ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಅಹೋರಾತ್ರಿ ಧರಣ
ಮೈಸೂರು

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಅಹೋರಾತ್ರಿ ಧರಣ

April 15, 2022

ಬೆಂಗಳೂರು,ಏ.೧೪(ಕೆಎAಶಿ)-ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ವಜಾಗೊಳಿಸಿ ಬಂಧಿಸುವAತೆ ಆಗ್ರಹಿಸಿ, ಕಾಂಗ್ರೆಸ್ ಅಹೋರಾತ್ರಿ ಧರಣ ಆರಂ ಭಿಸಿದೆ. ವಿಧಾನಸೌಧ ಹಾಗೂ ಹೈಕೋರ್ಟ್ನ ಮುಂಭಾ ಗದ ಕೇಂದ್ರದಲ್ಲಿ ಕಾಂಗ್ರೆಸ್ ನಾಯಕರು ಧರಣ ಆರಂಭಿಸಿ, ವಿನೂತನ ಪ್ರತಿಭಟನೆ ಆರಂಭಿಸಿದ್ದಾರೆ.

ಈಶ್ವರಪ್ಪ ಅವರನ್ನು ಸಂಪುಟದಿAದ ತಕ್ಷಣ ವಜಾ ಗೊಳಿಸಿ, ತಕ್ಷಣವೇ ಬಂಧಿಸಬೇಕೆAದು ಆಗ್ರಹಿಸಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿ ಷತ್ತಿನ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಮುಖಂ ಡರು ಧರಣ ಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಂಬAಧ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಾವು ವಿಧಾನಸೌಧ ಮತ್ತು ಹೈಕೋರ್ಟ್ ಮುಂಭಾಗದಲ್ಲಿ ೨೪ ತಾಸುಗಳ ಕಾಲ ಅಹೋರಾತ್ರಿ ಧರಣ ಆರಂಭಿಸಿದ್ದೇವೆ ಎಂದರು.

ಸಿಎA ನಿವಾಸಕ್ಕೆ ಘೇರಾವ್‌ಗೆ ಯತ್ನಿಸಿ, ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆಯಾದ ನಂತರ ಇಂತಹ ಕ್ರಮಕ್ಕೆ ಮುಂದಾಗಿದ್ದೇವೆ. ಮುಖ್ಯಮಂತ್ರಿ ಗಳು ಭ್ರಷ್ಟರನ್ನು ರಕ್ಷಣೆ ಮಾಡಿ ಭ್ರಷ್ಟರ ನಾಯಕರಂತೆ ವಾದ ಮಂಡಿಸುತ್ತಿದ್ದಾರೆ. ಇದು ಅವರ ಸ್ಥಾನಕ್ಕೆ ಗೌರವ ತರುವುದಿಲ್ಲ. ನಾವು ನಮ್ಮ
ಹೋರಾಟ ಮುಂದುವರಿಸುತ್ತೇವೆ. ನಾಳೆಯಿಂದ ಜಿಲ್ಲಾಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಐದು ದಿನಗಳ ಪ್ರತಿಭಟನೆಯನ್ನು ಒಂದು ದಿನ ಮುಂದೂಡಿದ್ದು, ನಾಡಿದ್ದು ಅಂದರೆ ೧೬ರಿಂದ ಪ್ರತಿಭಟನೆ ಮಾಡಲಾಗುವುದು. ಇಂದು ನಾವು ೨೪ ಗಂಟೆಗಳ ಹಗಲು-ರಾತ್ರಿ ಧರಣ ಹಮ್ಮಿಕೊಂಡಿದ್ದು, ಶಾಸಕಾಂಗ ಹಾಗೂ ನ್ಯಾಯಾಂಗದ ಬಾಗಿಲಲ್ಲಿ ನಿಂತು ನ್ಯಾಯ ಕೇಳುತ್ತಿದ್ದೇವೆ. ನ್ಯಾಯ ಸಿಗಬೇಕು. ಈ ಸರ್ಕಾರ ಭ್ರಷ್ಟ ಸರ್ಕಾರ. ಸಂತೋಷ್ ಬಿಜೆಪಿ ಕಾರ್ಯಕರ್ತ. ಅವನಿಂದಲೇ ೪೦% ಕಮಿಷನ್ ಸುಲಿಗೆ ಮಾಡುತ್ತಿರು ವಾಗ ಬೇರೆಯವರಿಂದ ಹೇಗೆ ಸುಲಿಗೆ ಮಾಡುತ್ತಿರಬಹುದು. ಸಂತೋಷ್ ಪಾಟೀಲ್ ಅವರ ಪತ್ನಿ ಹಾಗೂ ತಾಯಿ ನಮಗೆ ಎಲ್ಲ ವಿಚಾರ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಸತ್ಯಾಂಶ ಬಿಚ್ಚಿಟ್ಟಿದ್ದಾರೆ. ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಅವರಿಗೆ ಕಪುö್ಪ ಮಸಿ ಬಳಿಯಲು ಪ್ರಯತ್ನಿಸುತ್ತಿದೆ. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು. ಬಿಜೆಪಿ ಬೇಕಾದರೆ ಅವರಂತಹ ಮುತ್ತುರತ್ನಗಳನ್ನು ತಮ್ಮ ಕಚೇರಿಯಲ್ಲಿ ಇಟ್ಟುಕೊಳ್ಳಲಿ. ಇಂತಹ ಮುತ್ತುರತ್ನಗಳು ನಿಮ್ಮಲ್ಲಿದ್ದರೇನೇ ಒಳ್ಳೆಯದು. ಮಹಿಳೆಯರು ಮೂಗುತಿ ಹಾಗೂ ಓಲೆಯಲ್ಲಿ ಮುತ್ತುರತ್ನಗಳನ್ನು ಇಟ್ಟುಕೊಂಡAತೆ ಬಿಜೆಪಿ ಲಂಚ ಹಾಗೂ ಮಂಚದವರನ್ನು ಪಕ್ಕದಲ್ಲಿ ಇಟ್ಟುಕೊಳ್ಳಲಿ.

 

Translate »