ಕಾಂಗ್ರೆಸ್ ಶಾಸಕರು, ಸಂಸದರ 1  ತಿಂಗಳ ವೇತನ ಪ್ರವಾಹ ಸಂತ್ರಸ್ತರಿಗೆ
ಕೊಡಗು

ಕಾಂಗ್ರೆಸ್ ಶಾಸಕರು, ಸಂಸದರ 1  ತಿಂಗಳ ವೇತನ ಪ್ರವಾಹ ಸಂತ್ರಸ್ತರಿಗೆ

August 20, 2018

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಂಸದರು, ಶಾಸಕರು ಒಂದು ತಿಂಗಳ ವೇತನ ವನ್ನು ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಕ್ಕೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಭಾನುವಾರ ಹೇಳಿದ್ದಾರೆ. ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಭಾಗವಹಿ ಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ನೀಡಲು 1 ತಿಂಗಳ ವೇತನ ನೀಡುವ ತೀರ್ಮಾನ ತೆಗೆದು ಕೊಳ್ಳಲಾಗಿದೆ. ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ ಅವರ ನೇತೃತ್ವದಲ್ಲಿ ತುರ್ತು ಪರಿಹಾರ ಸಮಿತಿಯನ್ನು ರಾಹುಲ್ ಗಾಂಧಿ ಅವರು ರಚನೆ ಮಾಡಿದ್ದಾರೆ. ಈ ಸಮಿತಿಯು ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಹೇಳಿದರು. ಕೊಡಗು ಮತ್ತು ಕೇರಳದ ಪ್ರವಾಹ ಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಪ್ರಧಾನಿ ಅವರಿಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ ಎಂದರು ಅವರು ತಿಳಿಸಿದರು.

Translate »