ಅತಿಥಿ ಉಪನ್ಯಾಸಕರ ಪ್ರತಿಭಟನೆ ಮುಂದುವರಿಕೆ
ಮೈಸೂರು

ಅತಿಥಿ ಉಪನ್ಯಾಸಕರ ಪ್ರತಿಭಟನೆ ಮುಂದುವರಿಕೆ

August 26, 2020

ಮೈಸೂರು, ಆ.25(ಪಿಎಂ)- ಲಾಕ್‍ಡೌನ್ ಅವಧಿಯ ಗೌರವಧನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇ ರಿಸಲು ಆಗ್ರಹಿಸಿ ಅತಿಥಿ ಉಪನ್ಯಾಸಕರು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸರ್ಕಾರ ನ್ಯಾಯಯುತವಾಗಿ ಕೊಡಬೇಕಿರುವ ಗೌರವ ಧನ ನೀಡದೇ ನಾವು ಅತಂತ್ರ ಸ್ಥಿತಿಯಲ್ಲಿ ಬದುಕುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತರಲೆಂದೇ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದೇವೆ. ಮೈಸೂರಿನಲ್ಲಿಂದು 8ನೇ ಮಂಗಳ ವಾರದ ಪ್ರತಿಭಟನೆ ನಡೆದಿದೆ ಎಂದರು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಗೊಳಿಸಿ ಅತಿಥಿ ಉಪನ್ಯಾಸಕರನ್ನೇ ಖಾಯಂ ನೇಮಕ ಮಾಡಿಕೊಳ್ಳಬೇಕು. ಪಿಎಫ್, ವೈದ್ಯಕೀಯ ಸೌಲಭ್ಯ ಒದಗಿ ಸಬೇಕು. ಕೆಲ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡ ಹಾಗೂ ಕೆಲವರು ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಮಹದೇವಯ್ಯ, ಉಪಾ ಧ್ಯಕ್ಷರಾದ ಟಿ.ಬಾಲಸುಬ್ರಹ್ಮಣ್ಯಂ, ನಾಗಾರ್ಜುನ್, ಪ್ರಧಾನ ಕಾರ್ಯದರ್ಶಿ ಹನುಮಂತೇಶ್, ಸಹ ಕಾರ್ಯ ದರ್ಶಿ ಗಳಾದ ಪಿ.ಸತೀಶ್, ಸಿ.ಕೆ.ಕಿರಣ್ ಕೌಶಿಕ್, ಖಜಾಂಚಿ ನಿಂಗರಾಜು, ಸಹ ಖಜಾಂಚಿ ಪೂರ್ಣಿಮಾ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »