ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆಯನ್ನು ಎದುರಿಸಲಿವೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿಂದು ಈ ವಿಷಯ ಸ್ಪಷ್ಟಪಡಿಸಿ, ಸ್ಥಾನಗಳ ಹಂಚಿಕೆ ಕುರಿತು ಚುನಾವಣಾ ಪೂರ್ವದಲ್ಲಿ ನಿರ್ಧರಿಸಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಬಹುಮತ ಲಭ್ಯವಾಗದ ಹಿನ್ನೆಲೆಯಲ್ಲಿ ಜಾತ್ಯಾತೀತ ಪಕ್ಷಗಳು ಒಂದಾಗಿ ಸರ್ಕಾರ ರಚಿಸಲಾಗಿದೆ. ಇದೇ ಮೈತ್ರಿ ಮತ್ತು ಒಗ್ಗಟ್ಟು ಮುಂಬರುವ ಲೋಕಸಭಾ ಚುನಾವಣೆಗೂ ಇರಲಿದೆ ಎಂದರು.