ಕೃಷಿ ಸಾಲ ಮನ್ನಾ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು

ಕೃಷಿ ಸಾಲ ಮನ್ನಾ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

February 14, 2020

ಬೆಂಗಳೂರು, ಫೆ.13(ಕೆಎಂಶಿ)- ಕೃಷಿ ಸಾಲ ಮನ್ನಾ ಸಂಬಂಧ ಇಲಾಖಾ ಅಧಿಕಾರಿಗಳಿಂದ ಮಾಹಿತಿ ಪಡೆದು ತೀರ್ಮಾನ ಕೈಗೊಳ್ಳ ಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇಂದಿಲ್ಲಿ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ನೂತನ ಕಚೇರಿಯಲ್ಲಿ ಪೂಜೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮಗೆ ಇಷ್ಟವಾದ ಸಹಕಾರ ಖಾತೆ ನೀಡಿದ್ದಾರೆ. ಸಹಕಾರ ಇಲಾಖೆಯಲ್ಲಿ ಸುಧಾ ರಣೆ ಹಾಗೂ ಅಗತ್ಯ ಬದಲಾವಣೆ ತರುವಲ್ಲಿ ಹಿರಿಯ ಸಹ ಕಾರಿಗಳ ಸಲಹೆ ಪಡೆಯಲಾಗುವುದು ಎಂದರು. ಸಹಕಾರಿಗಳ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಸ್ಥಗಿತ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಬಜೆಟ್ ಪೂರ್ವ ಸಿದ್ಧತೆ ನಡೆದಿದ್ದು, ಇಲಾಖಾ ವಿಚಾರಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

Translate »