ಡಿ.18ರಂದು ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಮೈಸೂರು

ಡಿ.18ರಂದು ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

December 15, 2020

ಮೈಸೂರು, ಡಿ.14(ಪಿಎಂ)- ಮಾಜಿ ಮುಖ್ಯಮಂತ್ರಿಗಳೂ ಆದ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಅಧ್ಯಕ್ಷತೆ ಯಲ್ಲಿ ಡಿ.18ರಂದು ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾ ವೇಶ ಏರ್ಪಡಿಸಲಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ ಹೇಳಿದರು.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಸೋಮ ವಾರ ಸಮಾವೇಶ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತ ರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ಮೈಸೂರಿನ ಅರ ವಿಂದನಗರದ ಶ್ರೀಕಾಲಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಸಮಾವೇಶ ನಡೆಯಲಿದೆ. ಅಂದಿನ ಸಮಾವೇಶದಲ್ಲಿ ಕ್ಷೇತ್ರದ ಎಲ್ಲಾ ಕಾರ್ಯಕರ್ತರು ಪಾಲ್ಗೊಂಡು ಪಕ್ಷ ಬಲಪಡಿ ಸುವ ನಿಟ್ಟಿನಲ್ಲಿ ಅಭಿಪ್ರಾಯ ಹಾಗೂ ಸಲಹೆ ಗಳನ್ನು ತಿಳಿಸಬೇಕೆಂದು ಕೋರಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆ ನಂತರ ಪಕ್ಷದ ಕಾರ್ಯ ಕರ್ತರ ಯಾವುದೇ ಸಭೆ ನಡೆಸಿರಲಿಲ್ಲ. ಇದು ಅನೇಕ ಕಾರ್ಯಕರ್ತರಿಗೂ ಬೇಸರ ತಂದಿತ್ತು. ಇದೀಗ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರೇ ಈ ಕಾರ್ಯಕರ್ತರ ಸಮಾವೇಶ ಆಯೋಜಿ ಸಲು ಸೂಚನೆ ನೀಡಿದ್ದಾರೆ ಎಂದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಬಡವರ ಉದ್ದಾರಕ್ಕಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದರು. ಆದರೂ ಅವರನ್ನು ಕ್ಷೇತ್ರದ ಜನರು ಚುನಾ ವಣೆಯಲ್ಲಿ ಕೈಬಿಟ್ಟರು. ಆ ಸೋಲಿನ ಕಹಿ ಕಾಂಗ್ರೆಸ್ ಮುಖಂಡರಲ್ಲಿ ಇನ್ನೂ ಮಾಸಿಲ್ಲ. ಇದೇ ಕಾರಣಕ್ಕೆ ಸಿದ್ದರಾಮಯ್ಯನವರು ಕಾರ್ಯಕರ್ತರ ಸಭೆ ಕರೆದಿರಲಿಲ್ಲ. ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾ ರೆಂದು ಕಾರ್ಯಕರ್ತರು ಯಾರು ಎದೆಗುಂದ ಬೇಕಿಲ್ಲ. ಕಾಂಗ್ರೆಸ್ ಪಕ್ಷ ಗ್ರಾಮೀಣ ಭಾಗದಲ್ಲಿ ಬಲಿಷ್ಠವಾಗಿದೆ. ಸಿದ್ದರಾಮಯ್ಯನವರ ಕೈಬಲ ಪಡಿಸಲು ಕಾಂಗ್ರೆಸ್ ಪಕ್ಷದ ಮುಖಂ ಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶ ಯಶಸ್ವಿಗೊಳಿಸ ಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಹರೀಶ್‍ಗೌಡ ಮಾತನಾಡಿ, ಸಿದ್ದರಾಮಯ್ಯನವರು ಈ ರಾಜ್ಯದ ಹಿರಿಯ ನಾಯಕರು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸಿದ್ದರಾಮಯ್ಯ ನವರ ವರ್ಚಸ್ಸು ಇದ್ದೇ ಇದೆ. ಅವರು ವಿರೋಧಪಕ್ಷದ ನಾಯಕರಾಗಿ ಆಡಳಿತ ಪಕ್ಷದ ಭ್ರಷ್ಟಾಚಾರಗಳನ್ನು ಬಯಲಿಗೆಳೆ ಯುವ ಮೂಲಕ ಅವರಿಗೆ ಸಿಂಹಸ್ವಪ್ನ ವಾಗಿದ್ದಾರೆ. ಇಂತಹ ಉನ್ನತ ನಾಯಕನ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶಕ್ಕೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಬೇಕೆಂದು ಕೋರಿದರು.

