ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

September 20, 2021

ಮೈಸೂರು,ಸೆ.೧೯(ಪಿಎಂ)-ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ದೇಶದ ಬಡ ಜನತೆಯನ್ನು ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಡಾ.ಅಂಬೇಡ್ಕರ್ ವೃತ್ತದಲ್ಲಿ (ಎಫ್‌ಟಿಎಸ್ ಸರ್ಕಲ್) ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮೂಲಕ ಬಡ ಜನತೆಯ ಬದುಕಿನ ಮೇಲೆ ಬರೆ ಎಳೆದಿದೆ. ಪೆಟ್ರೋಲ್ ಲೀ.ಗೆ ೧೦೦ ರೂ. ಗಡಿ ದಾಟಿದ್ದು, ಅಡುಗೆ ಅನಿಲದ ಸಿಲಿಂಡರ್ ಬೆಲೆ ಸಾವಿರ ರೂ. ಗಡಿ ತಲುಪಿದೆ. ಕೇಂದ್ರ ಸರ್ಕಾರದ ಈ ಬೆಲೆ ಏರಿಕೆ ನೀತಿಯಿಂದ ಕೋವಿಡ್‌ನಿಂದ ತತ್ತರಿಸಿದ್ದ ಬಡ ಜನತೆ ಇದೀಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಕಳೆದ ಮೇ ತಿಂಗಳಿAದ ೨೬ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಕಡಿಮೆ ಮಾಡುವ ಜೊತೆಗೆ ಯುಪಿಎ ಸರ್ಕಾರದ ಅವಧಿಯಲ್ಲಿದ್ದ ಸಬ್ಸಿಡಿ ಯೋಜನೆ ಮುಂದುವರೆಸ ಬೇಕು. ಅಲ್ಲದೆ ತೈಲವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿದರು.ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್, ಪಾಲಿಕೆ ಮಾಜಿ ಸದಸ್ಯ ಉದಯಕುಮಾರ್, ಮುಖಂಡ ರಾದ ರಾಘವೇಂದ್ರ, ವಿಶ್ವರಾಜ್, ಶರತ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »