ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಾಪನೆಗೆ ಸಹಕಾರ
ಮಂಡ್ಯ

ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಾಪನೆಗೆ ಸಹಕಾರ

August 23, 2021

ಕೆ.ಆರ್.ಪೇಟೆ, ಆ.22- ಕೆ.ಆರ್.ಪೇಟೆ ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣರ ಪುತ್ಥಳಿ ಸ್ಥಾಪನೆಗೆ ಸಹಕರಿಸುವುದಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ ಹೇಳಿದರು.

ಮಂಡ್ಯ ಜಿಲ್ಲಾ ಕುರುಬರ ಸಂಘದ ಆಶ್ರಯದಲ್ಲಿ ಪಟ್ಟಣದಲ್ಲಿ ಭಾನುವಾರ ನಡೆದ ತಾಲೂಕು ಕುರುಬರ ಸಂಘದ ಪುನರ್ರಚನೆ ಹಾಗೂ ಸಂಘಟನೆ ಸಂಬಂಧಿತ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೆ.ಆರ್.ಪೇಟೆ ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣರ ಪುತ್ಥಳಿ ಅನಾವರಣಗೊಳ್ಳಬೇಕಿದೆ. ಇದಕ್ಕೆ ಅಗತ್ಯವಾದ ಸೌಲಭ್ಯ ಹಾಗೂ ನೆರವನ್ನು ಕೇಂದ್ರ ಸಂಘ ಹಾಗೂ ಸರ್ಕಾರ ದಿಂದ ಕೊಡಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲೂಕು ಕುರುಬರ ಸಂಘದ ವತಿಯಿಂದ ಬಿ.ಸುಬ್ರಹ್ಮಣ್ಯ ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶಮೂರ್ತಿ, ಖಜಾಂಚಿ ದೇವರಾಜ್, ಉಪಾಧ್ಯಕ್ಷ ಕೃಷ್ಣಕುಮಾರ್, ಸಂಘಟನೆ ಕಾರ್ಯದರ್ಶಿಗಳಾದ ಉಮೇಶ, ಸಾವಿತ್ರಮ್ಮ, ರಾಜೇಶ, ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಸೇರಿದಂತೆ ಸಂಘದ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

Translate »