ಯತ್ನಾಳ್ ಹೇಳಿಕೆ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಯತ್ನಾಳ್ ಹೇಳಿಕೆ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ

February 27, 2020

ಮೈಸೂರು, ಫೆ.26(ಎಂಕೆ)- ಸ್ವಾತಂತ್ರ್ಯ ಹೋರಾಟ ಗಾರ ಹೆಚ್.ಎಸ್.ದೊರೆಸ್ವಾಮಿ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ನಗರದ ಗಾಂಧಿವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಶಾಸಕ ಯತ್ನಾಳ್ ಕೂಡಲೇ ಹೆಚ್.ಎಸ್.ದೊರೆಸ್ವಾಮಿ ಅವರಲ್ಲಿ ಕ್ಷಮೆ ಕೋರ ಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ಗಾಂಧಿ ಜೊತೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ 102 ವರ್ಷದ ಹಿರಿಯ ದೊರೆಸ್ವಾಮಿ ಅವರು ಸಮ ಸಮಾಜ ನಿರ್ಮಾಣಕ್ಕಾಗಿ ಹೋರಾಡುತ್ತಿದ್ದಾರೆ. ಅಂತಹ ಹೋರಾಟ ಗಾರರಿಗೆ ಯತ್ನಾಳ್ ಅವಮಾನ ಮಾಡಿದ್ದಾರೆ. ಯುವಜನ ರಲ್ಲಿ ಹಿಂದುತ್ವದ ವಿಷ ಬೀಜ ಬಿತ್ತುತ್ತಿದ್ದಾರೆ. ಪ್ರಜಾ ಪ್ರಭುತ್ವವನ್ನು ಆಟದ ಮೈದಾನದಂತೆ ಮಾಡಿಕೊಂಡಿದ್ದಾರೆ ಎಂದು ಯತ್ನಾಳ್ ವಿರುದ್ಧ ಕಿಡಿಕಾರಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ದೆಹಲಿಯಲ್ಲಿ ಆಸ್ತಿಪಾಸ್ತಿ ನಾಶವಾಗಿ, ಜನರು ಸಾಯುತ್ತಿ ದ್ದರೆ ಮೋದಿ ಮತ್ತು ಶಾಗೆ ಖುಷಿ ಆಗುತ್ತದೆ ಎಂದು ಟೀಕಿಸಿ ದರು. ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ, ಮಾಜಿ ಶಾಸಕ ವಾಸು, ಕಾಂಗ್ರೆಸ್ ನಗರಾಧ್ಯಕ್ಷ ಮೂರ್ತಿ, ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್, ಮಾಜಿ ಮೇಯರ್‍ಗಳಾದ ಮೋದಾ ಮಣಿ, ಪುಷ್ಪಲತಾ, ಮಾಜಿ ಉಪ ಮೇಯರ್ ಪುಷ್ಪವಲ್ಲಿ, ಪಾಲಿಕೆ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಲಕ್ಷಣ, ಮಹೇಶ್, ಹೆಡತಲೆ ಮಂಜುನಾಥ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

Translate »