ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಬಿರುಸಿನ ಪ್ರಚಾರ
ಮೈಸೂರು

ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಬಿರುಸಿನ ಪ್ರಚಾರ

September 1, 2021

ಕಾಂಗ್ರೆಸ್ ಅಭ್ಯರ್ಥಿ ರಜಿನಿ ಅಣ್ಣಯ್ಯ ಪರವಾಗಿ ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಂಗಳವಾರ ಯರಗನಹಳ್ಳಿಯಲ್ಲಿ ಮತ ಯಾಚನೆ ಮಾಡಿದರು. ಕೋಮುವಾದಿ ಬಿಜೆಪಿ ಹಾಗೂ ಜಾತ್ಯತೀತತೆಯ ಮುಖವಾಡ ಹಾಕಿಕೊಂಡಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯರವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಅನೇಕ ಜನಪರ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಎರಡು ವರ್ಷದಿಂದ ಆಧಿಕಾರದಲ್ಲಿರುವ ಬಿಜೆಪಿ ಜನ ವಿರೋಧಿ ನೀತಿ ಅನುಸರಿಸಿದೆ. ಜೆಡಿಎಸ್ ಮೇಯರ್ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯೊಂದಿಗೆ ಕೈ ಜೋಡಿಸಿ ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದೆ ಎಂದು ಆರೋಪಿಸಿದರು. ಇದೆಲ್ಲವನ್ನು ಅರಿತು ಮತ ದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್, ವಾಸು, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರ್‍ನಾಥ್, ಮಾಜಿ ಮೇಯರ್‍ಗಳಾದ ಬಿ.ಪಿ. ಪ್ರಕಾಶ್, ಟಿ.ಬಿ.ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಅಯೂಬ್ ಖಾನ್, ನಗರಪಾಲಿಕೆ ಸದಸ್ಯರಾದ ಶಾಂತಕುಮಾರಿ, ಗೋಪಿ, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕಾರ್ಯದರ್ಶಿ ಎಂ.ಶಿವಣ್ಣ, ಬ್ಲಾಕ್ ಅಧ್ಯಕ್ಷ ಸೋಮ ಶೇಖರ್, ಮಹೇಂದ್ರ ಕಾಗಿನೆಲೆ, ಗೋಪಿನಾಥ್, ಕರುಣಾಕರ್ ಇನ್ನಿತರರು ಭಾಗವಹಿಸಿದ್ದರು.

ಇಂದು ಹೆಚ್‍ಸಿಎಂ ಪ್ರಚಾರ: ಬುಧವಾರ ಮಧ್ಯಾಹ್ನ 12 ಗಂಟೆಗೆ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ

Translate »