ಕ್ವಾರೆಂಟೇನ್ ಕೇಂದ್ರದಲ್ಲಿ ಮುಂದುವರೆದ ನಿಗಾ : ಓರ್ವನ ವರದಿ ನೆಗೆಟಿವ್
ಚಾಮರಾಜನಗರ

ಕ್ವಾರೆಂಟೇನ್ ಕೇಂದ್ರದಲ್ಲಿ ಮುಂದುವರೆದ ನಿಗಾ : ಓರ್ವನ ವರದಿ ನೆಗೆಟಿವ್

April 1, 2020

ಚಾಮರಾಜನಗರ, ಮಾ.31- ವಿದೇಶಗಳಿಂದ ಪ್ರಯಾಣಿಸಿ ಚಾಮರಾಜನಗರ ಜಿಲ್ಲೆಗೆ ಇದುವರೆಗೆ ಒಟ್ಟು 43 ಜನರು ಬಂದಿದ್ದು, ಇವರಲ್ಲಿ ಇಬ್ಬರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ ನಿಗಾವಣೆ ಮಾಡಲಾಗುತ್ತಿದೆ ಹಾಗೂ 6 ಜನರನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ. ಈಗಾಗಲೇ 35 ಮಂದಿ 14 ದಿನಗಳ ಹೋಮ್ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ.

ಶನಿವಾರ ಒಬ್ಬರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡ ಲಾಗಿದ್ದು, ಫಲಿತಾಂಶ ಬಂದಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಸದರಿಯ ವರನ್ನು ಜನರಲ್ ವಾರ್ಡ್‍ನಲ್ಲಿರಿಸಿ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.

ಮೈಸೂರಿನ ಕೊರೊನಾ ಪಾಸಿಟಿವ್ ವ್ಯಕ್ತಿಯು ಉದ್ಯೋಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ 47 ವ್ಯಕ್ತಿಗಳನ್ನು ನಗರದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ. ಸದರಿ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಓರ್ವರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ನಿನ್ನೆ ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗಿದೆ. ಈ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »