಿ, ಬಿ.ರವಿ, ಸುಶೀಲಾ, ಜಿಪಂ ಸದಸ್ಯ ಜೆ.ಯೋಗೇಶ್ ತಾಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ವಿ.ಚಂದ್ರು, ವಡಗೆರೆದಾಸ್, ಆರ್.ಮಹದೇವ, ನಿಂಗರಾಜು, ಮಲ್ಲು, ರಾಜಶೇಖರ್, ಪ್ರಕಾಶ್ ಹಾಜರಿದ್ದರು.

 

 

 

Translate »