ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ
ಮೈಸೂರು

ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

February 16, 2020

ಮೈಸೂರು, ಫೆ. 15(ಆರ್‍ಕೆ)- ಸರ್ಕಾರಿ ಉದ್ಯೋಗ ಮತ್ತು ಮುಂಬಡ್ತಿ ಮೂಲ ಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಮೈಸೂರಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಮಾಜಿ ಸಂಸದ ಆರ್.ಧ್ರುವ ನಾರಾಯಣ ಹಾಗೂ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯರ ನೇತೃತ್ವದಲ್ಲಿ ಗಾಂಧಿ ಸ್ಕ್ವೇರ್‍ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಒತ್ತಾಯಿಸಿದರು.

ಉತ್ತರಾಖಂಡ ಹೈಕೋರ್ಟ್ ಎಸ್ಸಿ, ಎಸ್ಟಿ ಹಾಗೂ ಓಬಿಸಿ ವರ್ಗದವರಿಗೆ ಮುಂಬಡ್ತಿ ಯಲ್ಲಿ ಮೀಸಲಾತಿ ನೀಡಬೇಕೆಂದು ನೀಡಿದ್ದ ತೀರ್ಪನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಆದೇಶ ನೀಡಿರುವುದರಿಂದ ಭಾರತ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಉಂಟಾಗಿದೆ ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಪಾದಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸಂವಿಧಾನದಲ್ಲೇ ಮೀಸಲಾತಿ ಸೌಲಭ್ಯ ಒದಗಿಸಿದ್ದರೂ, ಅದನ್ನು ತಪ್ಪಾಗಿ ಅರ್ಥೈಸಿಕೊಂಡು ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ವ್ಯಾಖ್ಯಾನಿಸಿರುವುದು ಸಮಂಜಸವಲ್ಲ ಎಂದ ಶಾಸಕ ಡಾ.ಯತೀಂದ್ರ ಸಿದ್ದ ರಾಮಯ್ಯ, ಇಂತಹ ಬೆಳವಣಿಗೆಗಳಿಗೆ ಕೋಮುವಾದಿಗಳೇ ಕಾರಣ ಎಂದು ಆರೋ ಪಿಸಿದರು. ಶತಮಾನಗಳಿಂದ ಸಾಮಾಜಿಕ, ಆರ್ಥಿಕ ಹಾಗೂ ಧಾರ್ಮಿಕವಾಗಿ ತುಳಿತಕ್ಕೊಳ ಗಾಗಿರುವ ಶೋಷಿತ ವರ್ಗಗಳಿಗೆ ಪೂರಕ ವಾಗಿ ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ನೀಡಲಾಗಿದೆ. ಸಮಾಜದಲ್ಲಿ ಎಲ್ಲಿಯವರೆಗೆ ಅಸಮಾನತೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನುಡಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದ ಅವರು, ಸಂಸತ್‍ಗೆ ಆರಿಸಿ ಹೋಗಿರುವ ದಲಿತ ಸಂಸದರು ಹಾಗೂ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿ, ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಮಾರ್ಪ ಡಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್, ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮಾಜಿ ಮೇಯರ್‍ಗಳಾದ ಪುಷ್ಪ ಲತಾ ಜಗನ್ನಾಥ್, ಪುಷ್ಪಲತಾ ಚಿಕ್ಕಣ್ಣ, ಅಯೂಬ್ ಖಾನ್, ಆರಿಫ್ ಹುಸೇನ್, ಟಿ.ಬಿ.ಚಿಕ್ಕಣ್ಣ, ಮೋದಾಮಣಿ, ಮುಖಂಡರಾದ ಹೆಡತಲೆ ಮಂಜುನಾಥ್, ಲತಾ ಸಿದ್ದಶೆಟ್ಟಿ, ಆರ್.ಧರ್ಮಸೇನ, ಹೆಚ್.ಎ.ವೆಂಕಟೇಶ್, ಸಿ.ಶ್ರೀಧರ್, ಲೋಕೇಶ್ ಪಿಯಾ, ಎಂ.ಶಿವಣ್ಣ, ಪಿ.ರಾಜು, ಭಾಸ್ಕರ್ ಎಲ್.ಗೌಡ, ಈಶ್ವರ್ ಚಕ್ಕಡಿ, ಮಂಜುಳಾ ಮಾನಸ, ಜಿ.ಸೋಮಶೇಖರ್, ಪಿ.ರಾಜು, ಎಂ.ಜಿ.ಕೊಪ್ಪಲು ರವಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »