ಮೈಸೂರು, ಜೂ.14(ಎಂಟಿವೈ)- ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಹೆಚ್ಚಾಗುತ್ತಿದೆ ಯಾದರೂ ವೈರಸ್ ಶಕ್ತಿ ಕುಗ್ಗಿರುವ ಕಾರಣ ಮತ್ತೊಮ್ಮೆ ಲಾಕ್‍ಡೌನ್ ಮಾಡುವುದಿಲ್ಲ ಎಂದು ಸಚಿವ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
ಮೈಸೂರಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಸಹಜ ವಾಗಿ ಜನರಲ್ಲಿ ಆತಂಕ ನಿರ್ಮಾಣವಾಗಿದೆ. ಇದರ ನಡುವೆ ಮತ್ತೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡಲಾಗು ತ್ತದೆ ಎಂಬ ಚರ್ಚೆಯೂ ನಡೆಯುತ್ತಿದೆ. ಆದರೆ ವಾಸ್ತವ ವಾಗಿ ಮತ್ತೆ ಲಾಕ್‍ಡೌನ್ ಮಾಡುವ ಅನಿವಾರ್ಯತೆ ಇಲ್ಲ ಎಂದರು. ಈ ಹಿಂದೆ ತೀವ್ರ ಸ್ವರೂಪದ್ದಾಗಿದ್ದ ವೈರಸ್‍ನ ಸಾಮಥ್ರ್ಯ ಇದೀಗ ಕುಗ್ಗಿದೆ ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಮಾಡುವ ಪ್ರಮೇಯ ಉದ್ಭವಿಸದು ಎಂದರು. ಕೊರೊನಾ ಬಗ್ಗೆ ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿದೆ. ಬೇರೆ ರಾಜ್ಯಗಳಲ್ಲಿ ಹೇಗಿದೆಯೋ ಗೊತ್ತಿಲ್ಲ. ಆದರೆ ನಮ್ಮ ರಾಜ್ಯದಲ್ಲಿ ಸೋಂಕು ಹರಡದಂತೆ ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಂಡಿದೆ. ಮುಂಬೈನಲ್ಲಾದರೆ ಹೆಚ್ಚು ಜನಸಂಖ್ಯೆ ಇದೆ, ಶೇ.50ರಷ್ಟು ಕೊಳಚೆ ಪ್ರದೇಶವಿದೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಹೆಚ್ಚಿನ ಕೇಸ್ ಬರುತ್ತಿದೆ ಎಂದು ವಿವರಿಸಿದರು.
ರಾಜವಂಶಸ್ಥರ ಅಭಿಪ್ರಾಯ: ಕೆಆರ್‍ಎಸ್‍ನಲ್ಲಿ ಪ್ರತಿಮೆ ನಿರ್ಮಾಣದ ವಿವಾದ ಹಿನ್ನೆಲೆ ಯಲ್ಲಿ ರಾಜವಂಶಸ್ಥರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಭೇಟಿ ಮಾಡುತ್ತೇವೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯಕ್ಕೆ ಮೈಸೂರು ಅರಸರ ಕೊಡುಗೆ ಅಪಾರವಾಗಿದೆ. ಹಾಗೆ ವಿಶ್ವೇಶ್ವರಯ್ಯ ಅವರ ಕೊಡುಗೆ ನೀಡಿದ್ದಾರೆ. ಅವರೂ ಕೊಡುಗೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ 2-3 ದಿನಗಳಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.