ಆಪರೇಷನ್ ಕಮಲ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಆಪರೇಷನ್ ಕಮಲ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ

February 10, 2019

ಮೈಸೂರು: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಮುರಿಯಲು ಬಿಜೆಪಿ ನಾಯಕರು ಆಪರೇಷನ್ ಕಮಲಕ್ಕೆ ಕೈ ಹಾಕುವ ಮೂಲಕ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋ ಪಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿಚೌಕದ ಬಳಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಬಿಜೆಪಿ ಪಕ್ಷಕ್ಕೆ ಬಹುಮತ ಇಲ್ಲವಾದರೂ ಸರ್ಕಾರ ರಚನೆಯ ಕನಸು ಕಾಣುತ್ತಿದೆ. ವಾಮ ಮಾರ್ಗದಲ್ಲಿ ಮೈತ್ರಿ ಸರ್ಕಾರ ಬೀಳಿಸಲು ಹವಣಿಸುತ್ತಿರುವ ಬಿಜೆಪಿ ನಾಯಕರು ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುವಂತೆ ನಡೆದು ಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಬಿಜೆಪಿ ನಾಯಕರು ನಡೆಸು ತ್ತಿರುವ ಕುತಂತ್ರಗಳಿಗೆ ಅವರ ಪಕ್ಷದ ವರಿ ಷ್ಠರು ಕುಮ್ಮಕ್ಕು ನೀಡುತ್ತಿದ್ದಾರೆ. ಸ್ಟಾರ್ ಹೋಟೆಲ್‍ಗಳಲ್ಲಿ ಕುದುರೆ ವ್ಯಾಪಾರ ಮಾಡುವುದರಲ್ಲಿ ಬಿಜೆಪಿಯವರು ನಿರತರಾಗಿ ದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ ಯೂರಪ್ಪ ಮೈತ್ರಿ ಸರ್ಕಾರ ಕೆಡವಲು ಆಪ ರೇಷನ್ ಕಮಲ ನಡೆಸುತ್ತಿದ್ದು, ಇದಕ್ಕೆ ಸಂಬಂ ಧಿಸಿದಂತೆ ಅವರ ಧ್ವನಿ ಮುದ್ರಿಕೆ ವೈರಲ್ ಸಹ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿ ಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಯಡಿಯೂರಪ್ಪನವರು ಅಧಿ ಕಾರದ ಆಸೆಗಾಗಿ ರಾಜ್ಯ ಮೈತ್ರಿ ಸರ್ಕಾರ ವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಕೋಟಿ ಕೋಟಿ ಹಣ ಸುರಿದು ಶಾಸಕರನ್ನು ಕೊಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಅನೈತಿಕ ನಡೆಯಾಗಿದ್ದು, ಮೈತ್ರಿ ಸರ್ಕಾ ರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಲಜ್ಜೆಗೇಡಿತನದಿಂದ ಬಿಜೆಪಿಯವರು ವರ್ತಿ ಸುತ್ತಿದ್ದಾರೆ ಎಂದು ಕಿಡಿಕಾರಿದರು. ಮಾಜಿ ಶಾಸಕ ವಾಸು, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‍ಕುಮಾರ್, ನಗರಾಧ್ಯಕ್ಷ ಮೂರ್ತಿ, ಮಾಜಿ ಮೇಯರ್ ಬಿ.ಕೆ.ಪ್ರಕಾಶ್, ಪಾಲಿಕೆ ಮಾಜಿ ಸದಸ್ಯ ಪ್ರಶಾಂತಗೌಡ ಸೇರಿ ದಂತೆ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

Translate »