ಪುನೀತ್ ಮನೆಗೆ ತೆರಳಿ `ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಸಹಕಾರ ಮಹಾ ಮಂಡಳದ ಅಧ್ಯಕ್ಷರೂ ಆದ ಶಾಸಕ ಜಿ.ಟಿ.ದೇವೇಗೌಡ
ಮೈಸೂರು

ಪುನೀತ್ ಮನೆಗೆ ತೆರಳಿ `ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಸಹಕಾರ ಮಹಾ ಮಂಡಳದ ಅಧ್ಯಕ್ಷರೂ ಆದ ಶಾಸಕ ಜಿ.ಟಿ.ದೇವೇಗೌಡ

March 21, 2022

ಬೆಂಗಳೂರು,ಮಾ.೨೦-ಪವರ್‌ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿಯನ್ನು ಅವರ ಮನೆಗೆ ತೆರಳಿ ಪತ್ನಿಗೆ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು. ಕೆಂಗೇರಿಯಲ್ಲಿರುವ ಗಣೇಶ ಮೈದಾನದಲ್ಲಿ ಏರ್ಪಡಿ ಸಲಾಗಿದ್ದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅವರು, ಪುನೀತ್ ರಾಜ್‌ಕುಮಾರ್ ಅವರಿಗೆ ಘೋಷಿಸಲ್ಪಟ್ಟಿರುವ ಮರಣೋತ್ತರ `ಸಹಕಾರ ರತ್ನ’ ಪ್ರಶಸ್ತಿ ಸ್ವೀಕರಿಸಲು ಕಾರಣಾಂತರಗಳಿAದ ಅವರ ಪತ್ನಿ ಅಶ್ವಿನಿ ಅವರು ಆಗಮಿಸದ ಕಾರಣ, ಅವರ ಮನೆಗೇ ತೆರಳಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸಹಕಾರ ಸಂಘ-ಸAಸ್ಥೆಗಳ ಕಾಮಗಾರಿ ಕೈಗೊಳ್ಳಲು ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿಗಳಲ್ಲಿ ಅವರು ಮನವಿ ಮಾಡಿದರು. ಶಾಲಾ-ಕಾಲೇಜು
ಪಠ್ಯ ಪುಸ್ತಕದಲ್ಲಿ ಸಹಕಾರ ಕ್ಷೇತ್ರದ ವಿಷಯ ಪ್ರಕಟಿಸಬೇಕು. ಸಹಕಾರ ಸಂಘಗಳಿಗೆ ಮುದ್ರಾಂಕ ಶುಲ್ಕದಲ್ಲಿ ವಿನಾಯಿತಿ ನೀಡಬೇಕು. ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಲಾಭ ಗಳಿಸಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳಲ್ಲಿ ಸರ್ಕಾರದ ಠೇವಣ ಇಡಬೇಕು. ಡಿಪ್ಲೊಮಾ ಇನ್ ಕೋ-ಆಪರೇಟಿವ್ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳನ್ನು ನೌಕರಿ ನೇಮಕಾತಿ ಸಂದರ್ಭ ಪರಿಗಣ ಸಬೇಕು ಎಂದು ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಮಾತನಾಡುವ ವೇಳೆ ಜಿ.ಟಿ.ದೇವೇಗೌಡರ ಮನವಿಗೆ ಸ್ಪಂದಿಸಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸಹಕಾರ ಸಂಘ-ಸAಸ್ಥೆಗಳ ಕಾಮಗಾರಿ ಕೈಗೊಳ್ಳಲು ಅವಕಾಶ ಕಲ್ಪಿಸುವಂತೆ ಪಠ್ಯ ಪುಸ್ತಕದಲ್ಲಿ ಸಹಕಾರ ಕ್ಷೇತ್ರದ ವಿಷಯ ಪ್ರಕಟಿಸುವ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿಯೂ, ಅದೇ ರೀತಿ ಉಳಿದ ಮನವಿಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿಯೂ ತಿಳಿಸಿದರು.

Translate »