ಸರ್ಕಾರದ ವಿರುದ್ಧ ಕೆರಳಿದ ಕಾಂಗ್ರೆಸ್: ಬೆಳಗಾವಿಯಲ್ಲಿ ಬೃಹತ್ ಟ್ರಾಕ್ಟರ್ ರ್ಯಾಲಿ
News

ಸರ್ಕಾರದ ವಿರುದ್ಧ ಕೆರಳಿದ ಕಾಂಗ್ರೆಸ್: ಬೆಳಗಾವಿಯಲ್ಲಿ ಬೃಹತ್ ಟ್ರಾಕ್ಟರ್ ರ್ಯಾಲಿ

December 17, 2021

ಬೆಂಗಳೂರು, ಡಿ. 16(ಕೆಎಂಶಿ)- ಆಡಳಿತಾರೂಢ ಬಿಜೆಪಿ ಸರ್ಕಾರ ಮಿತಿಮೀರಿದ ಭ್ರಷ್ಟಾಚಾರ ನಡೆಸುತ್ತಿದೆ, ರೈತರ ಸಂಕಷ್ಟಕ್ಕೆ ನೆರವಾಗುತ್ತಿಲ್ಲ. ಮತಾಂತರ ನಿಷೇಧ ಕಾಯ್ದೆಯನ್ನು ಬಲವಂತವಾಗಿ ಜಾರಿಗೆ ತರುತ್ತಿದೆ ಎಂದು ವಿರೋಧಿಸಿ, ಕಾಂಗ್ರೆಸ್ ಇಂದು ಬೆಳಗಾವಿಯಲ್ಲಿ ಬೃಹತ್ ಜಾಥಾ ನಡೆಸಿ ಸುವರ್ಣ ಸೌಧ ಮುತ್ತಿಗೆಗೆ ಮುಂದಾಯಿತು. ಆಡಳಿತದಲ್ಲಿ ಭ್ರಷ್ಟಾಚಾರ ತಾಂಡ ವವಾಡುತ್ತಿದೆ. ನೋಂದಾಯಿತ ಅಧಿಕೃತ ಗುತ್ತಿಗೆದಾರರ ಸಂಘವೇ ಶೇ.40 ಪರ್ಸೆಂಟ್ ಸರ್ಕಾರ ಎಂದು ಪ್ರಧಾನಿಯವರಿಗೆ ದೂರು ನೀಡಿದೆ. ಸರ್ಕಾರ ವೈಫಲ್ಯಗಳ ಸರಮಾಲೆಯಲ್ಲಿ ಸಿಲುಕಿದೆ ಎಂದು ಆರೋಪಿಸಿ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಪ್ರತಿ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಸೇರಿದಂತೆ ಹಿರಿಯ ಶಾಸಕರು ಮೆರ ವಣಿಗೆ ನಡೆಸಿ, ಸುವರ್ಣಸೌಧ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಯಿಂದ ಸುವರ್ಣ ಸೌಧದವರೆಗೂ ಟ್ರ್ಯಾಕ್ಟರ್ ರ್ಯಾಲಿ ನಡೆಸಿ, ಮುಖಂಡರು ಸೌಧದೊಳಗೆ ನುಗ್ಗಿಸಲು ಪ್ರಯತ್ನಿಸಿದರು.
ಈ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ತಮ್ಮ ನಾಯಕರ ಬೆಂಬಲಕ್ಕೆ ನಿಂತು, ತಡೆಗೋಡೆಗಳನ್ನು ತೆರೆಯುವ ಪ್ರಯತ್ನ ಮಾಡಿದರು. ಪೊಲೀಸರ ಬಿಗಿ ಬಂದೋಬಸ್ತ್ ನಡುವೆಯೂ ಮುಖಂಡರು ನುಗ್ಗುವ ಪ್ರಯತ್ನ ಮಾಡಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಸುವರ್ಣಸೌಧದ ಮುಂಬಾಗಿಲ ಬಳಿ ಸುಮಾರು 90 ನಿಮಿಷಗಳ ಕಾಲ ದೊಡ್ಡ ನಾಟಕೀ ಯವೇ ನಡೆಯಿತು. ಮುಖಂಡರ ಮಾತಿಗೆ ಬಗ್ಗದ ಪೊಲೀಸರು ಅವರನ್ನು ಬಿಸಿಲಿನಲ್ಲೇ ನಿಲ್ಲಿಸಿದ್ದರು. ಇದ ರಿಂದ ರೋಷಗೊಂಡ ಸಿದ್ದರಾಮಯ್ಯ, ವಿಧಾನಸಭಾ ಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಪರ್ಕಿಸಿ, ಶಾಸಕರು ವಿಧಾನಸಭೆ ಪ್ರವೇಶಕ್ಕೆ ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ ಎಂದು ದೂರಿದರು.

ಈ ಬೆಳವಣಿಗೆಯ ನಂತರ ಕಾರ್ಯಕರ್ತರನ್ನು ದೂರ ವಿಟ್ಟು ಶಾಸಕರಿಗೆ ಮಾತ್ರ ಸುವರ್ಣಸೌಧ ಪ್ರವೇಶಿಸಲು ಪೊಲೀಸರು ಅವಕಾಶ ಮಾಡಿಕೊಟ್ಟರು. ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಈ ರಾಜ್ಯ ವಿಶ್ವ ಮಟ್ಟದಲ್ಲೇ ಅತಿ ದೊಡ್ಡ ಭ್ರಷ್ಟ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರೇ ಹೇಳಿದ್ದಾರೆ. ಪ್ರತಿ ಹಂತದಲ್ಲೂ ಈ ಸರ್ಕಾರದಲ್ಲಿ ಲಂಚಾವತಾರ ತಾಂಡವವಾಡುತ್ತಿದೆ. ಇದರಿಂದ ಗುಣಮಟ್ಟದ ಕೆಲಸ ಸಾಧ್ಯವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಯಾವುದೇ ದಾಖಲೆ ಇಲ್ಲದೇ ನಮ್ಮ ಸರ್ಕಾರವನ್ನು 10% ಸರ್ಕಾರ ಎಂದು ಹೇಳಿದ್ದರು. ಆದರೆ ಈಗ ಅವರ ಸರ್ಕಾರದ ವಿರುದ್ಧ ದಾಖಲೆಗಳೇ ಇವೆ. ಈ ವಿಚಾರವಾಗಿ ತನಿಖೆ ನಡೆಸಿ, ನಾವು ತಪ್ಪು ಮಾಡಿದ್ದರೆ ನಮ್ಮ ಅವಧಿಯಲ್ಲಿನ ಕಾಮಗಾರಿ ಗಳನ್ನು ಸೇರಿಸಿ ತನಿಖೆ ಮಾಡಿ ಎಂದು ಹೇಳುತ್ತಿದ್ದೇವೆ.

40% ಕಮಿಷನ್ ಸೇರಿದಂತೆ ಹಲವು ವಿಚಾರಗಳಿಂದ ರಾಜ್ಯದ ಗೌರವಕ್ಕೆ ಧಕ್ಕೆಯಾಗುತ್ತಿದೆ. ನಾನು ಐದಾರು ವಿಷಯಗಳನ್ನು ಇಟ್ಟುಕೊಂಡಿದ್ದೇನೆ. ಈ ಭಾಗದ ರೈತರ ಬೆಳೆಹಾನಿಗೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಕೇಂದ್ರದ ಅನುದಾನ ಕಾಯದೆ ಅವರಿಗೆ ಪರಿಹಾರ ನೀಡಿ, ಮನೆ ಕಟ್ಟಿಕೊಡಿ ಎಂದು ಯಡಿಯೂರಪ್ಪನವರೇ ಹೇಳಿದ್ದಾರೆ. ಅವರಿಗೆ ನಾವು ಧ್ವನಿ ಸೇರಿಸುತ್ತೇವೆ. ಇದುವರೆಗೂ ಒಬ್ಬರಿಗೂ ಒಂದು ಪೈಸೆ ಪರಿಹಾರ ಸಿಕ್ಕಿಲ್ಲ ಎಂದರು.
ಕೋವಿಡ್‍ನಿಂದ ನಷ್ಟ ಅನುಭವಿಸಿದವರಲ್ಲಿ ಯಾರಿಗೆ ಪರಿಹಾರ ಕೊಟ್ಟಿದ್ದಾರೆ ಎಂಬ ಪಟ್ಟಿ ಬಿಡುಗಡೆ ಮಾಡಲಿ. ಸತ್ತವರಿಗೆ ಕೊಟ್ಟಿದ್ದಾರಾ ಇಲ್ಲ. ಚುನಾವಣೆ ಸಮಯದಲ್ಲಿ ಪ್ರಚಾರಕ್ಕೆ ಬಂದಾಗ ನಾವು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಸುಮಾರು 50 ಮಂದಿ ನೋವು ತೋಡಿಕೊಂಡಿದ್ದರು.

ಈ ರೀತಿ ಎಲ್ಲ ಕ್ಷೇತ್ರದಲ್ಲೂ ಸರ್ಕಾರ ವಿಫಲವಾಗಿದೆ. ಈ ವಿಚಾರದಲ್ಲಿ ಸರ್ಕಾರ ತಪ್ಪು ಮಾಡಿದೆ ಎಂದು ಹೇಳಬೇಕಲ್ಲವೇ? ಹೀಗಾಗಿ ನಾವು ಒಂದು ದಿನ ರೈತರ ವಿಚಾರವಾಗಿ, ಮತ್ತೊಂದು ದಿನ ನೆರೆ ವಿಚಾರವಾಗಿ, ಈಗ ಭ್ರಷ್ಟಾಚಾರ ಹಾಗೂ 40% ಕಮಿಷನ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ.

ಇದು ಕೇವಲ ಬಿಜೆಪಿ ಸರ್ಕಾರವಲ್ಲ, ಸಂಯುಕ್ತ ಸರ್ಕಾರ .ಇದಕ್ಕೆ ಹೇಳೋರು ಕೇಳೋರು ಇಲ್ಲದಂತಾಗಿದೆ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ನಾವು ಜನರನ್ನು ಕರೆದುಕೊಂಡು ಹೋಗಬೇಕಾಗಿಲ್ಲ. ಜನ ಮತ ಹಾಕುವ ಮೂಲಕ ನಮಗೆ ಬೆಂಬಲ ನೀಡಿದ್ದಾರೆ.

Translate »