ಯುವ ಜನರಿಗೆ ಉದ್ಯೋಗ ನೀಡುವಲ್ಲಿ ಕಾಂಗ್ರೆಸ್ ವಿಫಲ
ಮಂಡ್ಯ

ಯುವ ಜನರಿಗೆ ಉದ್ಯೋಗ ನೀಡುವಲ್ಲಿ ಕಾಂಗ್ರೆಸ್ ವಿಫಲ

May 3, 2018

ಭಾರತೀನಗರ: ಯುವ ಜನರಿಗೆ ಉದ್ಯೋಗ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಡಿ.ಸಿ.ತಮ್ಮಣ್ಣ ಆರೋಪಿಸಿದರು.

ಇಲ್ಲಿಗೆ ಸಮೀಪದ ಬೊಪ್ಪಸಮುದ್ರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಆಳುವವರಿಗೆ ದೂರದೃಷ್ಟಿಯ ಕೊರತೆ ಇದ್ದಲ್ಲಿ ಯಾವುದೇ ಹೊಸ ಯೋಜನೆ ಗಳನ್ನು ರೂಪಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿಯೇ ಇಂದು ವಿಶ್ವಮಾನ್ಯವಾ ಗಿರುವ ಬೆಂಗಳೂರು ನರಕ ಸದೃಶವಾಗಿದೆ. ಬಹುರಾಷ್ಟ್ರೀಯ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಬರುತ್ತಿದ್ದರೂ ಅದು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತ ವಾಗುತ್ತಿದೆ. ಬೆಂಗಳೂರು ಬಿಟ್ಟು ರಾಜ್ಯದ ಇತರೆ ಜಿಲ್ಲೆಗಳತ್ತ ಹೋಗುವುದೇ ಇಲ್ಲ ಎಂದರು.ಆಳುವ ಸರ್ಕಾರಗಳು ಕೈಗಾರಿಕೆ ಸ್ಥಾಪನೆಗೆ ಅಗತ್ಯವಾದ ಮೂಲಭೂತ ಸೌಲಭ್ಯ ಗಳನ್ನು ಒದಗಿಸುವಲ್ಲಿ ವಿಫಲವಾಗಿವೆ. ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ

ತೂಬಿನಕೆರೆ ಕೈಗಾರಿಕಾ ಪ್ರದೇಶವನ್ನು ವಿಸ್ತರಣೆ ಮಾಡುವಂತೆ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿದ್ದರೂ ಪ್ರಯೋಜನವಾಗ ಲಿಲ್ಲ ಎಂದು ವಿಷಾದಿಸಿದರು.

ರಾಜ್ಯದ ಇತರೆ ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಕೈಗಾರಿಕೆಗಳ ಸ್ಥಾಪನೆಯಿಂದಾಗಿ ಯುವ ಜನರಿಗೆ ಉದ್ಯೋಗ ದೊರೆಯುತ್ತದೆ. ಗ್ರಾಮೀಣ ಭಾಗಗಳಿಂದ ಹೆಚ್ಚು ಮಂದಿ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಈ ಬಗ್ಗೆ ಆಧಿಕಾರ ಸ್ಥರು ಚಿಂತಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂದೆ ತಾವು ಕಾರ್ಯಯೋಜನೆ ಹಮ್ಮಿ ಕೊಂಡಿರುವುದಾಗಿ ಸ್ಪಷ್ಟಪಡಿಸಿದರು.

ರೈತರ ಬೆಳೆಗೆ ವೈಜ್ಞಾನಿಕ ಬೆಲೆ ಅಗತ್ಯ: ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕುಮಾರ ಸ್ವಾಮಿ ಅವರು ಇಸ್ರೇಲ್ ರಾಷ್ಟ್ರಕ್ಕೆ ಭೇಟಿ ನೀಡಿ ಅಲ್ಲಿನ ತಾಂತ್ರಿಕತೆಯನ್ನು ಬಳಕೆ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮಿತ ನೀರು ಬಳಕೆಯಿಂದ ಹೆಚ್ಚಿನ ಬೆಳೆ ಬೆಳೆಯುವ ವಾತಾವರಣ ನಿರ್ಮಿಸಬೇಕಾಗಿದೆ. ಅಲ್ಲಲ್ಲಿ ಶೈತ್ಯಾಗಾರಗಳನ್ನು ನಿರ್ಮಿಸಿ ಬೆಳೆದ ಬೆಳೆ ಯನ್ನು ಶೇಖರಿಸಿ ಉತ್ತಮ ಮಾರುಕಟ್ಟೆ ಒದಗಿಸಬೇಕು. ಈ ನಿಟ್ಟಿನಲ್ಲಿ ಕಾರ್ಯ ಕ್ರಮ ರೂಪಿಸಿದರೆ ರೈತರ ಬದುಕು ಹಸ ನಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ರೈತ ಸಂಘದ ಮುಖಂಡ ಅಣ್ಣೂರು ಸಿದ್ದು ಮಾತನಾಡಿದರು. ಬೊಪ್ಪಸಮುದ್ರ ಚಂದ್ರಶೇಖರ್, ಸ್ವಾಮಿ, ದಯಾನಂದ್, ಮಾದೇಗೌಡ, ಭೈರ, ನಾಗಣ್ಣ, ಕೆಂಪಸಿದ್ದಣ್ಣ, ಶಿವಣ್ಣ, ರಾಮಣ್ಣ, ನಿಂಗಣ್ಣ, ಶಿವಮಲ್ಲು, ಸುರೇಶ್ ಸೇರಿದಂತೆ ಇತರರಿದ್ದರು.

Translate »