ಮೈಸೂರು ಬಳಿ ಹೊಸ ನಗರ ನಿರ್ಮಾಣ
News

ಮೈಸೂರು ಬಳಿ ಹೊಸ ನಗರ ನಿರ್ಮಾಣ

November 17, 2022

ಬೆಂಗಳೂರು, ನ.16(ಕೆಎಂಶಿ)-ಮೈಸೂರು ಸೇರಿದಂತೆ ಆರು ನಗರಗಳ ಸುತ್ತಮುತ್ತ ಹೊಸ ನಗರಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಮೈಸೂರು ಅಲ್ಲದೆ ಕಲ ಬುರಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಂಗಳೂರು ಸುತ್ತಮುತ್ತ ನಿರ್ಮಾಣವಾಗಲಿರುವ ಹೊಸ ನಗರಗಳು ವಿಭಿನ್ನ ಮಾದರಿಯವುಗಳಾಗಿರುತ್ತವೆ. ಇವುಗಳ ರೂಪು-ರೇಷೆಯನ್ನು ಮುಂದಿನ ಆರು ತಿಂಗಳಲ್ಲಿ ನಿರ್ಧರಿಸಲಾಗು ವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವರ್ಚು ಯಲ್ ಆಗಿ ಉದ್ಘಾಟಿಸಿದ ಬೆಂಗಳೂರು ಟೆಕ್ ಸಮ್ಮಿಟ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಂಗಳೂ ರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ ನಿರ್ಮಾಣ ಮಾಡ ಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. ಆರು ತಿಂಗಳೊಳಗೆ ಈ ನಗರಗಳ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು. ಸ್ಟಾರ್ಟ್ ಅಪ್ ಗಳನ್ನು ಪೆÇ್ರೀತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸ ಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾ ನಿಸಿದ್ದು ಇದೂ ಕೂಡ ಆರು ತಿಂಗಳಲ್ಲಿ ಸ್ಥಾಪಿಸಲಾಗು ವುದು. ನಮ್ಮ ಪ್ರಧಾನಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯ ವಿದೆ. ತಂತ್ರಜ್ಞಾನಗಳೆಲ್ಲವೂ ವಿಶ್ವದ ಭವಿಷ್ಯಕ್ಕೆ ಮಾನವ ಅಭಿವೃದ್ಧಿ ಸಮಾವೇಶದ ಧ್ಯೇಯವಾಗಲಿ ಎಂದರು. ಉದ್ಯಮಿಗಳು ಅಭಿವೃದ್ಧಿಗೆ ಪೂರಕ ಸಾಧನೆ ಜೊತೆಗೆ ಸರ್ಕಾರಕ್ಕೂ ಆದಾಯ ತರುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ನಾವು ಜಾಗತಿಕವಾಗಿ ಸಾಕಷ್ಟು ಸವಾಲು ಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆ ಗಳಿಂದ ಮುಳುಗುತ್ತಿದೆ. ಹಣಕಾಸು ಮೂಲ ಗಳು ಪ್ರತಿ ಕ್ಷಣವೂ ಇಳಿಮುಖವಾಗುತ್ತಿದೆ. ನಾವು ಪರಿಹಾರ ಕಂಡುಕೊಳ್ಳದಿದ್ದರೆ ಭವಿಷ್ಯ ದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು. ನಮ್ಮ ಪೂರ್ವಜರು ವ್ಯವಸ್ಥಿತವಾದ ಜೀವನ ಮಾಡುತ್ತಿದ್ದರು. ನಾವು ನಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ನೀಡಬೇಕು. ಭವಿಷ್ಯಕ್ಕಾಗಿ ಭೂಮಿಯನ್ನು ಉಳಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಚಿಂತನೆ ಅಗತ್ಯ. ಯಾವುದೇ ತಂತ್ರಜ್ಞಾನ ಬಂದರೂ ಈ ಪರಿಸರವನ್ನು ಉಳಿಸುವ ಗುಣ ಹೊಂದಿರಬೇಕು. ಡಿಜಿಟಲ್ ಅಂತರವನ್ನು ಕಡಿಮೆ ಮಾಡುವತ್ತಲೂ ನಾವು ಗಮನಹರಿಸ ಬೇಕು. ಪರಿಸರ ಸ್ನೇಹಿ ವಾತಾವರಣ ಹೊಂದಬೇಕು. ಪರಿಸರ ಸ್ನೇಹಿ ತಂತ್ರಜ್ಞಾನ, ನಾವೀನ್ಯತೆ ಹಾಗೂ ಇಕೋ ಇಕನಾಮಿಕ್ಸ್ ಅನ್ನು ಸಾಧ್ಯವಾಗಿಸಬೇಕು. ಐಟಿ-ಬಿಟಿ, ಕೃತಕ ಬುದ್ಧಿಮತ್ತೆ ನಮ್ಮ ಸಂಪನ್ಮೂಲಗಳನ್ನು ಉಳಿಸಿ ರಕ್ಷಣೆ ಮಾಡುವ ಸಾಧ್ಯತೆ ಇದೆ. ಮಾನವ ಕುಲಕ್ಕೆ ಯಾವುದು ಅನುಕೂಲವಾಗುತ್ತದೆ ಎನ್ನುವುದನ್ನು ನೀವೇ ಪರೀಕ್ಷಿಸಬೇಕು. ತಂತ್ರಜ್ಞಾನ ನಮಗೆ ಮಾಹಿತಿಯ ಕಣಜವನ್ನೇ ನಮ್ಮ ಮುಂದಿರಿಸಿದೆ. ನವೀಕರಿಸಬಹುದಾದ ಇಂಧನ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ಮೈಸೂರು ಮಹಾರಾಜರು ವಿಜ್ಞಾನ ತಂತ್ರಜ್ಞಾನಕ್ಕೆ, ಶಿಕ್ಷಣಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಂತರ ಉದ್ಯಮಕ್ಕೆ ಆದ್ಯತೆ ನೀಡಿದ್ದಾರೆ. ಈಗ ಐಟಿ-ಬಿಟಿ ಬಂದಿದೆ. ಬೆಂಗಳೂರಿಗೆ ಬಂದವರು ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡುತ್ತಾರೆ. ಮೊದಲು ಸಂಪತ್ತು ಉಳ್ಳವರ ಕಾಲವಿತ್ತು. ಈಗ ಜ್ಞಾನ ಇರುವವರ ಕಾಲ. ಬೆಂಗಳೂರಿಗೆ ಪ್ರತಿದಿನ 5000ಕ್ಕೂ ಹೆಚ್ಚು ಇಂಜಿನಿಯರ್‍ಗಳು ಬಂದು ಹೋಗುತ್ತಾರೆ. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ ಕಡೆಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ.

ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ.40ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ-ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ಧಿಪಡಿಸಲು ಕರೆ ನೀಡಿದರು. ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ.

Translate »