ಹನೂರು: ಸಮೀಪದ ಬಿದರಹಳ್ಳಿ ಮತ್ತು ಸುಳವಾಡಿ ಗ್ರಾಮ ಸೇರಿದಂತೆ ಇತರೆ ಗ್ರಾಮಗಳಿಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್‍ನಾಥ್ ಭೇಟಿ ನೀಡಿ ಸುಳವಾಡಿ ವಿಷ ಪ್ರಸಾದ ದುರಂತದಲ್ಲಿ ಸಾವನ್ನಪ್ಪಿದ್ದವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಬಳಿಕ, 40ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆದು ಗ್ರಾಮಕ್ಕೆ ಹಿಂದಿರುಗಿದ್ದು, ಅವರ ಮನೆಗಳಿಗೂ ತೆರಳಿ ಆರೋಗ್ಯ ವಿಚಾರಿಸಿದರು. ಈ ವೇಳೆ ಸಂತ್ರಸ್ತ ಕುಟುಂಗಳಿಗೆ ಆಹಾರ ಸಾಮಗ್ರಿ ಹಾಗೂ ಧನ ಸಹಾಯ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಮುನ್ನ, ಎ.ಎಸ್.ಗುರುಸ್ವಾಮಿ, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಮಾರ್ಟಳ್ಳಿ ಗ್ರಾಪಂ ಸದಸ್ಯರಾದ ರಾಮಲಿಂಗಂ, ರಾಜ, ತಂಬಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಶಿವಣ್ಣ, ಜಗದೀಶ ಇದ್ದರು.