ಚಾಮರಾಜನಗರದಲ್ಲಿ ಸಂವಿಧಾನ ದಿನಾಚರಣೆ
ಚಾಮರಾಜನಗರ

ಚಾಮರಾಜನಗರದಲ್ಲಿ ಸಂವಿಧಾನ ದಿನಾಚರಣೆ

November 27, 2018

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಾಗ ಮಾತ್ರ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದ್ದಂತೆ ಆಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಆಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಇರುವ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಸೋಮವಾರ ಆಯೋ ಜಿಸಿದ್ದ ‘ಸಂವಿಧಾನ ದಿನಾಚರಣೆ’ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ದೇಶದ ಧರ್ಮ ಗ್ರಂಥ. ಈ ಧರ್ಮ ಗ್ರಂಥದಲ್ಲಿ ಇರುವ ಆಶಯ ಗಳನ್ನು ಈಡೇರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು. ಹಿರಿಯ ವಕೀಲ ಕೆ.ಎಂ. ಶ್ರೀನಿವಾಸಮೂರ್ತಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಮಹತ್ವವನ್ನು ಎಲ್ಲರಿಗೂ ತಿಳಿಸುವುದು ಹಾಗೂ ಅಂಬೇ ಡ್ಕರ್ ಅವರ ಬಗ್ಗೆ ಮತ್ತು ಅವರ ಆಶಯ ಗಳ ಬಗ್ಗೆ ಜನರಿಗೆ ತಿಳಿಸುವ ಉದ್ದೇಶದಿಂದ ಸಂವಿಧಾನ ದಿನಾಚರಣೆ ನಡೆಸಲಾಗುತ್ತಿದೆ. ಈ ಉದ್ದೇಶ ಈಡೇರಬೇಕಾಗಿದೆ ಎಂದರು.
ನಾನು ರಚಿಸಿರುವ ಸಂವಿಧಾನ ಸಂಪೂರ್ಣವಾಗಿ ಜಾರಿ ಆದರೆ 30 ರಿಂದ 35 ವರ್ಷದೊಳತೆ ದೇಶ ಅಭಿವೃದ್ಧಿ ಆಗುತ್ತದೆ. ಇಲ್ಲದಿದ್ದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯವೇ ಇಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದರು. ಇದು ನಿಜವಾಗಿದೆ ಎಂದು ಹಿರಿಯ ವಕೀಲ ಶ್ರೀನಿವಾಸಮೂರ್ತಿ ಅಭಿಪ್ರಾಯಪಟ್ಟರು.

ಜೆಎಂಎಫ್‍ಸಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ, ಸಿವಿಲ್ ನ್ಯಾಯಾಧೀಶರಾದ ಉಮೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್, ಹಿರಿಯ ವಕೀಲರಾದ ಆರ್. ವಿರೂಪಾಕ್ಷ, ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘದ ಅಧ್ಯಕ್ಷ ಯಂಕ ನಾಯಕ, ಬಾಲನ್ಯಾಯ ಮಂಡಳಿ ಸದಸ್ಯ ಸುರೇಶ್ ಇತರರು ಉಪಸ್ಥಿತರಿದ್ದರು.

Translate »