ಡಾ.ಬಾಬುಜೀ ಭವನ ಕಾಮಗಾರಿ ಶೀಘ್ರ ಆರಂಭ
ಮಂಡ್ಯ

ಡಾ.ಬಾಬುಜೀ ಭವನ ಕಾಮಗಾರಿ ಶೀಘ್ರ ಆರಂಭ

July 7, 2018

ಮಂಡ್ಯ: ಮಂಡ್ಯ ಜನತೆಯ ಬಹುದಿನಗಳ ಬೇಡಿಕೆಯಾದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ ಸಮುದಾಯ ಭವನದ ಕಾಮಗಾರಿ ಯನ್ನು ಶೀಘ್ರವಾಗಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್. ಮಂಜುಶ್ರೀ ತಿಳಿಸಿದರು.

ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 32ನೇ ಪುಣ್ಯತಿಥಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದ ಮುಂಭಾಗವಿರುವ ಕಾವೇರಿ ಉದ್ಯಾನವನದಲ್ಲಿ ಡಾ. ಬಾಬು ಜಗಜೀವನರಾಂ ಅವರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ಅವರು ಮಾತ ನಾಡಿದರು.

ಬಹು ದಿನಗಳಿಂದ ಮಂಡ್ಯದಲ್ಲಿ ಡಾ. ಬಾಬು ಜಗಜೀವನರಾಂ ಸಮುದಾಯ ಭವನ ನಿರ್ಮಾಣ ಮಾಡುವಂತೆ ಸಾರ್ವ ಜನಿಕರ ಬೇಡಿಕೆಗೆ ಸ್ಪಂದಿಸಿದ ಜಿಲ್ಲಾಡಳಿತ, ಭವನ ನಿರ್ಮಾಣಕ್ಕೆ ಜಾಗ ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಸರ್ಕಾರ ಮಂಜೂರಾತಿ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಕಟ್ಟಡದ ಕಾಮಗಾರಿ ಶೀಘ್ರ ಕೈ ಗೆತ್ತಿಕೊಳ್ಳಲಾಗುವುದು ಎಂದರು.
ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳದೇ ವಿಳಂಬವಾಗಿತ್ತು. ಶಿಷ್ಟಾಚಾರದ ಪ್ರಕಾರ ಶೀಘ್ರದಲ್ಲಿ ಅತಿಥಿ ಗಣ್ಯರನ್ನು ಆಹ್ವಾನಿಸಿ ಡಾ. ಬಾಬು ಜಗಜೀವನರಾಂ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ, ಸಹಾಯಕ ನಿರ್ದೇಶಕಿ ನಾಗಲಕ್ಷ್ಮಿ, ಮಂಡ್ಯ ಉಪ ವಿಭಾಗಾಧಿಕಾರಿ ರಾಜೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಗಳು, ಸಾರ್ವಜನಿಕರು ಹಾಗೂ ಅಧಿಕಾರಿ ಗಳು ಭಾಗವಹಿಸಿದ್ದರು.

Translate »