ಮಡಿಕೇರಿ: ಅತಿವೃಷ್ಟಿ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಹಾಗೂ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಮತ್ತು ತಾಲ್ಲೂಕು ಕಚೇರಿಗಳು ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್) ತೆರೆಯಲಾಗಿದೆ. ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ ವಿವರ ಇಂತಿದೆ.
ಜಿಲ್ಲಾಧಿಕಾರಿ ಕಚೇರಿ-08272-221077, ಜಿಲ್ಲಾ ಅಗ್ನಿಶಾಮಕ ಕಚೇರಿ-101, 08272-229299, ಮಡಿಕೇರಿ ತಾಲ್ಲೂಕು ಕಚೇರಿ-08272-228396, ನಗರಸಭೆ-08272-220111, ಸೋಮವಾರಪೇಟೆ ತಾಲ್ಲೂಕು ಕಚೇರಿ-08276-282045, ವಿರಾಜಪೇಟೆ ತಾಲ್ಲೂಕು ಕಚೇರಿ- 08274-256328 ಈ ದೂರವಾಣಿ ಸಂಖ್ಯೆಗಳಿಗೆ ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಸಮಸ್ಯೆಗಳಿದ್ದಲ್ಲಿ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ.