ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್‍ಗೆ ಪ್ರಜ್ಞಾವಂತ ನಾಗರಿಕರ ವೇದಿಕೆ ಮನವಿ ಸಲ್ಲಿಕೆ
ಮೈಸೂರು

ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್‍ಗೆ ಪ್ರಜ್ಞಾವಂತ ನಾಗರಿಕರ ವೇದಿಕೆ ಮನವಿ ಸಲ್ಲಿಕೆ

February 11, 2021

ಮೈಸೂರು, ಫೆ.10(ಆರ್‍ಕೆಬಿ)- ಸರ್ಕಾರದ ಆದೇಶ ಧಿಕ್ಕರಿಸಿ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರಿನ ಪ್ರಜ್ಞಾ ವಂತ ನಾಗರಿಕರ ವೇದಿಕೆ ಮೈಸೂರಿಗೆ ಭೇಟಿ ನೀಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅವರನ್ನು ಒತ್ತಾಯಿಸಿದೆ.

ಮೈಸೂರು ಜಿಪಂ ಸಭಾಂಗಣದಲ್ಲಿ ಅವ ರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ವೇದಿಕೆ ಪದಾಧಿಕಾರಿಗಳು, ಮೈಸೂರಿನ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದಾರ್ಥಿಗಳಿಗೆ ಕಳೆದ ವರ್ಷ ಕೊರೊನಾ ಲಾಕ್‍ಡೌನ್ ಪರಿಣಾಮ ಶಾಲೆಗಳು ಒಂದು ವರ್ಷ ಸರ್ಕಾರದ ನಿಯಮಾನುಸಾರ ಬಂದ್ ಆಗಿದ್ದವು. ಶಿಕ್ಷಣ ಇಲಾಖೆ ನಿಯಮಾನು ಸಾರ ಆನ್‍ಲೈನ್ ಡಿಜಿಟಲ್ ತರಗತಿಗಳು ನಡೆದವು. ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕ ವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕ ರಿಂದ ವಸೂಲಿ ಮಾಡಿದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂ ಡಿಲ್ಲ ಎಂದು ಮನವಿಯಲ್ಲಿ ದೂರಿದರು.

ಪ್ರಸ್ತುತ ಶೈಕ್ಷಣಿಕ ವರ್ಷ ಶಾಲಾ ಕಾಲೇಜು ಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆ ಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಅವಧಿಯನ್ನು ಫೆ.20ರವರೆಗೆ ವಿಸ್ತರಿಸಬೇಕೆಂದು ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ. ಹೀಗಿರು ವಾಗ ಅದನ್ನು ಉಲ್ಲಂಘಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿನ 2021-22ನೇ ಶೈಕ್ಷ ಣಿಕ ವರ್ಷದ ಶಿಕ್ಷಣ ದಾಖಲಾತಿ ನೆಪ ವೊಡ್ಡಿ ಮುಂಗಡವಾಗಿ ವಸೂಲಿ ಮಾಡು ತ್ತಿದ್ದು, ಇದಕ್ಕೆ ಇಲಾಖೆ ಅನುಮತಿ ನೀಡಿ ದೆಯೇ ಎಂದು ಪ್ರಶ್ನಿಸಿದ್ದಾರೆ.

ಶಿಕ್ಷಣವನ್ನು ವ್ಯಾಪಾರೀಕರಣ ಮಾಡುತ್ತಿ ರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳದಿರುವು ದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಪೋಷ ಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿ ದ್ದಾರೆ. ಶಿಕ್ಷಣ ಶುಲ್ಕ ತಾರತಮ್ಯ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾಥಿಗಳ ಶುಲ್ಕದ ವಿವರಗಳನ್ನು ಖಾಸಗಿ ಶಾಲಾ ಕಾಲೇಜು ಗಳ ನೋಟಿಸ್ ಬೋರ್ಡ್‍ನಲ್ಲಿ ಹಾಕುವಂತೆ ಆಡಳಿತ ಮಂಡಳಿಗಳಿಗೆ ಇಲಾಖೆ ಸೂಚಿಸ ಬೇಕು. ಈ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿ ಪೋಷಕರ ಹಿತಕಾಯಬೇಕು. ಖಾಸಗಿ ಶಿಕ್ಷಣ ಮಂಡಳಿ ಅಕ್ರಮ ಹಣ ಪಡೆದಿದ್ದರೆ ರಹದಾರಿ ರದ್ದುಗೊಳಿಸಲು ಸರ್ಕಾರದ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆಯ ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕರ್ನಾಟಕ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಜೈಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷ ಕೆ.ಚೇತನ್, ಕಾಂತರಾಜು ಇನ್ನಿತರರು ಉಪಸ್ಥಿತರಿದ್ದರು.

Translate »