ಸುಮಲತಾ ಪ್ರಚಾರದಲ್ಲಿ ಕಾಂಗ್ರೆಸ್ ಬಾವುಟ
ಮೈಸೂರು

ಸುಮಲತಾ ಪ್ರಚಾರದಲ್ಲಿ ಕಾಂಗ್ರೆಸ್ ಬಾವುಟ

March 31, 2019

ಮಂಡ್ಯ: ತಾಲೂಕಿನ ಕೀಲಾರ ಗ್ರಾಮದಲ್ಲಿ ಪಕ್ಷೇತರ ಅಭ್ಯರ್ಥಿ ಸುಮ ಲತಾ ಅಂಬರೀಶ್ ಅವರ ರೋಡ್ ಶೋನಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ರೈತ ಸಂಘದ ಬಾವುಟ ಗಳು ರಾರಾಜಿಸಿದವು. ಅಲ್ಲದೇ, ಅವರ ಚಿಹ್ನೆಯಾದ ಕಹಳೆಯನ್ನು ವಿಶೇಷ ವಸ್ತ್ರ ಧರಿಸಿದ್ದ ಇಬ್ಬರು ರೋಡ್ ಶೋನಲ್ಲಿ ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಇಂದು ಬೆಳಿಗ್ಗೆ ಸುಮಲತಾ ಅವರು ಕೀಲಾರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಅಷ್ಟರ ಲ್ಲಾಗಲೇ ನೆರೆದಿದ್ದ ಸಾವಿರಾರು ಕಾರ್ಯಕರ್ತರು ತಮ್ಮ ತಮ್ಮ ಪಕ್ಷಗಳ ಬಾವುಟಗಳನ್ನು ಹಿಡಿದು ರೋಡ್ ಶೋನಲ್ಲಿ ಹೆಜ್ಜೆ ಹಾಕಿದರು. ಸುಮಾರು 50 ರಿಂದ 60 ಯುವಕರು ರೋಡ್ ಶೋ ಮುಂದೆ ಬೈಕ್ ರ್ಯಾಲಿ ನಡೆಸಿದರು. ಈ ವೇಳೆ ಮಾತನಾ ಡಿದ ಸುಮಲತಾ, ಮಹಿಳೆ ಎಂಬುದನ್ನೂ ಲೆಕ್ಕಿಸದೇ ಮುಖ್ಯಮಂತ್ರಿ ಮತ್ತು ಅವರ ಸಂಪುಟದ ಸಚಿವರು ನನಗೆ ಟಾರ್ಚರ್ ನೀಡುತ್ತಿದ್ದಾರೆ. ಮಹಿಳೆಯರಿಗೆ ಗೌರವ ನೀಡದ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ನನ್ನ ನೋವು ಯಾರಿಗೆ ತೋರಿಸಲಿ: ಪ್ರತೀ ಹಂತದಲ್ಲೂ ನನ್ನ ಬಗ್ಗೆ
ಲಘುವಾಗಿ ಮಾತನಾಡುತ್ತಿದ್ದಾರೆ. ನನ್ನ ಮುಖದಲ್ಲಿ ನೋವಿಲ್ಲ ಎಂದು ಹೇಳುತ್ತಿದ್ದಾರೆ. ನಾನು ನೋವು ಮರೆಯಲು ಜನರ ಮುಂದೆ ಬಂದಿದ್ದೇನೆ. ನನಗೆ ಅನುಕಂಪ ಬೇಡ, ನಿಮ್ಮ ಪ್ರೀತಿ ಬೇಕು. ನಾನು ಯಾರ ಮುಂದೆ ಕಣ್ಣೀರು ಹಾಕುವುದಿಲ್ಲ. ನನ್ನ ನೋವಿನಲ್ಲಿ ಜೊತೆಗಿದ್ದವರು ಮಂಡ್ಯ ಜನರು ಎಂಬುದನ್ನು ಮರೆಯುವುದಿಲ್ಲ ಎಂದರು. ಅಂಬರೀಶ್ ಅವರು ಬಿಟ್ಟು ಹೋಗಿರುವ ಕೆಲಸಗಳನ್ನು ಮಾಡಲು ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಕೈಗೊಂಡೆ. ನನ್ನ ಹೆಸರಿನ ಮೂವರು ಮಹಿಳೆಯರನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ಇನ್ನೂ ಏನೇನು ಕುತಂತ್ರ ಮಾಡು ತ್ತಾರೋ ಗೊತ್ತಿಲ್ಲ. ಅಂಬರೀಶ್ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಇಂತಹವರಿಗೆ ಬುದ್ಧಿ ಕಲಿಸಿ. ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು. ಈ ವೇಳೆ ಮಾಜಿ ಶಾಸಕ ಹೆಚ್.ಬಿ. ರಾಮು, ತಾಪಂ ಮಾಜಿ ಅಧ್ಯಕ್ಷ ಸಿ. ತ್ಯಾಗರಾಜು, ಹುಲಿವಾನ ವಿಜಯಕುಮಾರ್, ರಮೇಶ್, ಜಿ.ಸಿ. ಆನಂದ್, ಬಿ. ಚಂದ್ರು ಮುಂತಾದವರಿದ್ದರು. ಸುಮಲತಾ ಅವರಿಗೆ ಗ್ರಾಮದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಈ ವೇಳೆ ವ್ಯಕ್ತಿಯೊಬ್ಬರು ಎಲೆ ಅಡಿಕೆ ಜೊತೆ ಸುಮಲತಾ ಅವರಿಗೆ ಒಂದು ಸಾವಿರ ರೂ. ನೀಡಿದರು. ಆದರೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹಣ ಬೇಡ ಎಂದು ಆತನಿಗೆ ಮನವರಿಕೆ ಮಾಡಿ, ಎಲೆ ಅಡಿಕೆಯನ್ನು ಮಾತ್ರ ಸುಮಲತಾ ಪಡೆದರು.

