ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆ ಗಮನಿಸಿದರೆ  ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ಸಾಧ್ಯತೆ?
ಮೈಸೂರು

ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆ ಗಮನಿಸಿದರೆ ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ಸಾಧ್ಯತೆ?

September 22, 2021

ಮೈಸೂರು, ಸೆ.21(ಆರ್‍ಕೆಬಿ)- ಬಿಜೆಪಿಯಲ್ಲಿನ ಇತ್ತೀ ಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವಧಿಗೂ ಮುನ್ನ ಚುನಾವಣೆ ಬರುವ ಸಾಧ್ಯತೆ ಇದೆ. ಉತ್ತರ ಪ್ರದೇಶ ಚುನಾವಣೆ ಜೊತೆಯಲ್ಲಿಯೇ ರಾಜ್ಯದಲ್ಲೂ ಚುನಾವಣೆ ನಡೆಯಲಿದೆ ಎಂಬ ಮಾತು ಬಿಜೆಪಿ ವಲಯದಲ್ಲೇ ಕೇಳಿ ಬರುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಸಹ ಅಧ್ಯಕ್ಷ ವಿ.ಆರ್.ಸುದರ್ಶನ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಇದನ್ನು ರಾಜ್ಯದ ಹಳ್ಳಿಹಳ್ಳಿಗೂ ಕೊಂಡೊಯ್ದು ಜನರಿಗೆ ಮನ ವರಿಕೆ ಮಾಡಿಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡ ಲಿದೆ. ವಿಧಾನಸಭಾ ಚುನಾವಣೆಗಾಗಿ ಸಿದ್ಧತಾ ಕಾರ್ಯ ದಲ್ಲಿ ತೊಡಗಿದೆ. ಸಂಘಟನಾ ಶಕ್ತಿ ಹೆಚ್ಚಿಸಿಕೊಳ್ಳಲು ನಿರಂತರ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗು ತ್ತಿದೆ. ಮತಗಟ್ಟೆ ಪ್ರತಿನಿಧಿಗಳ ಆಯ್ಕೆ ನಡೆದಿದೆ. ಇದರ ಮೈಸೂರು-ಚಾಮರಾಜನಗರ ಉಸ್ತುವಾರಿಯಾಗಿ ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ ಅವರನ್ನು ನೇಮಿಸಿದೆ. ಈ ಕುರಿತು ಕಾರ್ಯಾಗಾರಗಳನ್ನು ನಡೆಸಿ, ಕಾರ್ಯಕರ್ತರಲ್ಲಿ ಹೆಚ್ಚಿನ ಶಕ್ತಿ ತುಂಬಲಾಗುವುದು. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ಪಕ್ಷ ತಯಾರಿ ನಡೆಸಿದೆ ಎಂದರು.

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಈಗ ಅಪ್ರಸ್ತುತ. ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಬಂದು, ಶಾಸಕಾಂಗ ಪಕ್ಷವು ಮುಖ್ಯ ಮಂತ್ರಿಯನ್ನು ಆಯ್ಕೆ ಮಾಡಿ ಕಳುಹಿಸಿದ, ನಂತರವೇ ಹೈಕಮಾಂಡ್ ಮುಖ್ಯಮಂತ್ರಿ ಹೆಸರನ್ನು ಅಂತಿಮ ಗೊಳಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರೈತರ ಬಗ್ಗೆ ಸಿಎಂ ಹಗುರ ಹೇಳಿಕೆಗೆ ಟೀಕೆ: ನವ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಿತ ಎಂಬ ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೈತರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರಿಗೆ ಗೌರವ ತರುವಂಥದ್ದಲ್ಲ. ರೈತಪರ ಹೋರಾಟಗಾರ ಎನಿಸಿರುವ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಮುಖ್ಯಮಂತ್ರಿಯಾಗಿರುವ ಸಂವೇದಾನಶೀಲ ಮುಖ್ಯಮಂತ್ರಿ ಎನಿಸಿರುವ ಬೊಮ್ಮಾಯಿ ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ. ಅವರು ರೈತ ಪರ ಹೋರಾಟವನ್ನೇ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.
ರೈತರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳುವುದು ಯಾವುದೇ ಸರ್ಕಾರಕ್ಕೂ ಸಾಧ್ಯವಿಲ್ಲದಿದ್ದರೂ, ಸೌಜನ್ಯ ಕ್ಕಾದರೂ ಅವರನ್ನು ಮಾತುಕತೆಗೆ ಆಹ್ವಾನಿಸಿ, ವಿಶ್ವಾ ಸಕ್ಕೆ ತೆಗೆದುಕೊಂಡು ಕೆಲವು ಬೇಡಿಕೆಗಳನ್ನಾದರೂ ಬಗೆಹರಿಸಬಹುದಿತ್ತು ಎಂದು ಅಭಿಪ್ರಾಯಪಟ್ಟರು.

ಪ್ಯಾರಿಸ್ ಭರವಸೆ ಏನಾಯ್ತು?: ಮೈಸೂರನ್ನು ಪ್ಯಾರಿಸ್ ಮಾಡುವುದಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಾವು ನೀಡಿದ ಭರವಸೆ ಮರೆತು ಹೋಗಿರಬಹುದು. ಆದರೆ, ಇಲ್ಲಿರುವ ಬಿಜೆಪಿ ಪ್ರತಿನಿಧಿಗಳಾದರೂ ಆ ವಿಚಾರವನ್ನು ಅವರಿಗೆ ನೆನಪಿಸಿಕೊಡಬಹುದಿತ್ತು. ವಾಸ್ತವವಾಗಿ ಪ್ರಧಾನಿ ಪಾರಂಪರಿಕ ನಗರಿ ಮೈಸೂ ರಿಗೆ ಹುಸಿ ಭರವಸೆ ನೀಡಿದ್ದಾರೆ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ವಾಸು, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ರಾಜ್ಯ 4ನೇ ಹಣಕಾಸು ಆಯೋಗದ ಸದಸ್ಯ ಅಮರನಾಥ್ ಇದ್ದರು.

Translate »