ಕೃಷಿ ಕಾನೂನುಗಳ ವಿರುದ್ಧ ಜ.15ರಂದು ದೇಶಾದ್ಯಂತ  ರಾಜಭವನಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಕೃಷಿ ಕಾನೂನುಗಳ ವಿರುದ್ಧ ಜ.15ರಂದು ದೇಶಾದ್ಯಂತ ರಾಜಭವನಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ

January 10, 2021

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 42 ದಿನಗಳಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಜನವರಿ 15 ರಂದು ದೇಶಾದ್ಯಂತ ರಾಜಭವನಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಪ್ರಕಟಿಸಿದೆ. “ಕೇಂದ್ರ ಸರ್ಕಾರ ಜನರ ಬಗ್ಗೆ ತನ್ನ ಕರ್ತವ್ಯವನ್ನು ಏಕೆ ಪೂರೈಸುತ್ತಿಲ್ಲ. ಸರ್ಕಾರವನ್ನು ಕೆಲವೇ ಕೆಲವು ಬಂಡವಾಳಶಾಹಿಗಳಿಗೆ ಮಾರಲಾಗುತ್ತಿದ್ದು, ಇದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಜ.15ರಂದು `ಕಿಸಾನ್ ಅಧಿಕಾರ ದಿವಾಸ್’ ಆಚರಿಸಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

Translate »