ಶ್ರೀರಂಗಪಟ್ಟಣ ವರದಿ:ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲು ಕರೆಯಲಾಗಿದ್ದ ಕಾಂಗ್ರೆಸ್ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಯಕಾರ ಮೊಳಗಿದ್ದು, ಸಭೆಯನ್ನು ಅರ್ಧಕ್ಕೆ ಮೊಟಕು ಗೊಳಿಸಿದ ಘಟನೆ ಶ್ರೀರಂಗಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆಯಿತು.
ಶ್ರೀರಂಗಪಟ್ಟಣ, ಮೇಲುಕೋಟೆ ಮತ್ತು ಕೆ.ಆರ್. ಪೇಟೆ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯನ್ನು ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಅಧ್ಯಕ್ಷತೆಯಲ್ಲಿ ಶ್ರೀರಂಗ ಪಟ್ಟಣದಲ್ಲಿ ಕರೆಯಲಾಗಿತ್ತು. ಸಭೆಯ ಪ್ರಾರಂಭದಲ್ಲೇ ಪದಾಧಿಕಾರಿಗಳು ಮುಖ್ಯಮಂತ್ರಿ ಕುಮಾರ ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಮತ್ತು ಅಭ್ಯರ್ಥಿ ನಿಖಿಲ್ ವಿರುದ್ಧ ಧಿಕ್ಕಾರ ಕೂಗಿದರು. ಅದು ಮಾತ್ರವಲ್ಲದೇ ಸುಮಲತಾ ಅಂಬರೀಶ್ ಪರ ಜಯಕಾರ ಕೂಗಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಪಾಲಹಳ್ಳಿ ಚಂದ್ರಶೇಖರ್, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಮತ ಹಾಕಿದ್ದ ಜೆಡಿಎಸ್ ಶಾಸಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಶ್ರೀರಂಗಪಟ್ಟಣ ದಲ್ಲಿ ಟಿಕೆಟ್ ನೀಡಲಾಗಿತ್ತು. ಅವರನ್ನು ಸೋಲಿಸಿದ ಪರಿಣಾಮ ಕಾಂಗ್ರೆಸ್ ಯಾರೂ ಗತಿ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ನಿಖಿಲ್ ಪರವಾಗಿ ಕೆಲಸ ಮಾಡಲು ಸಾಧ್ಯ ವಿಲ್ಲ ಎಂದು ಹೇಳಿದರು. ಇದರಿಂದಾಗಿ ಜಿಲ್ಲಾಧ್ಯಕ್ಷರು ಸಭೆಯನ್ನು ಮೊಟಕುಗೊಳಿಸಿ ಹೊರ ನಡೆನಡೆದರು.

Translate »