ಮೈಸೂರಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ
ಮೈಸೂರು

ಮೈಸೂರಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

December 29, 2019

ಮೈಸೂರು, ಡಿ.28(ಎಂಟಿವೈ)- ಮೈಸೂರು ಪುರಭವ ನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾಂಗ್ರೆಸ್ ಕಾರ್ಯ ಕರ್ತರು ಪಕ್ಷದ ಸಂಸ್ಥಾಪನಾ ದಿನವನ್ನು ಆಚರಿಸಿದರು.

ಇದುವರೆಗೂ ಕಾಂಗ್ರೆಸ್ ಕಚೇರಿಯಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸುವ ಪದ್ಧತಿ ರೂಢಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಮೆ ಮುಂಭಾಗ ಕುಳಿತಿದ್ದ ಪಕ್ಷದ ಮುಖಂಡರು, ಕಾಂಗ್ರೆಸ್ ಕಟ್ಟಲು ಮಹಾತ್ಮಗಾಂಧಿ, ಜವಾಹರ ಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ಮಹನೀಯರ ಶ್ರಮದ ಬಗ್ಗೆ ಗುಣಗಾನ ಮಾಡಲಾಯಿತು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲೆಂದೇ ಹುಟ್ಟು ಹಾಕ ಲಾದ ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಬ್ರಿಟಿಷರ ವಿರುದ್ಧ ನಡೆದ ಸ್ವಾತಂತ್ರ್ಯ ಹೋರಾಟದ ಮುಂಚೂಣಿ ಪಾತ್ರ ವಹಿಸಿದ್ದ ಕಾಂಗ್ರೆಸ್‍ನ ಹಲವು ನಾಯಕರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಗಾಂಧಿ ಅವರ ಇಡೀ ಕುಟುಂಬದ ತ್ಯಾಗಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ. 134ನೇ ಸಂಸ್ಥಾಪನಾ ದಿನ ಆಚರಿಸುತ್ತಿರುವುದು ಶ್ಲಾಘನೀಯ. ಎಲ್ಲೆಡೆ ಕಾಂಗ್ರೆಸ್ ತತ್ವ ಸಿದ್ಧಾಂತ, ದೇಶಕ್ಕೆ ನೀಡಿದ ಕೊಡುಗೆ, ಪಕ್ಷದ ನಾಯಕರ ತ್ಯಾಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ ಸ್ವಾತಂತ್ರ್ಯ ಲಭಿಸಲು ಕಾಂಗ್ರೆಸ್ ಪ್ರಮುಖ ಕಾರಣ ವಾಗಿರುವುದಲ್ಲದೆ, ದೇಶದ ನಿವಾಸಿಗಳಾದ ಸರ್ವಧರ್ಮ ಗಳ ಜನರ ಹಿತಕಾಯುವ ಏಕೈಕ ಪಕ್ಷ ಕಾಂಗ್ರೆಸ್ ಎಂದರು.

ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಮಾಜದಲ್ಲಿ ಕೋಮು ಸೌಹಾರ್ದತೆ ಮನೆ ಮಾಡಿತ್ತು. ಎಲ್ಲಾ ವರ್ಗದ ಜನರ ಹಿತ ಕಾಯುವ ಯೋಜನೆ ಜಾರಿಗೊಳಿಸಿ, ದೇಶದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿತ್ತು. ಬಡ ಮತ್ತು ಶೋಷಿತ ವರ್ಗಗಳ ಜನರ ಹಿತ ಕಾಯುವ ಕೆಲಸ ಕಾಂಗ್ರೆಸ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ಸಾಧನೆ ಹಾಗೂ ಧ್ಯೇಯೋದ್ದೇಶಗಳನ್ನು ಜನರಲ್ಲಿ ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕೆಂದು ಅಭಿಪ್ರಾಯಪಟ್ಟರು. ಇದೇ ವೇಳೆ ಮೈಸೂರು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕ ಗಳ ಮುಖಂಡರು ಪಾಲ್ಗೊಂಡಿದ್ದರು. ಮಾಜಿ ಶಾಸಕ ವಾಸು, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ ಮಾತನಾಡಿದರು. ಮೇಯರ್ ಪುಷ್ಪಲತಾ ಜಗನ್ನಾಥ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್‍ಕುಮಾರ್, ಮಾಜಿ ಮೇಯರ್ ಟಿ.ಬಿ.ಚಿಕ್ಕಣ್ಣ, ಮುಖಂಡರಾದ ಭಾಸ್ಕರ್, ಶಿವಣ್ಣ, ವಿಶ್ವ, ನಾಸೀರ್, ವಿಜಯ್‍ಕುಮಾರ್, ವೀಣಾ, ಲಕ್ಷಣ್, ತ್ಯಾಗರಾಜ, ನಿರಾಲ್, ಸೂಹೇಲ್ ಬೇಗ್, ಶಿವಮಾಧು ಮತ್ತಿತರರಿದ್ದರು.

 

Translate »