ಕೊರೊನಾ ಹಿನ್ನೆಲೆ: ಮೈಸೂರು ಜಿಲ್ಲೆಯಾದ್ಯಂತ  ಶಾಲಾ ಮಕ್ಕಳಿಗೆ ಆರ್‍ಟಿ-ಪಿಸಿಆರ್ ಟೆಸ್ಟ್
ಮೈಸೂರು

ಕೊರೊನಾ ಹಿನ್ನೆಲೆ: ಮೈಸೂರು ಜಿಲ್ಲೆಯಾದ್ಯಂತ ಶಾಲಾ ಮಕ್ಕಳಿಗೆ ಆರ್‍ಟಿ-ಪಿಸಿಆರ್ ಟೆಸ್ಟ್

October 6, 2021

ಮೈಸೂರು, ಅ. 5(ಆರ್‍ಕೆ)- ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಆರ್‍ಟಿ-ಪಿಸಿಆರ್ ಟೆಸ್ಟ್ ಮಾಡಿಸು ವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್, ಆರೋಗ್ಯ ಇಲಾಖೆ ಅಧಿಕಾರಿ ಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ‘ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ 6ರಿಂದ 10ನೇ ತರಗತಿಗಳು ಆರಂಭವಾಗಿದ್ದು, ದಸರಾ ನಂತರ ಉಳಿದ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿರುವುದರಿಂದ ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸಬೇಕಾಗಿರುವುದರಿಂದ ಶಾಲಾ ಮಕ್ಕಳಿಗೆ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ, ತಾಲೂಕು ಆರೋ ಗ್ಯಾಧಿಕಾರಿಗಳನ್ನು ಕೋರಿಕೊಂಡಿದ್ದೇನೆ ಎಂದರು.
ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಇಲ್ಲ, ಕೆಲವೆಡೆ ವೈರಲ್ ಫೀವರ್ ಇರುವ ಬಗ್ಗೆ ವರದಿಯಾಗಿದ್ದು, ಅಗತ್ಯ ಚಿಕಿತ್ಸೆ ನೀಡುವಂತೆಯೂ ಕೇಳಿಕೊಂಡಿದ್ದೇವೆ ಹಾಗೂ ಎಲ್ಲಾ ಶಾಲೆಗಳಲ್ಲಿ ಮಕ್ಕಳ ಆರೋಗ್ಯದ ಮೇಲೆ ಶಿಕ್ಷಕರು ನಿಗಾ ವಹಿಸುತ್ತಿದ್ದಾರಲ್ಲದೆ, ಸ್ಯಾನಿ ಟೈಸರ್‍ನಿಂದ ಕೈ ಸ್ವಚ್ಛಗೊಳಿಸುವುದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್-19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ ಎಂದು ರಾಮಚಂದ್ರರಾಜೇ ಅರಸ್ ತಿಳಿಸಿದರು.

ಆ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ಕೆ.ಹೆಚ್.ಪ್ರಸಾದ್, ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಅಲ್ಲಲ್ಲಿ ಡೆಂಗ್ಯೂ ಪಾಸಿಟಿವ್ ಪ್ರಕರಣ ವರದಿಯಾಗಿ ರುವುದರಿಂದ ಚಿಕಿತ್ಸೆ ನೀಡಿ ಗುಣಪಡಿಸಲಾಗು ತ್ತಿದೆ ಎಂದರು. ವೈರಲ್ ಫೀವರ್ ಕಾಣಿಸಿಕೊಳ್ಳು ವುದು ಈ ಸಮಯದಲ್ಲಿ ಸಾಮಾನ್ಯವಾಗಿದ್ದು, ಆರೋಗ್ಯ ಕಾರ್ಯಕರ್ತೆಯರು, ಸಿಬ್ಬಂದಿ ನಿಗಾ ವಹಿಸುತ್ತಿದ್ದಾರೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಪಾಸಣೆ ಮತ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದರು.

Translate »