ಕಾಂಗ್ರೆಸ್ `ಟೆಂಡರ್ ಬಾಂಬ್’
News

ಕಾಂಗ್ರೆಸ್ `ಟೆಂಡರ್ ಬಾಂಬ್’

February 16, 2023

ಬೆಂಗಳೂರು, ಫೆ. 15 (ಕೆಎಂಶಿ)- ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಭ್ರಷ್ಟಾ ಚಾರದ ಆರೋಪ ಮತ್ತು ಪ್ರತ್ಯಾರೋಪ ಪ್ರತಿಧ್ವನಿಸಿದೆ.

ಇಂದಿಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕರು ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗ ರಣಗಳ ತನಿಖೆಗೆ ಆಯೋಗ ರಚಿಸುವುದಲ್ಲದೆ, ಎಲ್ಲ ಟೆಂಡರ್‍ಗಳನ್ನು ರದ್ದು ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿ ದ್ದಂತೆ ರಾಜ್ಯದಲ್ಲಿ ವಸೂಲಿ ಹೆಚ್ಚಿದೆ. ಇದನ್ನು ಸುಮ್ಮನೇ ಬಿಡುವುದಿಲ್ಲ ಎಂದರು. ಈ ಅಕ್ರಮ ಅವ್ಯವಹಾರದಲ್ಲಿ ಪಾಲುದಾರರಾಗಿರುವ ಅಧಿ ಕಾರಿಗಳು, ಗುತ್ತಿಗೆದಾರರು ಹಾಗೂ ರಾಜಕಾರಣಿ ಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದರು.
ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಗೊಳ್ಳುವ ಮುನ್ನವೇ ಎಲ್ಲಾ ಇಲಾಖೆಗಳಲ್ಲಿ ತರಾ ತುರಿಯಲ್ಲಿ ಟೆಂಡರ್ ಕರೆಯುತ್ತಿದ್ದಾರೆ. ಕೆಲವು ಟೆಂಡರ್ ಅನ್ನು ಒಂದಕ್ಕೆ ಎರಡರಷ್ಟು ದುಬಾರಿ ಯಲ್ಲಿ ನೀಡಿ, ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾ ಚಾರಕ್ಕೆ ಎಡೆಮಾಡಿ ಕೊಡುತ್ತಿದ್ದಾರೆ. ಬಿಜೆಪಿ ಆಡ ಳಿತದಲ್ಲಿ ಯಾರಿಗೆ ಸಚಿವ ಸ್ಥಾನ ದೊರೆತಿಲ್ಲವೋ ಅಂತಹವರು ಹಣ ಮಾಡಿಕೊಳ್ಳಲು ಈ ಟೆಂಡರ್ ಮೂಲಕ ರಹದಾರಿ ಮಾಡಿಕೊಟ್ಟಿದ್ದಾರೆ ಎಂದು ದೂರಿದರು. ಈ ಸರ್ಕಾರ ರಾಜ್ಯದ ಬೊಕ್ಕಸವನ್ನು ಯದ್ವಾತದ್ವಾ ಲೂಟಿ ಮಾಡಲು ಆರಂಭ ಮಾಡಿದೆ. ಶಾಸಕರಿಗೆ ದುಡ್ಡು ಮಾಡಿಕೊಡಲು ತರಾತುರಿ ಯಲ್ಲಿ ಕೆಬಿಜೆಎಲ್‍ನಲ್ಲಿ, ವಿಶ್ವೇಶ್ವರಯ್ಯ ನೀರಾವರಿ ನಿಗಮದಲ್ಲಿ, ಕರ್ನಾಟಕ ನೀರಾವರಿ ನಿಗಮದಲ್ಲಿ ಸಭೆಯನ್ನು ಕರೆದು ಯೋಜನೆಗಳಿಗೆ ಅನುಮೋದನೆ ಪಡೆಯಲಾಗುತ್ತಿದೆ. ಇದರಲ್ಲಿ ಪಾರದರ್ಶಕತೆ ಇಲ್ಲ. ಟೆಂಡರ್ ಹಣವನ್ನು ಕೂಡ ಎರಡು, ಮೂರು ಪಟ್ಟು ಹೆಚ್ಚಿಗೆ ಮಾಡಿಕೊಂಡಿದ್ದಾರೆ.ಇದು 40 ಪರ್ಸೆಂಟ್ ಕಮಿಷನ್‍ನ ಮುಂದುವರೆದ ಭಾಗ ಎಂದು ದೂರಿದರು. ಜನರ ತೆರಿಗೆ ಹಣವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾ ಬ್ದಾರಿ. ಆದರೆ ಇವರು ಟೆಂಡರ್ ಹಣವನ್ನು ಹೆಚ್ಚು ಮಾಡಿದ್ದಾರೆ, ಯಾರು ಹೆಚ್ಚು ಕಮಿಷನ್ ನೀಡು ತ್ತಾರೋ ಅವರಿಗೆ ಕಾಮಗಾರಿ ಕೊಡುತ್ತಿದ್ದಾರೆ. ತಮಗೆ ಬೇಕಾದ ಗುತ್ತಿಗೆದಾರರನ್ನು ಹುಡುಕಿ ಕೆಲಸ ನೀಡುತ್ತಿದ್ದಾರೆ.ಹೀಗೆ ಮಾಡಿ ಕಮಿಷನ್ ವಸೂಲಿ ಮಾಡಿಕೊಳ್ಳುತ್ತಿದ್ದಾರೆ. ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸುಮಾರು 20,000 ಕೋಟಿ ರೂ ಬಾಕಿ ಬಿಲ್ ಇದೆ. ಹತ್ತು ಪರ್ಸೆಂಟ್ ಕಮಿಷನ್ ಕೊಟ್ಟವರಿಗೆ ದುಡ್ಡು ಕೊಡುವ ಕೆಲಸ ನಡೆಯುತ್ತಿದೆ. ಇದು ಮುಖ್ಯಮಂತ್ರಿ ಕಚೇರಿಯಿಂದಲೇ ಆರಂಭವಾಗಿದ್ದು ಇದನ್ನು ತಡೆಗಟ್ಟಬೇಕಾದದ್ದು ಅಗತ್ಯ. ಇದನ್ನು ಸದನದಲ್ಲಿ ಕೂಡ ಪ್ರಸ್ತಾಪ ಮಾಡುತ್ತೇವೆ ಎಂದರು.

