ಡಿಕೆಶಿ ಮನವಿ ಪರಿಗಣಿಸಿ: ಇ.ಡಿ.ಗೆ ಹೈಕೋರ್ಟ್ ನಿರ್ದೇಶನ
ಮೈಸೂರು

ಡಿಕೆಶಿ ಮನವಿ ಪರಿಗಣಿಸಿ: ಇ.ಡಿ.ಗೆ ಹೈಕೋರ್ಟ್ ನಿರ್ದೇಶನ

February 8, 2019

ಬೆಂಗಳೂರು: ನವದೆಹಲಿಯಲ್ಲಿನ ತಮ್ಮ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ನೀಡಿರುವ ಸಮನ್ಸ್ ನಿಂದ ವಿನಾಯಿತಿ ಕೋರಿ ಸಚಿವ ಡಿ.ಕೆ.ಶಿವ ಕುಮಾರ್ ಮನವಿ ಸಲ್ಲಿಸಿದಲ್ಲಿ ಅದನ್ನು ಪರಿ ಗಣಿಸುವಂತೆ ಹೈಕೋರ್ಟ್ ಗುರುವಾರ ಇ.ಡಿ.ಗೆ ನಿರ್ದೇಶನ ನೀಡಿದೆ. ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿ ದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾ ಲಯ ನೀಡಿರುವ ಸಮನ್ಸ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಇತರೆ ಆರೋಪಿ ಗಳಾದ ಸಚಿನ್ ನಾರಾಯಣ, ಶರ್ಮಾ ಮತ್ತು ರಾಜೇಂದ್ರ ಕೂಡ ಸಮನ್ಸ್ ರದ್ದು ಕೋರಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ವಿಚಾ ರಣೆ ಸಂದರ್ಭದಲ್ಲಿ, ಅರ್ಜಿದಾರರು ವಿನಾಯಿತಿ ಕೋರಿ ಮನವಿ ಸಲ್ಲಿಸಿದಲ್ಲಿ ಜಾರಿ ನಿರ್ದೇಶನಾಲಯ ಪರಿಶೀಲಿಸಲಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಹೇಳಿಕೆ ನೀಡಿದರು. ಇದರ ಆಧಾರದ ಮೇಲೆ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆಯನ್ನು ಫೆ.22ಕ್ಕೆ ಮುಂದೂಡಿತು.

ಡಿ.ಕೆ.ಶಿವಕುಮಾರ್ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅರ್ಜಿದಾರರು ಯಾವುದೇ ತೆರಿಗೆ ವಂಚನೆ ಮಾಡಿಲ್ಲ. ಕಾಲಕಾಲಕ್ಕೆ ಕಾನೂನುಬದ್ಧವಾಗಿ ತೆರಿಗೆ ಪಾವತಿ ಮಾಡಿದ್ದಾರೆ. ತೆರಿಗೆ ಪಾವತಿಸುವ ಅವಧಿ ಪೂರ್ಣಗೊಳ್ಳುವ ಮುನ್ನವೆ ಆದಾಯ ತೆರಿಗೆ ಅಧಿಕಾರಿ ಗಳು ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ತೆರಿಗೆ ಪಾವತಿಸದ ದಾಖಲೆಗಳು ದೊರೆತಿದ್ದು, ಅದರ ಆಧಾರದ ಮೇಲೆ ಅರ್ಜಿದಾರರನ್ನು ಬಂಧಿಸುವ ಸಾಧ್ಯತೆಯಿದೆ. ಅಲ್ಲದೆ, ಅವರು ಜನಪ್ರತಿನಿಧಿಯಾಗಿ ರುವುದರಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಅವರ ಹಾಜರಾತಿ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಅವರಿಗೆ ಜಾರಿ ಮಾಡಿರುವ ಸಮನ್ಸ್ ಅನ್ನು ರದ್ದುಗೊಳಿಸಬೇಕು ಎಂದು ವಾದ ಮಂಡಿಸಿದರು. ನವದೆಹಲಿಯ ಕೆ.ಆರ್.ಪುರಂ ಮನೆ ಹಾಗೂ ಸಫ್ದರ್ ಜಂಗ್ ಎನ್‍ಕ್ಲೇವ್ ಫ್ಲಾಟ್‍ಗಳ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು 8.60 ಕೋಟಿ ರೂ. ವಶಪಡಿಸಿಕೊಂಡಿದ್ದರು. ಈ ಹಣವನ್ನು ಬೆಂಗ ಳೂರಿನಿಂದ ಹವಾಲಾ ಮಾರ್ಗದಲ್ಲಿ ಕಳುಹಿಸಲಾಗಿದೆ ಎಂಬ ಆರೋಪವನ್ನು ಕೂಡ ಡಿ.ಕೆ.ಶಿವಕುಮಾರ್ ಎದು ರಿಸುತ್ತಿದ್ದಾರೆ. ದಾಳಿ ವೇಳೆ ವಶಪಡಿಸಿಕೊಂಡಿದ್ದ ಡೈರಿ ಯಲ್ಲಿ ಹಣಕ್ಕೆ ಕೆ.ಜಿ.ಎಂಬ ಸಂಕೇತಾಕ್ಷರ ಬಳಸಲಾಗಿತ್ತು.

Translate »