ತಾಲೂಕಿನಲ್ಲಿ ಕೊರೊನಾ ಪ್ರಕರಣ ಗಣನೀಯ ಹೆಚ್ಚಳ ತಾಲೂಕು ಆಡಳಿತದ ಕಾರ್ಯವೈಖರಿಗೆ ಶಾಸಕರ ಅಸಮಾಧಾನ
ಮೈಸೂರು

ತಾಲೂಕಿನಲ್ಲಿ ಕೊರೊನಾ ಪ್ರಕರಣ ಗಣನೀಯ ಹೆಚ್ಚಳ ತಾಲೂಕು ಆಡಳಿತದ ಕಾರ್ಯವೈಖರಿಗೆ ಶಾಸಕರ ಅಸಮಾಧಾನ

May 4, 2021

ತಿ.ನರಸೀಪುರ, ಮೇ 3(ಎಸ್‍ಕೆ)- ತಾಲೂಕಿನಲ್ಲಿ ಕೊರೊನಾ ಪ್ರಕರಣ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಯಾವುದೇ ಕ್ರಮಕ್ಕೆ ಮುಂದಾಗದ ತಾಲೂಕು ಆಡಳಿತದ ಕಾರ್ಯವೈಖರಿಗೆ ಶಾಸಕ ಎಂ.ಅಶ್ವಿನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದಿರುವ ಬಗ್ಗೆ ಬೇಸರ ವ್ಯಕ್ತ ಪಡಿಸಿದ ಅವರು, ತಾಲೂಕಿನಲ್ಲಿ ದಿನ ದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ತಾಲೂಕು ಆಡಳಿತ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಕೊರೊನಾ ವೈರಾಣು ಸೂಕ್ಷ್ಮವಾದ ಸೋಂಕಾಗಿದ್ದು, ಅಧಿ ಕಾರಿಗಳಾರೂ ಸರಿಯಾಗಿ ಕೆಲಸದ ಮಾಡದೇ ಒಬ್ಬರ ಕಡೆ ಒಬ್ಬರು ಬೆಟ್ಟು ಮಾಡುತ್ತಾ ಕರ್ತವ್ಯ ಲೋಪ ಮಾಡು ತ್ತಿದ್ದೀರಾ ಎಂದು ಕಿಡಿಕಾರಿದರು.
ಇಂತಹ ಕಠಿಣ ಸನ್ನಿವೇಶದಲ್ಲಿ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿ ಕೆಲಸ ಮಾಡಬೇಕು. ಈವರೆಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ತಾಲೂಕು ಆಡಳಿತ ಮಾಡಿಲ್ಲ. ಅಧಿಕಾರಿಗಳಲ್ಲಿ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ. ಅಲ್ಲದೇ ಸಭೆಗೂ ಸಹ ಅಧಿಕಾರಿಗಳು ಗೈರಾಗಿರುವುದು ಸಹ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿ ಕಾರಿಗಳು ಸಮರ್ಪಕವಾಗಿ ಕೆಲಸ ಮಾಡ ದಿದ್ದರೆ ಶೋಕಾಸ್ ನೋಟಿಸ್ ನೀಡಬೇಕಾ ಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಗ್ರಾಮೀಣ ಭಾಗದಲ್ಲಿ ಪೆಟ್ಟಿಗೆ ಅಂಗಡಿ ಗಳಲ್ಲಿ ಮದ್ಯ ಮಾರಾಟದ ದೂರುಗಳು ಕೇಳಿ ಬಂದಿದ್ದು, ಅಬಕಾರಿ ಇಲಾಖೆಯವರು ಸೂಕ್ತ ಕ್ರಮವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಎಸಿ ವೆಂಕಟರಾಜು, ತಹಶೀಲ್ದಾರ್ ನಾಗೇಶ್, ಇಓ ಜೆರಾಲ್ಡ್ ರಾಜೇಶ್, ಸಿಡಿಪಿಓ ಬಸವರಾಜು, ಕಾವೇರಿ ನೀರಾವರಿ ನಿಗಮದ ಲಕ್ಷ್ಮಣರಾವ್, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ರವಿಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿ ಜಗನ್ನಾಥ್, ಪುರಸಭೆ ಮುಖ್ಯಾಧಿಕಾರಿ ಆರ್.ಅಶೋಕ್, ಬಿಇಓ ಮರಿಸ್ವಾಮಿ ಸೇರಿದಂತೆ ಮತ್ತಿತರರಿದ್ದರು.

Translate »