ಕೊರೊನಾ; ಜನದಟ್ಟಣೆ ಪ್ರದೇಶದಲ್ಲಿ ನಿಗಾವಹಿಸಲು ಸಲಹೆ

ಮಡಿಕೇರಿ,ಮಾ.10-ಕೊರೊನಾ ವೈರಸ್ ಬಗ್ಗೆ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್‍ಗಳು, ಹೋಂ ಸ್ಟೇಗಳು ಹಾಗೂ ಹೋಟೆಲ್‍ಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಲಹೆ ಮಾಡಿದ್ದಾರೆ.

ಕೊರೊನಾ ವೈರಸ್ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಅಧಿಕಾರಿ ಗಳೊಂದಿಗೆ ಮಂಗಳವಾರ ಸಭೆ ನಡೆಸಿದರು.

ಕೊರೊನಾ ವೈರಸ್ ಬೆಂಗಳೂರಿನಲ್ಲೂ ಕಂಡುಬಂದಿರುವ ಹಿನ್ನೆಲೆ ಜಿಲ್ಲೆಯಲ್ಲಿಯೂ ಸಹ ಇನ್ನಷ್ಟು ಅಗತ್ಯ ಮುನ್ನೆಚ್ಚರಿಕೆ ವಹಿಸ ಬೇಕಿದೆ. ಆ ನಿಟ್ಟಿನಲ್ಲಿ ಪ್ರವಾಸಿ ತಾಣಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿ ಸಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಪ್ರವಾಸಿ ತಾಣ ಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಹೇಳಿದರು.

ಈಗಾಗಲೇ ಜಿಲ್ಲೆಯ ಕರಿಕೆ, ಕುಟ್ಟ ಹಾಗೂ ಮಾಕುಟ್ಟ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಅದೇ ರೀತಿ ಜಿಲ್ಲೆಯ ವಿವಿಧ ಜನದಟ್ಟಣೆ ಸ್ಥಳಗಳಲ್ಲಿಯೂ ಈ ಬಗ್ಗೆ ಮುತುವರ್ಜಿ ವಹಿಸಬೇಕಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತ ನಾಡಿ, ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ವೈರಸ್ ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳ ಲಾಗಿದೆ. ಹಾಗೆಯೇ ಪೋಸ್ಟರ್, ಬ್ಯಾನರ್, ಪ್ರವಾಸಿ ತಾಣಗಳು, ಗಡಿ ಪ್ರದೇಶ ಸೇರಿ ದಂತೆ ಜಿಲ್ಲೆಯ ಜನದಟ್ಟಣೆ ಪ್ರದೇಶಗಳಲ್ಲಿ ಮಾಹಿತಿ ಶಿಕ್ಷಣ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

ವಿದೇಶದಿಂದ ಬರುವವರ ಬಗ್ಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಅವರಿಗೆ (9449843263) ಕಡ್ಡಾಯವಾಗಿ ಮಾಹಿತಿ ನೀಡುವಂತಾಗಬೇಕು ಎಂದು ಅವರು ಕೋರಿದರು. ಹಾಗೆಯೇ 104 ಸಹಾಯ ವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹು ದಾಗಿದೆ. ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆ ಗಳಲ್ಲಿ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ ಎಂದು ಅವರು ಹೇಳಿದರು.

ವೈದ್ಯಕೀಯ ಕಾಲೇಜಿನ ಅಧೀಕ್ಷಕ ಲೋಕೇಶ್, ಜಿಲ್ಲಾ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಹತ್ತು ಹಾಸಿಗೆ ಒಳಗೊಂಡ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ. ಅಗತ್ಯ ಔಷಧಿ ಲಭ್ಯವಿದೆ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ ಅವರು ಒಂದ ರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್, 17 ರಿಂದ ರಜೆ ಹಾಗೆಯೇ 6ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್, 24 ರಿಂದ ಬೇಸಿಗೆ ರಜೆ ಇದೆ ಎಂದು ತಿಳಿಸಿದರು.

ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇ ಶಕರಾದ ಕಾರ್ಯಪ್ಪ, ಜಿಲ್ಲಾ ಸರ್ವೇ ಕ್ಷಣಾಧಿಕಾರಿ ಡಾ.ಶಿವಕುಮಾರ್, ಆರ್‍ಸಿಎಚ್ ಅಧಿಕಾರಿ ಡಾ.ಗೋಪಿ ನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಇತರರು ಇದ್ದರು.

ಜಿಲ್ಲಾ-ತಾಲ್ಲೂಕು ಮಟ್ಟದಲ್ಲಿ ಕ್ಷಿಪ್ರ ಕಾರ್ಯಾಚರಣೆ ತಂಡ ರಚನೆ
ಮಡಿಕೇರಿ,ಮಾ.10-ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸುವ ಜಿಲ್ಲಾ ಕ್ಷಿಪ್ರ ಕಾರ್ಯಾ ಚರಣೆ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ತಿಳಿಸಿದ್ದಾರೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿ (9449843263), ಕೀಟಶಾಸ್ತ್ರ ಜ್ಞರು (9480730364). ಜಿಲ್ಲಾ ಅರೋಗ್ಯ ಮೇಲ್ವಿಚಾರಕರು, ಹಿರಿಯ ಆರೋಗ್ಯ ಸಹಾಯಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ (9483670172), ಜಿಲ್ಲಾ ಐಇಸಿ ವಿಭಾಗ (9900613682). ಡಿ.ಎನ್.ಒ (89717 82180), ಪ್ರಯೋಗಶಾಲಾ ತಂತ್ರಜ್ಞರು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ (9449476214), ಸಂಪರ್ಕಿಸಬಹುದಾಗಿದೆ.

ಕೊರೊನಾ ವೈರಸ್ ಸೋಂಕಿನ ಬಗ್ಗೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಕೊಡಗು ಜಿಲ್ಲೆಯ ಮೂರು ತಾಲ್ಲೂಕು ಗಳಲ್ಲಿಯೂ ತಾಲೂಕು ಕ್ಷಿಪ್ರ ಕಾರ್ಯಾಚರಣೆ ತಂಡವನ್ನು ರಚಿಸಲಾಗಿದ್ದು ಅವುಗಳ ವಿವರ ಇಂತಿದೆ.

ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲೂ ಕಿಗೆ ಸಂಬಂಧಿಸಿದಂತೆ, ತಾಲೂಕು ಆರೋಗ್ಯಾಧಿಕಾರಿ ಗಳು, ಬಿಎಚ್‍ಇಒ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ, ಹಿರಿಯ ಪುರುಷ ಆರೋಗ್ಯ ಸಹಾಯಕರು, ಪ್ರಯೋಗಾಶಾಲಾ ತಂತ್ರಜ್ಞರ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದ್ದಾರೆ.