ಕಾಂಗ್ರೆಸ್ ಮುಖಂಡ ಮಾವಿನಹಳ್ಳಿ ಸಿದ್ದೇಗೌಡ ಮಾತನಾಡಿ, ಸಭೆಗಳನ್ನು ಮಾಡಿ ಸುಮ್ಮನಾಗುತ್ತೀರಿ. ಕ್ಷೇತ್ರಕ್ಕೆ ಸಿದ್ದರಾಮಯ್ಯ ನವರು ಬಂದಾಗ ಎಲ್ಲರೂ ಬರುತ್ತಾರೆ. ಆ ನಂತರ ಕ್ಷೇತ್ರದಲ್ಲಿ ಪಕ್ಷದ ಮುಖಂಡರೇ ಇರುವುದಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಗೆ ಇದೇ ಪ್ರಮುಖ ಕಾರಣ. ನಮ್ಮಲ್ಲಿ ಹೊಂದಾಣಿಕೆಯಿಲ್ಲ. ಈ ಎಲ್ಲವನ್ನೂ ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಿ ಎಂದು ಮನವಿ ಮಾಡಿದರು.

ಜಿಪಂ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹ ದೇವ್, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಉಪಾ ಧ್ಯಕ್ಷ ಗುರುಪಾದಸ್ವಾಮಿ, ಜಿಪಂ ಸದಸ್ಯ ಅರುಣ್‍ಕುಮಾರ್, ತಾಪಂ ಸದಸ್ಯ ಮಾರ್ಬಳ್ಳಿ ಕುಮಾರ್, ಮುಖಂಡ ಜೇಸು ದಾಸ್ ಮಾತನಾಡಿದರು. ಜಿಪಂ ಮಾಜಿ ಸದಸ್ಯರಾದ ಪಟೇಲ್ ಜವರೇಗೌಡ, ನಾರಾ ಯಣ, ಮಹದೇವ್, ವೆಂಕಟಯ್ಯ, ತಾಪಂ ಸದಸ್ಯರಾದ ಸಿ.ಎಂ. ಸಿದ್ದರಾಮೇಗೌಡ, ಶ್ರೀಕಂಠ ತೊಂಡೇಗೌಡ, ಪಕ್ಷದ ಮುಖಂಡ ರಾದ ಕೋಟೆಹುಂಡಿ ಮಹದೇವ್, ಹೊಸ ಹುಂಡಿ ರಘು, ಹಿನಕಲ್ ಪ್ರಕಾಶ್, ಕೆ. ಹೆಬ್ಬಾಳೆಗೌಡ, ನಾಡನಹಳ್ಳಿ ರವಿ, ನಟ ರಾಜ್, ಉತ್ತನಹಳ್ಳಿ ಶಿವಣ್ಣ, ಇಲವಾಲ ಸುರೇಶ್, ಆನಂದೂರು ರಾಮೇಗೌಡ, ಸೋಮಣ್ಣ, ಆರ್.ಪ್ರಕಾಶ್‍ಕುಮಾರ್, ಉಮಾ ಶಂಕರ್ ಮತ್ತಿತರರು ಹಾಜರಿದ್ದರು.

Translate »