ಕಾಂಗ್ರೆಸ್ ಕಾರ್ಮಿಕ, ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆ
ಮೈಸೂರು

ಕಾಂಗ್ರೆಸ್ ಕಾರ್ಮಿಕ, ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆ

March 28, 2019

ಮೈಸೂರು: ಸಾಮಾ ಜಿಕ ನ್ಯಾಯ, ಸಂವಿಧಾನ ಆಶಯಗಳ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಅಧಿಕಾರದಿಂದ ದೂರ ಉಳಿದು ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಬೇಕಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಮೈಸೂರಿನ ದಾಸಪ್ಪ ವೃತ್ತದ ಬಳಿ ಯಿರುವ ಕಾಂಗ್ರೆಸ್ ಕಚೇರಿಯಲ್ಲಿ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧ ವಾರ ಹಮ್ಮಿಕೊಂಡಿದ್ದ ಪಕ್ಷದ ಜಿಲ್ಲಾ ಕಾರ್ಮಿಕ ವಿಭಾಗ ಹಾಗೂ ಅಲ್ಪಸಂಖ್ಯಾ ತರ ವಿಭಾಗದ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸಮಸ್ಯೆಗಳನ್ನು ಬಗೆಹರಿ ಸಲು ಸಮರ್ಥರನ್ನು ಆಯ್ಕೆ ಮಾಡುವ ಮಹತ್ತರ ಚುನಾವಣೆ ಇದು. ಸ್ವಾತಂತ್ರ್ಯದ ಬಳಿಕ 50 ವರ್ಷಕ್ಕೂ ಹೆಚ್ಚು ಕಾಲ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ರಾಷ್ಟ್ರೀಯ ಹಿತಾಸಕ್ತಿಗೆ ಅನುಗುಣವಾಗಿ ನಡೆದುಕೊಂಡಿತು. ಬಡತನ ನಿರ್ಮೂ ಲನೆ, ಕೈಗಾರಿಕೆ-ಕೃಷಿಗೆ ಪೂರಕವಾದ ಕಾರ್ಯಕ್ರಮಗಳನ್ನು ಕಾಂಗ್ರೆಸ್ ನೀಡಿದೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭ ದಲ್ಲಿ ದೇಶದಲ್ಲಿ ಹಸಿರು ಕ್ರಾಂತಿಗೆ ನಾಂದಿ ಹಾಡಲಾಯಿತು ಎಂದರು.

ಉದ್ಯೋಗ ಖಾತರಿ, ಆಹಾರ ಭದ್ರತೆಗೆ ಯೋಜನೆ ನೀಡಿದ ಹೆಗ್ಗಳಿಕೆ ಕಾಂಗ್ರೆಸ್‍ಗೆ ಸಲ್ಲುತ್ತದೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೆ ಇಂದು ದೇಶದಲ್ಲಿ ಕೋಮು ವಾದ-ಮೂಲಭೂತವಾದದ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುವ ಬಿಜೆಪಿಯಲ್ಲಿ ಅಧಿಕಾರ ಇದ್ದು, ಕಾಂಗ್ರೆಸ್ ಕೈಗೆ ಅಧಿ ಕಾರ ದೊರೆಯದಿದ್ದರೆ ಸಂಕಷ್ಟ ಎದು ರಾಗಲಿದೆ ಎಂದು ಹೇಳಿದರು.

ನೋಟು ಅಪಮೌಲ್ಯೀಕರಣದಿಂದ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳು ಸಂಕಷ್ಟ ಅನುಭವಿಸುವಂತಾಗಿದೆ. ಅಲ್ಲದೆ ಈ ಕ್ರಮದಿಂದ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಬೆನ್ನು ಮೂಳೆ ಮುರಿಯಲಾಗಿದೆ. ಬಿಜೆಪಿ ಸರ್ಕಾರ 1 ಲಕ್ಷ ಎಸ್‍ಸಿ-ಎಸ್‍ಟಿ ಬ್ಯಾಕ್‍ಲಾಗ್ ಹುದ್ದೆ ಗಳನ್ನು ರದ್ದುಗೊಳಿಸಿದೆ ಎಂದು ಆರೋ ಪಿಸಿದರು. ಪ್ರಾಸ್ತಾವಿಕವಾಗಿ ಮಾತ ನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಸುಳ್ಳು ಮತ್ತು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿ ರುವ ಬಿಜೆಪಿ ಮಣಿಸಲು ಹಾಗೂ ಸಂವಿಧಾನ ರಕ್ಷಣೆಗೆ ಕಾಂಗ್ರೆಸ್-ಜೆಡಿಎಸ್ ಒಂದಾಗಿವೆ. ಸಭೆಯಲ್ಲಿ ಪಾಲ್ಗೊಂಡಿರುವ ಪದಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿ ಯಲ್ಲಿ ಸ್ಥಳೀಯ ಜೆಡಿಎಸ್ ಮುಖಂಡ ರೊಂದಿಗೆ ಸಮನ್ವಯದಿಂದ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು. ಎಐಸಿಸಿ ವಕ್ತಾರೆ ಐಶ್ವರ್ಯ ಮಹದೇವ್, ನಗರಾಧ್ಯಕ್ಷ ಆರ್.ಮೂರ್ತಿ, ಕಾರ್ಮಿಕ ವಿಭಾಗದ ಅಧ್ಯಕ್ಷ ಮಾವಿನಹಳ್ಳಿ ರವಿ ಸೇರಿದಂತೆ ಮತ್ತಿತರರು ಹಾಜರಿದ್ದರು.

 

Translate »