ಕೊರೊನಾ ತಡೆಗೆ ನಿಯಮ ಪಾಲಿಸಲು ಸಲಹೆ
ಕೊಡಗು

ಕೊರೊನಾ ತಡೆಗೆ ನಿಯಮ ಪಾಲಿಸಲು ಸಲಹೆ

May 5, 2021

ವಿರಾಜಪೇಟೆ, ಮೇ 4- ಕೊರೊನಾ ವೈರಸ್ ದಿನೆ ದಿನೇ ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸುವ ಮೂಲಕ ಸರ್ಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು
ಕೋವಿಡ್-19 ಪ್ರಕರಣಗಳು ಲಾಕ್‍ಡೌನ್ ಸಂದರ್ಭದಲ್ಲಿಯೂ ಹೆಚ್ಚಾಗು ತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಬೋಪಯ್ಯ, ಇನ್ನು ಮುಂದೆ ವಿರಾಜಪೇಟೆ ಸಾರ್ವ ಜನಿಕ ಆಸ್ಪತ್ರೆಯನ್ನು 50 ಹಾಸಿಗೆವುಳ್ಳ ಕೋವಿಡ್ ಸೆಂಟರ್ ಆಗಿ ಪರಿವರ್ತಿಸ ಲಾಗುವುದು. ಸರಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನ ಹರಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಅಗತ್ಯ ಹಾಸಿಗೆ ಹಾಗೂ ಆಮ್ಲಜನಕ ಇರಬೇಕು. ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಕೊರೊನಾ ಸೋಂಕಿ ತರಿಗೆ ಅಗತ್ಯ ಔಷಧಿ ಮತ್ತು ಆರೋಗ್ಯ ಸೇವೆಯನ್ನು ಕಲ್ಪಿಸುವುದರೊಂದಿಗೆ ಮುನ್ನೆ ಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ ರಲ್ಲದೆ, ಸಾರ್ವಜನಿಕರು ಅಗತ್ಯ ವಸ್ತುಗಳಿಗೆ ಮಾತ್ರ ಪೇಟೆಗೆ ಬರಬೇಕು. ಅನಾವಶ್ಯಕವಾಗಿ ಸುತ್ತುವುದು ಕಂಡರೆ ಪೊಲೀಸರು ಕ್ರಮತೆಗೆದು ಕೊಳ್ಳುತ್ತಾರೆ. ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬರುವವರ ಬಗ್ಗೆ ಸಾರ್ವಜನಿಕರು ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಬೋಪಯ್ಯ ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಆರ್. ಯೋಗಾನಂದ, ತಾಲೂಕು ಆರೋಗ್ಯಾ ಧಿಕಾರಿ ಡಾ.ಯತಿರಾಜ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ವಿಶ್ವನಾಥ ಸಿಂಪಿ, ಡಿವೈಎಸ್‍ಪಿ ಜಯಕುಮಾರ್, ಕಾರ್ಯನಿರ್ವಹಣಾಧಿಕಾರಿ ಕೆ. ಅಪ್ಪಣ್ಣ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ವನಜಾಕ್ಷಿ, ನೋಡಲ್ ಅಧಿಕಾರಿ ಶಿವಕುಮಾರ್, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯಾಧಿಕಾರಿ ಹೇಮಂತ್ ಕುಮಾರ್, ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಜೂನಾ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Translate »