ಸರ್ಕಾರಕ್ಕೆ, ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಕಾನೂನುಬಾಹಿರವಾಗಿ ಈ ರೀತಿ ಮಾಡಿದರೆ ನೀವು ಸಿಕ್ಕಿಹಾಕಿಕೊಳ್ಳುತ್ತೀರಿ. ಈ ವಿಚಾರವನ್ನು ತಾರ್ತಿಕ ಅಂತ್ಯ ಕಾಣಿಸುವವರೆಗೆ ನಾವು ಬಿಡು ವುದಿಲ್ಲ. ನ್ಯಾಯಾಲಯದಲ್ಲಿ ಇವರ ವಿರುದ್ಧ ನಾವು ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ ಎಂದು ಎಚ್ಚರಿಸಿದರು. ರಾಜ್ಯ ದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸಲು ಆರಂಭ ವಾಗಿದೆ, ಹೀಗಾಗಿ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ನಾವು ತನಿಖಾ ಆಯೋಗ ರಚನೆ ಮಾಡಿ ಎಲ್ಲವನ್ನೂ ತನಿಖೆ ಮಾಡಿಸಿ, ಯಾರ ಮೇಲೆ ಭ್ರಷ್ಟಾಚಾರದ
ಆರೋಪಗಳಿವೆ ಅವೆಲ್ಲವನ್ನೂ ಬಯಲಿಗೆಳೆಯುತ್ತೇವೆ. ಇದಕ್ಕೆ ಪೂರಕವಾಗಿ ಗೂಳಿಹಟ್ಟಿ ಶೇಖರ್ ಅವರು ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದು ಕೆಬಿಜೆಎನ್‍ಎಲ್, ವಿಜಿಜೆಎಎನ್‍ಎಲ್, ಕೆಎನ್‍ಎನ್‍ಎಲ್ ಹೀಗೆ ಹಲವು ನೀರಾವರಿ ನಿಗಮಗಳಲ್ಲಿ ಅಕ್ರಮವಾಗಿ ನಡವಳಿಕೆಗಳನ್ನು ಮಾಡಿಕೊಂಡು ಒಂದೇ ದಿನ ಸುಮಾರು 18,000 ಕೋಟಿಗೆ ನೀಡಿರುವ ಟೆಂಡರ್, ವರ್ಕ್ ಆರ್ಡರ್ ರದ್ದುಪಡಿಸಿ ಮರು ಟೆಂಡರ್‍ಗೆ ಆದೇಶ ನೀಡಿರುವುದನ್ನು ರದ್ದು ಮಾಡಬೇಕು ಎಂದು ಪತ್ರ ಬರೆದಿದ್ದಾರೆ. ಈ ರೀತಿ ಎಲ್ಲಾ ಶಾಸಕರು ಹೇಳಿದ್ದಾರೆ, ಚುನಾವಣೆ ಕಾಲ ಬಂದಿರುವುದರಿಂದ ಹಣ ಸಂಗ್ರಹ ಮಾಡಿಕೊಳ್ಳಲು ರಾಜ್ಯದ ಖಜಾನೆಯನ್ನು ಲೂಟಿ ಮಾಡಲು ಹೊರಟಿದ್ದಾರೆ. ಪ್ರತೀ ಓಟಿಗೆ 6000 ರೂ. ನೀಡುತ್ತೇವೆ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ. ಇದನ್ನು ತಡೆಗಟ್ಟದೆ ಹೋದರೆ ರಾಜ್ಯ ಉಳಿಯುವುದಿಲ್ಲ. ಹೀಗಾಗಿ ಮಾಧ್ಯಮಗಳ ಮೂಲಕ ಅಧಿಕಾರಿಗಳಿಗೆ, ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕೆಂದೇ ಈ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದೇವೆ ಎಂದರು.

Translate »