ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು

ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

August 18, 2021

ಮೈಸೂರು,ಆ.17(ಪಿಎಂ)-ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು) ನೇತೃತ್ವದಲ್ಲಿ ಅಂಗನ ವಾಡಿ ಕಾರ್ಯಕರ್ತೆಯರು ಮಂಗಳ ವಾರವೂ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸೇವಾ ಜೇಷ್ಠತೆಯ ಆಧಾರದ ಗೌರವ ಧನ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಫಾರಸ್ಸಿನಂತೆ 339.48 ಕೋಟಿ ರೂ. ಅನುದಾನ ಬಿಡುಗಡೆಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರ ಗಳಲ್ಲಿ ಆ.19ರವರೆಗೆ ಪ್ರತಿದಿನ 3 ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಅದರಂತೆ ಮೈಸೂರು ಜಿಲ್ಲಾ ಧಿಕಾರಿ ಕಚೇರಿ ಎದುರು ಸೋಮವಾರ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಅದೇ ರೀತಿ ಇಂದೂ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಸಂಘದ ಜಿಲ್ಲಾ ಸಂಘಟನಾ ಕಾರ್ಯ ದರ್ಶಿ ಪುಷ್ಪಲತಾ, ಜಿಲ್ಲಾ ಖಜಾಂಚಿ ಲೀಲಾವತಿ, ಕಾರ್ಯಕರ್ತೆಯರಾದ ಯಶೋದಾ, ರಾಜಮಣಿ ಸೇರಿದಂತೆ ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕಿನ ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »