ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಮೈಸೂರು

ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ

October 3, 2018

ಬೆಂಗಳೂರು: ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸರ್ಕಾರದಲ್ಲಿ ಪಾಲುದಾರ ಪಕ್ಷವಾದ ಜೆಡಿಎಸ್ ಮತ್ತು ಕಾಂಗ್ರೆಸ್ ಸೀಟು ಹಂಚಕೆ ಮಾಡಿಕೊಂಡು ಕಣಕ್ಕಿಳಿಯಲು ನಿರ್ಧರಿಸಿವೆ.

ಉಪ ಚುನಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಖಾಸಗಿ ಹೊಟೇಲ್‍ವೊಂದರಲ್ಲಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಒಟ್ಟಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಕುರಿತು ದೆಹಲಿ ವರಿಷ್ಠರೊಟ್ಟಿಗೆ ಚರ್ಚೆ ನಡೆಸಲು ನಾಗ್ಪುರಕ್ಕೆ ತೆರಳಿದ್ದಾರೆ.

ಇತ್ತ ಮುಖ್ಯಮಂತ್ರಿಯವರು ಸರ್ಕಾರದ ಭದ್ರತೆ ಮತ್ತು ಉಪ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡು ಕಣಕ್ಕಿಳಿಯುವ ಸಂಬಂಧ ಪರಮೇಶ್ವರ್ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲೇ ಕೊಂಡುಕೊಳ್ಳಲು ಒಪ್ಪಿಗೆಯಾಗಿದೆ.

ಇದರಿಂತೆ ಕುಮಾರಸ್ವಾಮಿ ಅವರಿಂದ ತೆರವಾಗಿದ್ದ ರಾಮನಗರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‍ಗೂ, ಅಪಘಾತದಲ್ಲಿ ಜಮಖಂಡಿ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸಿದ್ದುನ್ಯಾಮೆಗೌಡ, ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ.

ಇದೇ 10 ಇಲ್ಲವೆ 12ರಂದು ಮಂತ್ರಿ ಮಂಡಲ ವಿಸ್ತರಣೆ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿಯವರು ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಮತ್ತು ಕೆಲವರನ್ನು ಕೈಬಿಡುವ ಖಾತೆಗಳ ಬದಲಾವಣೆ ಕುರಿತಂತೆಯು ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ.

ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡದಂತಹವರನ್ನೇ ಸಚಿವರನ್ನಾಗಿ ನೇಮಿಸಿ ಎಂದು ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಯವರಿಗೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.

ಸಂಪುಟದಲ್ಲಿ ಕಾಂಗ್ರೆಸ್ ಪಾಲಿಗೆ ಸೇರಿದ ಆರು ಸ್ಥಾನಗಳನ್ನು ಭರ್ತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರಾಗವಾಗಿ ಸರ್ಕಾರ ನಡೆಸಲು ಗೊಂದಲ ನಿರ್ಮಾಣ ಮಾಡದವರನ್ನು ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳುವ ಉದ್ದೇಶದಿಂದ ಅವರ ಸಹಕಾರ ಕೋರಿದ್ದಾರೆ.

ಮಂತ್ರಿ ಮಂಡಲ ವಿಸ್ತರಣೆಗೂ ಮುನ್ನ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ಸೇರಲಿದ್ದು, ಅಲ್ಲಿ ವಿಷಯ ಪ್ರಸ್ತಾಪವಾದಾಗ ಒಗ್ಗಟ್ಟಿನಿಂದ ನಿರ್ಧಾರ ಕೈಗೊಳ್ಳುವ ತೀರ್ಮಾನಕ್ಕೆ ಬಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ನಿನ್ನೆ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಹಿರಿಯ ಸಚಿವರ ಜೊತೆ ಖಾಸಗಿಯಾಗಿ ಚರ್ಚೆ ನಡೆಸಿದ್ದರು.

Translate »