ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ  10 ಕೋಟಿ ಮಂಜೂರು
News

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಮಂಜೂರು

November 10, 2021

ಬೆಂಗಳೂರು, ನ. 9(ಕೆಎಂಶಿ)- ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾ ಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಈ ಭರವಸೆ ನೀಡಿದರು. ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ, ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ, ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಅಲ್ಲಿನ ಕನ್ನಡಿಗರಿಗೆ ಸಾಂಸ್ಕøತಿಕ ಚಟುವಟಿಕೆ ನಡೆಸಲು ಅನುಕೂಲ ವಾಗುವಂತೆ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿ ಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು. ಇದರೊಂದಿಗೆ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು ಮಾಡುವಂತೆ ಮುಖ್ಯಮಂತ್ರಿ ಅಧಿಕಾರಿ ಗಳಿಗೆ ಆದೇಶಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು.

Translate »