ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಬಿರುಸಿನ ಮಾತಯಾಚನೆ
ಚಾಮರಾಜನಗರ

ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಬಿರುಸಿನ ಮಾತಯಾಚನೆ

April 24, 2018

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟ ಇಂದು ವೆಂಕಟಯ್ಯನ ಛತ್ರ ಹಾಗೂ ಯರಗನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರು ಹಾಗೂ ಮುಖಂಡರೂಂದಿಗೆ ಮನೆ ಮನೆಗೆ ತೆರಳಿ ಬಿರುಸಿನ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಗೊಂಡ ಅಭಿವೃದ್ಧಿ ಕೆಲಸಗಳು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಇಂದು ಮತಯಾಚಿಸುತ್ತಿದ್ದೇನೆ. ಜಿಲ್ಲೆಯ ಅಭಿವೃಧ್ದಿಗೆ ಸಾಕಷ್ಟು ಅನುದಾನ ತಂದು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸಗಳನ್ನು ಮಾಡಬೇಕಿದ್ದು ಮತದಾರರು ಈ ಬಾರಿಯು ತಮ್ಮನ್ನು ಬೆಂಬಲಿಸಬೇಕೆಂದು ಕೋರಿದರು.

ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ನವರು ರಾಜ್ಯದಲ್ಲಿ ಜನಪರ ಆಡಳಿತ ನೀಡಿ ಹಿಂದೆಂದೂ ಮಾಡದ ಅಭಿವೃದ್ಧಿ ಕೆಲಸಗಳು ಕಾಂಗ್ರೆಸ್ ಸರ್ಕಾರದಿಂದ ಆಗಿವೆ. ನೀಡಿದ ಭರವಸೆ ಈಡೇರಿಸಿ ಜನರ ಕಲ್ಯಾಣದ ಗುರು ಸಾಧಿಸಿದೆ. ಜನರ ಸಮಸ್ಯೆ ಆಲಿಸಿ ಮೂಲಭೂತ ಸೌಕರ್ಯ ಕಲ್ಪಿಸಿದ ಪುಟ್ಟರಂಗಶೆಟ್ಟಿ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿಕೊಂಡರು.

ಜಿಪಂ ಮಾಜಿ ಸದಸ್ಯರಾದ ಬಸವರಾಜ, ಕಾವೇರಿ ಶಿವಕುಮಾರ್, ಅರಕಲವಾಡಿ ಸೋಮನಾಯಕ ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಗ್ರಾಪಂ ಉಪಾಧ್ಯಕ್ಷ ಸಿದ್ದರಾಜು, ಮಹಿಳಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜಯಣ್ಣ, ಮುಖಂಡರಾದ ಶ್ರೀನಿವಾಸ್‍ನಾಯ್ಕ, ಗ್ರಾಪಂ ಮಾಜಿ ಅಧ್ಯಕ್ಷ ಸುಮಿತ್‍ಕುಮಾರ್, ಹೊಸೂರು ನಟೇಶ್, ಸೋಮಣ್ಣಗೌಡ, ಮಂಜು ಬಿಸಲವಾಡಿ, ಉಮೇಶ್, ನವೀನ್, ಮಹದೇವಸ್ವಾಮಿ, ಬಾಬು, ಡಿಸಿಸಿ ಕಾರ್ಯದರ್ಶಿ ಬಸವಣ್ಣ, ಕೋಡಿಮೋಳೆ ಪ್ರಕಾಶ್, ರಾಚಪ್ಪ, ತಾಪಂ ಮಾಜಿ ಅಧ್ಯಕ್ಷ ಪಿ.ಮಹಾಲಿಂಗಸ್ವಾಮಿ, ಚಿಕ್ಕಮಹದೇವ, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Translate »