ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ  ಭೇಟಿ ಮಾಡಿದ ಸಚಿವ ಸಾ.ರಾ.ಮಹೇಶ್
ಮೈಸೂರು

ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಭೇಟಿ ಮಾಡಿದ ಸಚಿವ ಸಾ.ರಾ.ಮಹೇಶ್

March 28, 2019

ಮಂಡ್ಯದಲ್ಲಿ ನಿಖಿಲ್ ಗೆಲುವಿಗೆ ಸಹಕರಿಸಲು ಮನವಿ
ಮೈಸೂರು: ಮಂಡ್ಯ ಲೋಕಸಭಾ ಚುನಾವಣಾ ಕಣ ಗರಿ ಗೆದರಿದ್ದು, ಜೆಡಿಎಸ್-ಕಾಂಗ್ರೆಸ್ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸುತ್ತಿದೆ.

ಪ್ರವಾಸೋದ್ಯಮ ಸಚಿವ ಹಾಗೂ ಜೆಡಿಎಸ್ ನಾಯಕ ಸಾ.ರಾ.ಮಹೇಶ್ ಬುಧವಾರ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಅವರನ್ನು ಅವರ ಮೈಸೂರು ನಿವಾಸದಲ್ಲಿ ಭೇಟಿ ಮಾಡಿದ್ದರು. ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಅವರ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ, ಸಾ.ರಾ.ಮಹೇಶ್ ಮತ್ತು ನಾನು ಗೆಳೆಯರು. ಇದು ಸಹಜ ಭೇಟಿ. ನನಗೆ ಬೆಂಗಳೂರು ದಕ್ಷಿಣ ಮತ್ತು ಕಲಬುರ್ಗಿ ಕ್ಷೇತ್ರಗಳಲ್ಲಿ ಚುನಾವಣಾ ಕೆಲಸ ಇದೆ. ಹಾಗಾಗಿ ನಾನು ಮಂಡ್ಯ ಚುನಾವಣೆಯಲ್ಲಿ ಸಕ್ರಿಯವಾಗಿ ಇರಲಾಗುತ್ತಿಲ್ಲ ಎಂದು ಹೇಳಿದರು.

Translate »